ಬೆಳಗಾವಿ ಬಿಜೆಪಿ-ಕಾಂಗ್ರೆಸ್ ಕಿತ್ತಾಟ: ಸಂಬಳವಿಲ್ಲದೆ ಪರದಾಡುತ್ತಿರುವ ಪೌರ ಕಾರ್ಮಿಕರು

ನೇಮಕಾತಿಗೆ ಅನುಮತಿ ಸಿಗುವ ಮುನ್ನವೇ 138 ಜನ ಪೌರಕಾರ್ಮಿಕರನ್ನು ನಿಯಮ ಉಲ್ಲಂಘಿಸಿ ನೇಮಕ‌ ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ‌ ಆರೋಪ ಮಾಡಿದ್ದರು. ಇತ್ತ ಬಿಜೆಪಿ ಶಾಸಕ ಅಭಯ್ ಪಾಟೀಲ್ ನಾವು ಅಕ್ರಮವಾಗಿ ನೇಮಕ ಮಾಡಿಲ್ಲ ಎಂದಿದ್ದಾರೆ. ಇವರಿಬ್ಬರ ಜಗಳದಲ್ಲಿ ಪೌರಕಾರ್ಮಿಕರು ಸಂಬಳ ಇಲ್ಲದೇ ಪರದಾಡುತ್ತಿದ್ದಾರೆ.

ಬೆಳಗಾವಿ ಬಿಜೆಪಿ-ಕಾಂಗ್ರೆಸ್ ಕಿತ್ತಾಟ: ಸಂಬಳವಿಲ್ಲದೆ ಪರದಾಡುತ್ತಿರುವ ಪೌರ ಕಾರ್ಮಿಕರು
ಬೆಳಗಾವಿ ಮಹಾನಗರ ಪಾಲಿಕೆ
Edited By: ವಿವೇಕ ಬಿರಾದಾರ

Updated on: Nov 08, 2023 | 12:13 PM

ಬೆಳಗಾವಿ ನ.08: ಬೆಳಗಾವಿ ಮಹಾನಗರ ಪಾಲಿಕೆ (Belagavi Municipal Corporation) ವಿಚಾರವಾಗಿ ಬಿಜೆಪಿ (BJP) ಮತ್ತು ಕಾಂಗ್ರೆಸ್​ (Congress) ನಾಯಕರ ನಡುವೆ ಕಿತ್ತಾಟ ಶುರುವಾಗಿದೆ. ಗಂಡ-ಹೆಂಡತಿ ಜಗಳದ ನಡುವೆ ಕೂಸು ಬಡವಾಯಿತು ಎಂಬಂತೆ, ಬಿಜೆಪಿ ಮತ್ತು ಕಾಂಗ್ರೆಸ್​ ನಯಕರ ಜಗಳದಲ್ಲಿ ಪೌರ ಕಾರ್ಮಿಕರು ಕಂಗಾಲ ಆಗಿದ್ದಾರೆ. ಹೌದು ಕಳೆದ ಒಂದು ವರ್ಷದಿಂದ ಸಂಬಳವಿಲ್ಲದೇ ಪೌರ ಕಾರ್ಮಿಕರ ಪರದಾಡುತ್ತಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯ 138 ಪೌರ ಕಾರ್ಮಿಕರಿಗೆ ಕಳೆದ ಒಂದು ವರ್ಷದಿಂದ ಸಂಭಳವೇ ನೀಡಿಲ್ಲ.

ನೇಮಕಾತಿಗೆ ಅನುಮತಿ ಸಿಗುವ ಮುನ್ನವೇ 138 ಜನ ಪೌರಕಾರ್ಮಿಕರನ್ನು ನಿಯಮ ಉಲ್ಲಂಘಿಸಿ ನೇಮಕ‌ ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ‌ ಆರೋಪ ಮಾಡಿದ್ದರು. ಇತ್ತ ಬಿಜೆಪಿ ಶಾಸಕ ಅಭಯ್ ಪಾಟೀಲ್ ನಾವು ಅಕ್ರಮವಾಗಿ ನೇಮಕ ಮಾಡಿಲ್ಲ ಎಂದಿದ್ದಾರೆ. ಇವರಿಬ್ಬರ ಜಗಳದಲ್ಲಿ ಪೌರಕಾರ್ಮಿಕರು ಸಂಬಳ ಇಲ್ಲದೇ ಪರದಾಡುತ್ತಿದ್ದಾರೆ.

ಹೀಗಾಗಿ ಪೌರ ಕಾರ್ಮಿಕರು ಸಂಬಳಕ್ಕಾಗಿ ಒತ್ತಾಯಿಸಿ ಕೆಲಸಕ್ಕೆ ಗೈರಾಗುತ್ತಿದ್ದಾರೆ. ಯಾರೋ ಮಾಡಿದ ತಪ್ಪಿಗಾಗಿ ದೀಪಾವಳಿ ಹಬ್ಬಕ್ಕೂ ದೀಪ ಬೆಳಗಿಸುವಷ್ಟು ಶಕ್ತಿ ಇಲ್ಲ ಅಂತ ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ರಾಜಕಾರಣದಲ್ಲಿ ಮತ್ತೆ ತಳಮಳ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದೆ. ಬಿಜೆಪಿ 138 ಪೌರ ಕಾರ್ಮಿಕರ ನೇಮಕಾತಿಯಲ್ಲಿ ಗೋಲ್ ನಡೆಸಿದ್ದಾರೆ. ಪೌರಕಾರ್ಮಿಕರ ನೇಮಕಾತಿಯಲ್ಲಿ ಪೌರ ಕಾರ್ಮಿಕರಿಂದ ದುಡ್ಡು ವಸೂಲಿ ಮಾಡಿದವರು ಯಾರು? ನಗರವನ್ನು ಸ್ವಚ್ಛ ಮಾಡುವ ಶ್ರಮಿಕಲನ್ನು ಇಕ್ಕಟ್ಟಿಗೆ ಸಿಲುಕಿಸಿದ ಮಹಾನುಭಾವರು ಯಾರು ? ಅವರ ವಿರುದ್ಧ ಬಿಜೆಪಿ ನಾಯಕರು ಕ್ರಮ ಏಕೆ ಕೈಗೊಳ್ಳುತ್ತಿಲ್ಲ? ಪೌರ ಕಾರ್ಮಿಕರಿಂದ ದುಡ್ಡು ವಸೂಲಿ ಮಾಡಲಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು.

ಈ ಹಿನ್ನಲೆಯಲ್ಲಿ ನಗರಾಭಿವೃದ್ಧಿ ಸಚಿವ ಹಾಗೂ ಪೌರಾಡಳಿತ ಸಚಿವರು ಇತ್ತೀಚಿಗೆ ಬೆಳಗಾವಿಗೆ ಬಂದು ಪಾಲಿಕೆ ಅಧಿಕಾರಿಗಳ ಜೊತೆ ಸಭೆ ಮಾಡಿ, ಪಾಲಿಕೆಯಲ್ಲಿ ನಡೆದಿರುವ ಪುಮಾದಗಳ ಬಗ್ಗೆ ಪಟ್ಟಿ ಮಾಡಿಕೊಂಡು ಹೋಗಿದ್ದು, 138 ಪೌರ ಕಾರ್ಮಿಕರ ನೇಮಕಾತಿ ವಿಚಾರ ಈಗ ಬಿಜೆಪಿಯನ್ನು ಇಟ್ಟಿಗೆ ಸಿಲುಕಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us