AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂಗೆ ಕಪ್ಪು ಬಟ್ಟೆ ತೋರಿಸಿದವರು ಅರೆಸ್ಟ್​: ಸಿಟಿ ರವಿ ರೀತಿ ಠಾಣೆಯಿಂದ ಠಾಣೆಗೆ ಅಲೆದಾಡಿಸುತ್ತಿರುವ ಪೊಲೀಸ್ರು

ಬೆಳಗಾವಿಯಲ್ಲಿ ಕಾಂಗ್ರೆಸ್‌ನ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ ಆರೋಪದ ಮೇಲೆ ಆರು ಮಂದಿ ಬಿಜೆಪಿ ಕಾರ್ಯಕರ್ತೆಯರನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಬಿಜೆಪಿ ಅಧ್ಯಕ್ಷೆ ಶಿಲ್ಪಾ ಕೇಕರೆ ಸೇರಿದಂತೆ ಆರು ಮಂದಿ ಕಾರ್ಯಕರ್ತೆಯರು ಸಿಎಂ ಹೇಳಿಕೆಗೆ ಪ್ರತಿಭಟನೆ ವ್ಯಕ್ತಪಡಿಸಿದ್ದರು. ಸಾರ್ವಜನಿಕ ಶಾಂತಿ ಭಂಗದ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

ಸಿಎಂಗೆ ಕಪ್ಪು ಬಟ್ಟೆ ತೋರಿಸಿದವರು ಅರೆಸ್ಟ್​: ಸಿಟಿ ರವಿ ರೀತಿ ಠಾಣೆಯಿಂದ ಠಾಣೆಗೆ ಅಲೆದಾಡಿಸುತ್ತಿರುವ ಪೊಲೀಸ್ರು
ಬೆಳಗಾವಿ ಬಿಜೆಪಿ ಕಾರ್ಯಕರ್ತೆಯರು
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Apr 28, 2025 | 7:54 PM

Share

ಬೆಳಗಾವಿ, ಏಪ್ರಿಲ್​ 28: ಕಾಂಗ್ರೆಸ್ (Congress) ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಕಪ್ಪು ಬಟ್ಟೆ (Black Cloth) ಪ್ರದರ್ಶನ ಮಾಡಿದ್ದ ಬೆಳಗಾವಿ (Belagavi) ಜಿಲ್ಲಾ ಬಿಜೆಪಿ (BJP) ಅಧ್ಯಕ್ಷೆ ಶಿಲ್ಪಾ ಕೇಕರೆ ಸೇರಿದಂತೆ ಆರು ಮಂದಿ ಕಾರ್ಯಕರ್ತೆಯರನ್ನು ಪೊಲೀಸರು (Police) ಬಂಧಿಸಿದ್ದಾರೆ. ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಕಾರ್ಯಕರ್ತೆಯರು ಟಿಳಕವಾಡಿ ಸಿಪಿಐ, ಬೆಳಗಾವಿ ‌ಕ್ಯಾಂಪ್ ಠಾಣೆ ಪಿಎಸ್​ಐ ಅವರ ವಶದಲ್ಲಿದ್ದರೆ. ಕಾರ್ಯಕರ್ತೆಯರನ್ನು ಕಾಕತಿ ಠಾಣೆಯಿಂದ ಮತ್ತೊಂದು ಠಾಣೆಗೆ ಪೊಲೀಸರು ಕರೆದುಕೊಂಡಿದ್ದಾರೆ. ಬಿಜೆಪಿ ಎಂಎಲ್​​ಸಿ ಸಿಟಿ ರವಿ ಮಾದರಿಯಲ್ಲಿ ಠಾಣೆಯಿಂದ ಠಾಣೆಗೆ ಪೊಲೀಸರು ಕಾರ್ಯಕರ್ತೆಯರನ್ನು ಕರೆದುಕೊಂಡು ಹೋಗುತ್ತಿದ್ದಾರೆ.

ಸಿಎಂ ಹೇಳಿಕೆಯಿಂದ ಬೇಸರವಾಗಿ ಕಪ್ಪು ಬಾವುಟ ಪ್ರದರ್ಶಿಸಿದ್ದೇವೆ: ಶಿಲ್ಪಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನ ಮತ್ತು ಉಗ್ರರ ಪರ ಮಾತನಾಡಿದ್ದಾರೆ. ಸಿಎಂ ಹೇಳಿಕೆಯಿಂದ ಬೇಸರವಾಗಿ ಕಪ್ಪು ಬಾವುಟ ಪ್ರದರ್ಶಿಸಿದ್ದೇವೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷೆ ಶಿಲ್ಪಾ ಹೇಳಿದರು.

ಇದನ್ನೂ ಓದಿ
Image
ಸಿದ್ದರಾಮಯ್ಯ ಹೇಳಿಕೆ ಬಳಿಕ ರಾಹುಲ್ , ಖರ್ಗೆ ವಿರುದ್ಧವೂ ಬಿಜೆಪಿ ಆಕ್ರೋಶ
Image
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
Image
ಪಹಲ್ಗಾಮ್​ ದಾಳಿ: ಪಾಕ್​ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ
Image
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ

ಇದನ್ನೂ ಓದಿ: ಭಾಷಣ ವೇಳೆ ಸಿದ್ದರಾಮಯ್ಯಗೆ ಕಪ್ಪು ಬಟ್ಟೆ ಪ್ರದರ್ಶನ: ಪೊಲೀಸ್ ಅಧಿಕಾರಿಯನ್ನು ವೇದಿಕೆ ಮೇಲೆ ಕರೆದು ಸಿಎಂ ತರಾಟೆ

ಸಾರ್ವಜನಿಕ ಶಾಂತಿಭಂಗ ಆಧಾರದ ಅಡಿ ಕೇಸ್: ಐಜಿಪಿ

ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನಾ ಸಭೆ ನಡೆಯುತ್ತಿತ್ತು. ಈ ವೇಳೆ ಕಪ್ಪು ಭಾವುಟ ತೋರಿಸಿದ್ದಾರೆ. ಕೆಲ ಘೋಷಣೆ ಕೂಗಿದ್ದಾರೆ. ಇದರಿಂದ ಸಭೆಗೆ ಅಡಚಣೆ ಆಗಿದೆ. ಜಿಲ್ಲಾ ಕಾಂಗ್ರೆಸ್ ಪಕ್ಷ ದೂರು ನೀಡಿದೆ. ಬಿಎನ್​ಎಸ್ ಸೆಕ್ಷನ್ 189, 352 ಅಡಿ ಸಾರ್ವಜನಿಕ ಶಾಂತಿಭಂಗ, ಹಾಗೂ ಪ್ರಚೋಧನೆ ಕೃತ್ಯ ಆಧಾರದ ಅಡಿ ಕೇಸ್ ದಾಖಲಾಗಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಚೇತನ್ ಸಿಂಗ್ ರಾಠೋಡ್ ಹೇಳಿದರು.

ಬಿಜೆಪಿ ಕಾರ್ಯಕರ್ತೆಯರಿಗೆ ಜಾಮೀನು

ಬಂಧಿತ ಆರು ಜನ ಬಿಜೆಪಿ ಕಾರ್ಯಕರ್ತೆಯರಿಗೆ ಬೆಳಗಾವಿ ಜಿಲ್ಲಾ ಕೋರ್ಟ್ ಜಾಮೀನು ನೀಡಿದೆ. ಬಿಜೆಪಿ ಕಾರ್ಯಕರ್ತೆಯರು ಪಕ್ಷದ ಕಚೇರಿಗೆ ಆಗಮಿಸುತ್ತಿದ್ದಂತೆ,  ನಾರಿ ಶಕ್ತಿ ಜಿಂದಾಬಾದ್ ಎಂದು ಕಾರ್ಯಕರ್ತರು  ಬರಮಾಡಿಕೊಂಡರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Mon, 28 April 25