AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

28 ಕೃಷ್ಣಮೃಗಗಳ ಸಾವಿನ ಕೇಸ್​​​: ಗೊಂದಲ ಮೂಡಿಸಿರುವ ಅರಣ್ಯ ಅಧಿಕಾರಿಗಳ ಹೇಳಿಕೆ

ಬೆಳಗಾವಿಯ ಕಿತ್ತೂರು ಚನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣಮೃಗಗಳ ಸಾವಿನ ಪ್ರಕರಣ ಗಂಭೀರ ಸ್ವರೂಪ ಪಡೆದಿದೆ. ಅರಣ್ಯ ಅಧಿಕಾರಿಗಳು ಸಚಿವರಿಗೆ ಆಹಾರದಿಂದ ಉಂಟಾದ ಸಮಸ್ಯೆ ಎಂದು ಮಾಹಿತಿ ನೀಡಿದ್ದರೆ, ಮಾಧ್ಯಮಗಳಿಗೆ ಬ್ಯಾಕ್ಟೀರಿಯಾ ಸೋಂಕು ಎಂದಿದ್ದಾರೆ. ಎಫ್‌ಎಸ್‌ಎಲ್ ವರದಿಗೂ ಮುನ್ನ ನೀಡಿದ ಈ ಗೊಂದಲದ ಹೇಳಿಕೆಗಳು ಅನುಮಾನಕ್ಕೆ ಎಡೆಮಾಡಿಕೊಟ್ಟಿವೆ.

28 ಕೃಷ್ಣಮೃಗಗಳ ಸಾವಿನ ಕೇಸ್​​​: ಗೊಂದಲ ಮೂಡಿಸಿರುವ ಅರಣ್ಯ ಅಧಿಕಾರಿಗಳ ಹೇಳಿಕೆ
ಕೃಷ್ಣಮೃಗ
Sahadev Mane
| Edited By: |

Updated on:Nov 16, 2025 | 10:17 AM

Share

ಬೆಳಗಾವಿ, ನವೆಂಬರ್​ 16: ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣಮೃಗಗಳು ಮೃತಪಟ್ಟ ಪ್ರಕರಣ ವಿಚಾರವಾಗಿ ಅರಣ್ಯ ಸಚಿವ ಈಶ್ವರ್​ ಖಂಡ್ರೆ ಅವರ ದಿಕ್ಕನ್ನು ಅರಣ್ಯ ಇಲಾಖೆ ಅಧಿಕಾರಿಗಳು ತಪ್ಪಿಸಿದ್ರಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಆಹಾರದಿಂದ ಉಂಟಾದ ಸಮಸ್ಯೆಯಲ್ಲಿ ಕೃಷ್ಣ ಮೃಗಗಳ ಸಾವಾಗಿದೆ ಎಂದು ಸಚಿವರಿಗೆ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದರೆ, ಪ್ರಾಥಮಿಕ ಮಾಹಿತಿ ಪ್ರಕಾರ ಬ್ಯಾಕ್ಟೀರಿಯಾ ಇನ್ಫೆಕ್ಷನ್​ನಿಂದ ಅವು ಮೃತಪಟ್ಟಿವೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಎಫ್​​ಎಸ್​​ಎಲ್​ಗೂ ಸ್ಯಾಂಪಲ್​ ಕಳುಹಿಸಿದ್ದೇವೆ ಎಂದು ಹೇಳುತ್ತಿದ್ದು, ಪ್ರಯೋಗಾಲಯದ ವರದಿ ಬರುವ ಮುನ್ನವೇ ಬ್ಯಾಕ್ಟೀರಿಯಾ ಇನ್ಫೆಕ್ಷನ್​ ಎಂದು ಅಧಿಕಾರಿಗಳು ಹೇಳಿದ್ದೇಗೆ ಎನ್ನುವ ಪ್ರಶ್ನೆ ಉದ್ಭವಿಸಿದೆ.

ಇಂದು ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ

ಕೃಷ್ಣ ಮೃಗಗಳ ಸಾವು ಪ್ರಕರಣ ಸಂಬಂಧ ಇಂದು ಇಬ್ಬರು ವೈದ್ಯರಿಂದ ಮೂರು ಕೃಷ್ಣ ಮೃಗಗಳ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಬೆಂಗಳೂರಿನ ಬನ್ನೇರುಘಟ್ಟದಿಂದ ವೈದ್ಯರ ತಂಡ ಆಗಮಿಸಿದೆ. ಯಾವ ಕಾರಣಕ್ಕೆ ಕೃಷ್ಣಮೃಗಗಳು ಮೃತಪಟ್ಟಿವೆ ಅಂತಾ ಪ್ರಾಥಮಿಕ ತನಿಖೆ ನಡೆಸುವ ನಿಟ್ಟಿನಲ್ಲಿ 3 ಕೃಷ್ಣಮೃಗಗಳ ಕಳೇಬರದ ಪರಿಶೀಲನೆ ನಡೆಯಲಿದೆ. ಜೊತೆಗೆ ಒಂದು ವಾರದಿಂದ ನೀಡಿರುವ ಆಹಾರದ ಸ್ಯಾಂಪಲ್ ಕೂಡ ವೈದ್ಯರು ಪಡೆಯಲಿದ್ದಾರೆ. ಬದುಕುಳಿದ 10 ಕೃಷ್ಣಮೃಗಗಳ ಆರೋಗ್ಯ ತಪಾಸಣೆಯನ್ನೂ ಈ ವೇಳೆ ನಡೆಸಲಿದ್ದು, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ: ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳ ಅನುಮಾನಾಸ್ಪದ ಸಾವು

2 ದಿನಗಳ ಅಂತರದಲ್ಲಿ 28 ಕೃಷ್ಣ ಮೃಗಗಳ ಸಾವು

ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕೃಷ್ಣ ಮೃಗಗಳು ಸಾವಿಗೀಡಾಗಿವೆ. ಎರಡು ದಿನಗಳ ಅಂತರದಲ್ಲಿ ಒಟ್ಟು 28 ಕೃಷ್ಣ ಮೃಗಗಳು ಮೃತಪಟ್ಟಿರೋದು ಆತಂಕಕ್ಕೆ ಕಾರಣವಾಗಿದೆ. ನವೆಂಬರ್ 13 ರಂದು ಮೃಗಾಲಯದಲ್ಲಿನ 8 ಕೃಷ್ಣ ಮೃಗಗಳು ಪ್ರಾಣ ಕಳೆದುಕೊಂಡಿದ್ದವು. ಅವುಗಳ ಸಾವಿನ ಕಾರಣ ತಿಳಿಯಲು ಸ್ಯಾಂಪಲ್​​ ಅನ್ನು ಲ್ಯಾಬ್​ಗಗೆ ಕಳುಹಿಸಲಾಗಿತ್ತು. ಅದರ ವರದಿ ಬರುವ ಮುನ್ನವೇ ಮತ್ತೆ 20 ಕೃಷ್ಣ ಮೃಗಗಳು ಮೃತಪಟ್ಟಿದ್ದವು. ಕೃಷ್ಣ ಮೃಗಗಳು ನಿಗೂಢವಾಗಿ ಸಾವನ್ನಪ್ಪಿರುವುದು ಅರಣ್ಯ ಇಲಾಖೆಯವರ ಬೇಜವಾಬ್ದಾರಿಯಿಂದವಾ ಅಥವಾ ಕಾಯಿಲೆಯಿಂದನಾ ಎನ್ನುವ ಬಗ್ಗೆ ತನಿಖೆ ಮುಂದುವರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:01 am, Sun, 16 November 25