ಜಗದೀಶ್ ಶೆಟ್ಟರ್​ಗೆ ಬೆಳಗಾವಿ ಬಿಜೆಪಿ ಟಿಕೆಟ್ ಫಿಕ್ಸ್; ಮಂಗಳಾ ಅಂಗಡಿಗೆ ನಿರಾಸೆ

ಧಾರವಾಡ ಮತ್ತು ಹಾವೇರಿ ಲೋಕಸಭಾ ಕ್ಷೇತ್ರಗಳ ಬಿಜೆಪಿ ಟಿಕೆಟ್ ಕೈತಪ್ಪಿದ್ದಿಂದ ಆತಂಕ ಹಾಗೂ ಗೊಂದಲಕ್ಕೀಡಾಗಿದ್ದ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಕ್ಷೇತ್ರದ ಟಿಕೆಟ್ ಖಚಿತವಾಗಿದೆ. ಆದರೆ, ಕ್ಷೇತ್ರದ ಬಿಜೆಪಿ ಟಿಕೆಟ್ ತಮ್ಮ ಮಕ್ಕಳಲ್ಲಿ ಒಬ್ಬರಿಗೆ ಕೊಡುವ ಉತ್ಸುಕತೆ ಹೊಂದಿದ್ದ ಸಂಸದೆ ಮಂಗಳಾ ಅಂಗಡಿ ಅವರಿಗೆ ನಿರಾಸೆಯಾಗಿದೆ. ಟಿಕೆಟ್ ವಿಚಾರವಾಗಿ ಮಾತುಕತೆಗೆಂದು ದೆಹಲಿಗೆ ಹೋಗಿದ್ದ ಅಂಗಡಿ ಅವರು ವಾಪಸ್ ಆಗಿದ್ದಾರೆ.

ಜಗದೀಶ್ ಶೆಟ್ಟರ್​ಗೆ ಬೆಳಗಾವಿ ಬಿಜೆಪಿ ಟಿಕೆಟ್ ಫಿಕ್ಸ್; ಮಂಗಳಾ ಅಂಗಡಿಗೆ ನಿರಾಸೆ
ಬೆಳಗಾವಿ ಬಿಜೆಪಿ ಟಿಕೆಟ್ ಜಗದೀಶ್ ಶೆಟ್ಟರ್​ಗೆ ಫಿಕ್ಸ್; ಮಂಗಳಾ ಅಂಗಡಿಗೆ ನಿರಾಸೆ
Follow us
ರಮೇಶ್ ಬಿ. ಜವಳಗೇರಾ
| Updated By: Rakesh Nayak Manchi

Updated on:Mar 15, 2024 | 11:42 AM

ಬೆಂಗಳೂರು, (ಮಾರ್ಚ್ 14): ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ (Jagadish Shettar) ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಇಂದು ಬಿಎಸ್ ಯಡಿಯೂರಪ್ಪ (BS Yediyurappa) ಅವರನ್ನು ಭೇಟಿ ಮಾಡಿ ಬೆಳಗಾವಿ (Belagavi) ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಹೇಗೆ ಎನ್ನುವ ಬಗ್ಗೆ ಚರ್ಚೆ ಮಾಡಿದ್ದಾರೆ. ಇದಕ್ಕೆ ಬಿಎಸ್​ವೈ ಸಹ ಸ್ಪರ್ಧೆ ಮಾಡಿ ಗೆಲ್ಲುತ್ತೀರಿ ಎಂದು ಹೇಳಿದ್ದಾಗಿ ತಿಳಿದುಬಂದಿದೆ. ಹೀಗಾಗಿ ಅಂತಿಮವಾಗಿ ಶೆಟ್ಟರ್ ಬೆಳಗಾವಿಯಿಂದ ಕಣಕ್ಕಿಳಿಯಲು ಸಮ್ಮತಿ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಶೆಟ್ಟರ್ ಬೆಳಗಾವಿ ಯಿಂದ ಸ್ಪರ್ಧೆ ಮಾಡಲು ಇಷ್ಟ ಇರಲಿಲ್ಲ. ನಾನು ಕರೆದು ಮಾತಾಡಿದ್ದೇನೆ. ಕೊನೆಗೆ ಅವರು ಬೆಳಗಾವಿಯಿಂದ ಸ್ಪರ್ಧೆ ಗೆ ಒಪ್ಪಿಕೊಂಡಿದ್ದಾರೆ. ಗೆಲ್ಲುತ್ತಾರೆ ಎಂದು ಹೇಳಿದ್ದಾರೆ.

ಬೆಳಗಾವಿ ಕ್ಷೇತ್ರದಿಂದ ಜಗದೀಶ್​ ಶೆಟ್ಟರ್​ ಅವರಿಗೆ ಬಿಜೆಪಿ ಟಿಕೆಟ್​ ಫಿಕ್ಸ್ ಆಗಿದೆ ಎಂದು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಂಗಳಾ ಅಂಗಡಿ ಹೇಳಿದ್ದಾರೆ. ದೆಹಲಿಯಿಂದ ವಾಪಸಾದ ಬಳಿಕ ಬೆಳಗಾವಿಯಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಎರಡನೇ ಲಿಸ್ಟ್​ನಲ್ಲಿ ನಮ್ಮ ಕುಟುಂಬದ ಹೆಸರು ಬರಲಿಲ್ಲ. ಹೀಗಾಗಿ ನಾವು ಹೈಕಮಾಂಡ್​​ ಭೇಟಿಯಾಗಲು ಹೋಗಿದ್ದೆವು. ಅಷ್ಟರೊಳಗೆ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೊಡುವ ವಿಚಾರ ನಡೆದಿತ್ತು. ಹೀಗಾಗಿ ದೆಹಲಿಯಿಂದ ವಾಪಸ್ ಆಗಿದ್ದೇವೆ. ಶೆಟ್ಟರ್ ಮೊದಲು ಬೆಳಗಾವಿಯಿಂದ ಬೇಡ ಎಂದು ಹೇಳಿದ್ದರು. ಆದರೆ ವರಿಷ್ಠರು ನೀವೇ ನಿಂತುಕೊಳ್ಳಬೇಕೆಂದು ಹೇಳಿದ್ದಾರೆ. ಶೆಟ್ಟರ್​ಗೆ ಟಿಕೆಟ್ ಕೊಟ್ಟರೆ ಅವರ ಜತೆ ಪ್ರಚಾರ ಮಾಡುತ್ತೇನೆ ಎಂದರು.

ಮಕ್ಕಳಿಗೆ ಸಿಗದ ಟಿಕೆಟ್; ಮಂಗಳಾ ಅಂಗಡಿಗೆ ನಿರಾಸೆ

ದಿವಂತ ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಅವರು ಚುನಾವಣಾ ಅಖಾಡಕ್ಕೆ ಇಳಿಯಲು ಪ್ರಯತ್ನಿಸಿದ್ದರು. ಅದರಂತೆ, ಪತಿ ನಿಧನದ ನಂತರ ನಡೆದ ಉಪ ಚುನಾವಣೆಯಲ್ಲಿ ಮಂಗಳಾ ಅಂಗಡಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ಬಾರಿ ಚುನಾವಣೆಯಲ್ಲಿ ಮಕ್ಕಳಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸಿದ್ದರು. ಈ ಬಗ್ಗೆ ಮಾತನಾಡಿದ ಮಂಗಳಾ ಅಂಗಡಿ,  ನನ್ನ ಮಕ್ಕಳಾದ ಶ್ರದ್ಧಾ ಅಥವಾ ಸ್ಪೂರ್ತಿ ಅವರಿಗೆ ಟಿಕೆಟ್ ಕೊಡಬೇಕು ಅನ್ನುವುದು ನನ್ನ ಆಸೆ ಆಗಿತ್ತು. ಟಿಕೆಟ್ ಸಿಗದಿರುವುದರಿಂದ ಸ್ವಲ್ಪ ನಿರಾಸೆಯಾಗಿದೆ ಎಂದರು.

ಇದನ್ನೂ ಓದಿ: ಜನರಿಗೆ ಬೇಡವಾದವರು ತನಗೆ ಬೇಕಾದವರಿಗೆ ಟಿಕೆಟ್: ಶೋಭಾಗೆ ಟಿಕೆಟ್ ಕೊಡ್ಸಿದ್ದಕ್ಕೆ ಬಿಎಸ್​​ವೈ ವಿರುದ್ಧ ಈಶ್ವರಪ್ಪ ಕಿಡಿ

ಶೆಟ್ಟರ್ ವಿರುದ್ಧ ಗೋ ಬ್ಯಾಕ್ ಶೆಟ್ಟರ್ ಅಭಿಯಾನ ವಿಚಾರವಾಗಿ ಮಾತನಾಡಿದ ಮಂಗಳಾ ಅಂಗಡಿ, ಟಿಕೆಟ್ ಮಿಸ್ ಆದಾಗ ಆರಂಭದಲ್ಲಿ ಈ ರೀತಿ ಆಗುವುದು ಸಹಜ. ಈಗಾಗಲೇ ಕಾರ್ಯಕರ್ತರು, ಶಾಸಕರ ಜತೆಗೆ ಶೆಟ್ಟರ್ ಅವರು ಮಾತಾಡಿದ್ದಾರೆ ಎಂದರು.

ಆತಂಕಕ್ಕೀಡಾಗಿದ್ದ ಜಗದೀಶ್ ಶೆಟ್ಟರ್

ಜಗದೀಶ್ ಶೆಟ್ಟರ್ ಅವರು ಧಾರವಾರ, ಹಾವೇರಿ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರು. ಆದ್ರೆ, ನಿನ್ನೆ ಬಿಜೆಪಿ ಹೈಕಮಾಂಡ್‌ ಬಿಡುಗಡೆ ಮಾಡಿದ್ದ ಪಟ್ಟಿಯಲ್ಲಿ ಶೆಟ್ಟರ್​ ಅವರ ಹೆಸರು ಇರಲಿಲ್ಲ. ಇದರಿಂದ ಜಗದೀಶ್ ಶೆಟ್ಟರ್​ ರಾಯಚೂರು ಪ್ರವಾಸ ಅರ್ಧಕ್ಕೆ ಮೊಟಕುಗೊಳಿಸಿ ವಾಪಸ್ ಹುಬ್ಬಳ್ಳಿಗೆ ಆಗಮಿಸಿದ್ದರು. ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್​ ಅವರಿಗೆ ದೂರವಾಣಿ ಕರೆ ಮಾಡಿ ಬೆಳಗಾವಿಯಿಂದ ಸ್ಪರ್ಧಿಸಿ ಅವಕಾಶ ಮಾಡಿಕೊಡುತ್ತೇವೆ ಎಂದು ಹೇಳಿದ್ದಾರೆ. ಇದರಿಂದ ಕೊಂಚ ಆತಂಕಕ್ಕೀಡಾದ ಶೆಟ್ಟರ್​ ಸ್ವಲ್ಪ ಸಮಯ ಕೊಡಿ ಯೋಚನೆ ಮಾಡಿ ತೀರ್ಮಾನಿಸುತ್ತೇನೆ ಎಂದು ಹೇಳಿದ್ದರು.

ಇದೀಗ ಜಗದೀಶ್ ಶೆಟ್ಟರ್​, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೆ ಏನಾಗಲಿದೆ? ಸಾಧಕ-ಬಾಧಕಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಬಿಎಸ್​ವೈ ಸಹ ಏನು ಆಗಲ್ಲ ಸ್ಪರ್ಧೆ ಮಾಡುವಂತೆ ಧೈರ್ಯ ತುಂಬಿದ್ದಾರೆ. ಈ ಹಿನ್ನೆಲೆಯಲ್ಲಿ ಅಂತಿಮವಾಗಿ ಶೆಟ್ಟರ್ ಬೆಳಗಾವಿಯಿಂದ ಕಣಕ್ಕಿಳಿಯಲು ಓಕೆ ಎಂದಿದ್ದಾರೆ.

ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಶೆಟ್ಟರ್‌ ಅವರು ಮಾತುಕತೆ ನಡೆಸಿದ್ದರು. ಈ ಬಗ್ಗೆ ಅಮಿತ್ ಶಾ (Amit Shah) ಅವರಿಗೆ ಸಂದೇಶ ಕಳಿಹಿಸಿ ಎಂದು ಜಗದೀಶ್ ಶೆಟ್ಟರ್, ಯಡಿಯೂರಪ್ಪನವರಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದ್ದು, ಮುಂದಿನ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್‌ಗೆ ಬೆಳಗಾವಿ ಕ್ಷೇತ್ರದ ಟಿಕೆಟ್ ಘೋಷಣೆಯಾಗುವುದು ಬಹುತೇಕ ನಿಶ್ಚಿತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:41 am, Fri, 15 March 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ