ಬೆಳಗಾವಿಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್; ಪ್ರಚಾರಕ್ಕೆ ಹೋಗುತ್ತೇನೆ ಎಂದ ಮಂಗಳಾ ಅಂಗಡಿ

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆಯಾಗಿದೆ. ಆ ಮೂಲಕ ಕರ್ನಾಟಕದ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ಎಂಬ ಗೊಂದಲಕ್ಕೆ ತೆರೆಬಿದ್ದಿದೆ. ಬೆಳಗಾವಿ ಕ್ಷೇತ್ರದ ಟಿಕೆಟ್ ಜಗದೀಶ್ ಶೆಟ್ಟರ್​ ಅವರಿಗೆ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಶೆಟ್ಟರ್, ಪಕ್ಷದ ವರಿಷ್ಠರಿಗೆ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್; ಪ್ರಚಾರಕ್ಕೆ ಹೋಗುತ್ತೇನೆ ಎಂದ ಮಂಗಳಾ ಅಂಗಡಿ
ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮತ್ತು ಶೆಟ್ಟರ್ ಪರ ಪ್ರಚಾರ ನಡೆಸುವುದಾಗಿ ಹೇಳಿದ ಮಂಗಳಾ ಅಂಗಡಿ
Follow us
| Updated By: Rakesh Nayak Manchi

Updated on:Mar 24, 2024 | 10:32 PM

ಹುಬ್ಬಳ್ಳಿ, ಮಾ.24: ಬೆಳಗಾವಿ (Belagavi) ಲೋಕಸಭಾ ಕ್ಷೇತ್ರದ ಟಿಕೆಟ್ ನನಗೆ ಸಿಗುವ ವಿಶ್ವಾಸ ಇತ್ತು. ಪಕ್ಷದ ವರಿಷ್ಠರು ನನಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಕೆಲಸ ಮಾಡಲು ನನಗೆ ಅವಕಾಶ ಕೊಟ್ಟಿದ್ದಾರೆ. ಹೀಗಾಗಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ (Jagadish Shettar) ಹೇಳಿದ್ದಾರೆ.

ಬೆಳಗಾವಿ ಟಿಕೆಟ್ ಘೋಷಣೆ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶೆಟ್ಟರ್, ಬೆಳಗಾವಿಯಲ್ಲಿ ಮತ್ತೊಮ್ಮೆ ಬಿಜೆಪಿ ಗೆಲ್ಲಲಿದೆ. ಸುರೇಶ್ ಅಂಗಡಿ ಅವರ ಕೆಲಸ ಇನ್ನು ಬೆಳಗಾವಿ ಜನರಿಗೆ ನೆನಪಿದೆ. ಅವರ ಪತ್ನಿ ಮಂಗಳಾ ಅಂಗಡಿ ಕೂಡಾ ಉತ್ತಮ ಕೆಲಸ ಮಾಡಿದ್ದಾರೆ. ಬೆಳಗಾವಿಯ ಎಲ್ಲ ನಾಯಕರ ಜೊತೆ ನಾನು ಮಾತನಾಡಿದ್ದೇನೆ. ಯಾವುದೇ ಅಸಮಾಧಾನ ಇಲ್ಲ. ಎಲ್ಲವೂ ಸರಿ ಹೋಗಿದೆ. ಕಳೆದ ಒಂದು ವಾರದಿಂದ ನಾನು ಸ್ಥಳೀಯ ನಾಯಕರ ಜೊತೆ ಮಾತನಾಡಿದ್ದೇನೆ ಎಂದರು.

ಇದನ್ನೂ ಓದಿ: BJP candidates Fifth list: ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ, ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಕಣಕ್ಕೆ

ಪಕ್ಷದ ನಾಯಕರು ಹೆಚ್ಚಿನ ಕೆಲಸ ಮಾಡಲು ನನಗೆ ಅವಕಾಶ ಕೊಟ್ಟಿದ್ದಾರೆ. ನಾನು ನಾಳೆ ಅಥವಾ ನಾಡಿದ್ದು ಬೆಳಗಾವಿಗೆ ಹೋಗುತ್ತೇನೆ. ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದ ಜಗದೀಶ್ ಶೆಟ್ಟರ್, ನಾನು ವಿರೋಧ ‌ಪಕ್ಷದ ನಾಯಕನಿದ್ದಾಗ ಬೆಳಗಾವಿಯಲ್ಲಿ ತಳಮಟ್ಟದ ಸಂಘಟನೆ ಮಾಡಿದ್ದೇನೆ ಎಂದರು. ಕೇವಲ ಹಣದ ಮೇಲೆ ಚುನಾವಣೆ ನಡೆಯಲ್ಲ. ಇದು ಮೋದಿ ಅವರ ಚುನಾವಣೆ, ದೇಶದ ಚುನಾವಣೆ. ಹೀಗಾಗಿ ನಾನು ಗೆಲ್ಲುತ್ತೇನೆ ಎಂದರು.

ಮಂಗಲಾ ಅಂಗಡಿಗೆ ಫೋನ್ ಮಾಡಿದ ಜಿಪಿ ನಡ್ಡಾ

ಬೆಳಗಾವಿ ಹಾಲಿ ಸಂಸದೆ ಮಂಗಳಾ ಅಂಗಡಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ಇಂದು ಸಂಜೆ ಜೆಪಿ ನಡ್ಡಾ ಅವರು ಪೋನ್ ಮಾಡಿದ್ದರು. ನೀವೆಲ್ಲ ಬೆಂಬಲ ನೀಡಿ ಹೆಚ್ಚಿನ ಮತಗಳಿಂದ ಆಯ್ಕೆ ಎಂದು ಮನವಿ ಮಾಡಿದ್ದಾರೆ. ನಮ್ಮ ಕುಟುಂಬಕ್ಕೆ ಟಿಕೆಟ್ ಬೇಕು ಎಂದು ಕೇಳಿದ್ದೆವು. ನಮ್ಮ ಕುಟುಂಬಕ್ಕೇ ಟಿಕೆಟ್ ಸಿಕ್ಕಿದೆ. ಒಟ್ಟಾಗಿ ಕೆಲಸ ಮಾಡುತ್ತೇವೆ ಅಂತ ಹೇಳಿದ್ದೇನೆ ಎಂದರು.

ಐದು ಬಾರಿ ನಮಗೆ ಕಾರ್ಯಕರ್ತರು ಬಹಳ ಬೆಂಬಲ ನೀಡಿದರು. ಸುರೇಶ್ ಅಂಗಡಿಯವರಿಗೆ, ನನಗೆ ಸಪೋರ್ಟ್ ಮಾಡಿದಂತೆ ಜಗದೀಶ್ ಶೆಟ್ಟರ್ ಅವರಿಗೆ ಬೆಂಬಲ ನೀಡಬೇಕು. ಯಾರಿಗೆ ಟಿಕೆಟ್ ಕೊಟ್ಟರೂ ಒಗ್ಗಾಟ್ಟಾಗಿ ಮಾಡುತ್ತೇವೆ ಅಂತಾ ಹೇಳಿದ್ದೆವು. ಸುರೇಶ್ ಅಂಗಡಿಯವರಿಗೆ ಹೆಚ್ಚಿನ ಲೀಡ್​ನಲ್ಲಿ ಆಯ್ಕೆ ಮಾಡಿದ ರೀತಿಯಲ್ಲೇ ಶೆಟ್ಟರ್ ಅವರನ್ನ ಗೆಲ್ಲಿಸಿ ಎಂದು ಮನವಿ ಮಾಡಿದರು.

ಹೈಕಮಾಂಡ್ ನಿರ್ಧಾರದಂತೆ ಶೆಟ್ಟರ್ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಮೋದಿಯವರ ಒಳ್ಳೆಯ ಕೆಲಸ ಬಿಜೆಪಿ ಬೆಳಗಾವಿಯಲ್ಲಿ ಗೆಲ್ಲುತ್ತದೆ. ನಾನು ಕೂಡ ಪ್ರಚಾರಕ್ಕೆ ಹೋಗುತ್ತೇನೆ ಎಂದು ಮಂಗಳಾ ಅಂಗಡಿ ಹೇಳಿದರು. ಅಲ್ಲದೆ, ಹೈಕಮಾಂಡ್ ಬಳಿ ಈಗ ಎನೂ ಬೇಡಿಕೆ ಇಟ್ಟಿಲ್ಲ. ಮುಂದೆ ಮಕ್ಕಳಿಗೆ ಎನಾದರೂ ಆಗುತ್ತದೆ ನೋಡೋಣ ಎಂದರು.

ವರದಿ: ಸಹದೇವ್ ಮಾನೆ, ಬೆಳಗಾವಿ ಟಿವಿ9

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:31 pm, Sun, 24 March 24

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ