ಬೆಳಗಾವಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್​ಗೆ ಚಾಕು ಇರಿತ: ಕಾಂಗ್ರೆಸ್ ಎಂಎಲ್‌ಸಿ ಸೇರಿ ಐವರ ವಿರುದ್ಧ ಎಫ್​ಐಆರ್

ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯರೂ ಆಗಿರುವ ಶಾಸಕ ರಮೇಶ್ ಜಾರಕಿಹೊಳಿ ಅತ್ಯಾಪ್ತ ಪೃಥ್ವಿ ಸಿಂಗ್ ಮೇಲೆ ಸೋಮವಾರ ಸಂಜೆ ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ಆಪ್ತರು ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದರು. ಬೆಳಗಾವಿ ಜಿಲ್ಲೆಯ ಜಯನಗರದಲ್ಲಿ ಘಟನೆ ನಡೆದಿತ್ತು. ಇದೀಗ ಆರೋಪಿಗಳ ವಿರುದ್ಧ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಬೆಳಗಾವಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್​ಗೆ ಚಾಕು ಇರಿತ: ಕಾಂಗ್ರೆಸ್ ಎಂಎಲ್‌ಸಿ ಸೇರಿ ಐವರ ವಿರುದ್ಧ ಎಫ್​ಐಆರ್
ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ
Follow us
| Updated By: ಗಣಪತಿ ಶರ್ಮ

Updated on: Dec 05, 2023 | 5:42 PM

ಬೆಳಗಾವಿ, ಡಿಸೆಂಬರ್ 5: ಬಿಜೆಪಿ ಮುಖಂಡ ಪೃಥ್ವಿ ಸಿಂಗ್ (Pruthwi Singh) ಮೇಲೆ ಚಾಕು ಇರಿತ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ (Channaraj Hattiholi), ಅವರ ಇಬ್ಬರು ಆಪ್ತರು ಹಾಗೂ ಇಬ್ಬರು ಗನ್‌ಮ್ಯಾನ್‌ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 1860 (U/s 143, 147, 148, 323, 324, 379, 504, 506), ಅಟ್ರಾಸಿಟಿ ಕೇಸ್, ಐಪಿಸಿ ಸೆಕ್ಷನ್ 1989 (u/s-3(1), (r)(s), 3(2)(v-a), IPC 1860(u/s-149 ರಡಿ ಪ್ರಕರಣ ದಾಖಲಿಸಲಾಗಿದೆ.

ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ, ಆಪ್ತ ಸುಜಿತ್ ಜಾಧವ್, ಸದ್ದಾಂ, ಚನ್ನರಾಜ ಹಟ್ಟಿಹೊಳಿಯ ಇಬ್ಬರು ಗನ್‌ಮ್ಯಾನ್‌ಗಳ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಪೃಥ್ವಿ ಸಿಂಗ್ ಪುತ್ರ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಲಾಗಿದೆ.

ಪೃಥ್ವಿ ಸಿಂಗ್ ಮೇಲೆ ಸೋಮವಾರ ಚಾಕುವಿನಿಂದ ಇರಿಯಲಾಗಿತ್ತು. ಅದಾದ 18 ಗಂಟೆಗಳ ಬಳಿಕ, ಅಂದರೆ ಮಂಗಳವಾರ ಮಧ್ಯಾಹ್ನ ಆರೋಪಿಗಳ ವಿರುದ್ಧ ಪೃಥ್ವಿ ಸಿಂಗ್ ಪುತ್ರ ಎಪಿಎಂಸಿ ಠಾಣೆಗೆ ದೂರು ನೀಡಿದ್ದಾರೆ.

ನಡೆದಿದ್ದೇನು?

ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯರೂ ಆಗಿರುವ ಶಾಸಕ ರಮೇಶ್ ಜಾರಕಿಹೊಳಿ ಅತ್ಯಾಪ್ತ ಪೃಥ್ವಿ ಸಿಂಗ್ ಮೇಲೆ ಸೋಮವಾರ ಸಂಜೆ ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ಆಪ್ತರು ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದರು. ಬೆಳಗಾವಿ ಜಿಲ್ಲೆಯ ಜಯನಗರದಲ್ಲಿ ಘಟನೆ ನಡೆದಿತ್ತು. ಪೃಥ್ವಿ ಸಿಂಗ್​ ಅವರ ಕೈ ಹಾಗೂ ಬೆನ್ನಿಗೆ ಗಾಯಗಳಾಗಿದ್ದು, ಅವರನ್ನು ಬಳಿಕ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಬೆಳಗಾವಿ ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ಕೊನೆಗೂ ದೂರು ದಾಖಲು

ಘಟನೆಯು ಬಳಿಕ ರಾಜಕೀಯ ತಿರುವು ಪಡೆದುಕೊಂಡಿತ್ತು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್​ ಅಶೋಕ್ ಹಾಗೂ ಇತರ ಬಿಜೆಪಿ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದರು. ಇದರ ಬೆನ್ನಲ್ಲೇ ಪೃಥ್ವಿ ಸಿಂಗ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ