ಗಡಿ ಕಿರಿಕ್ ತೆಗೆದವರ ಮೇಲೆ ಸಮರ ಸಾರಿದ ಕನ್ನಡಿಗರು, ಪತರಗುಟ್ಟಿದ MES ಮಹಾರಾಷ್ಟ್ರ ನಾಯಕರ ಮೊರೆ: ಕೇಂದ್ರ ಮಧ್ಯೆಪ್ರವೇಶಕ್ಕೆ ಪವಾರ್ ಕರೆ

ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರ ಆಕ್ರೋಶ ಹಿನ್ನೆಲೆಯಲ್ಲಿ ಎಂಇಎಸ್ ಪುಂಡರು ಮಹಾರಾಷ್ಟ್ರ ನಾಯಕರ ಮೋರೆ ಹೋಗಿದ್ದಾರೆ. ಇದರಿಂದ ಶರದ್ ಪವರ್ ದಿಢೀರ್ ಸುದ್ದಿಗೋಷ್ಠಿ ನಡೆಸಿ ಕರ್ನಾಟಕ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.

ಗಡಿ ಕಿರಿಕ್ ತೆಗೆದವರ ಮೇಲೆ ಸಮರ ಸಾರಿದ ಕನ್ನಡಿಗರು, ಪತರಗುಟ್ಟಿದ MES ಮಹಾರಾಷ್ಟ್ರ ನಾಯಕರ ಮೊರೆ: ಕೇಂದ್ರ ಮಧ್ಯೆಪ್ರವೇಶಕ್ಕೆ ಪವಾರ್ ಕರೆ
Sharad Pawar
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 06, 2022 | 5:35 PM

ಮುಂಬೈ/ಬೆಳಗಾವಿ: ಬೆಳಗಾವಿ ಗಡಿ ಗಲಾಟೆ (Belagavi Border Dispute) ಬಗ್ಗೆ MES​​ ನಾಯಕರು ಕರೆ ಮಾಡಿ ತಿಳಿಸಿದ್ದಾರೆ. ಕರ್ನಾಟಕ ಸಿಎಂ ಹೇಳಿಕೆಯಿಂದಲೇ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಗಡಿ ವಿಚಾರವಾಗಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು. ಮುಂದಿನ 24 ಗಂಟೆಯಲ್ಲಿ ಶಾಂತ ವಾತಾವರಣ ನಿರ್ಮಾಣ ಮಾಡಿ. ಇಲ್ಲದಿದ್ದರೆ ನಾವೂ ತಾಳ್ಮೆ ಕಳೆದುಕೊಳ್ಳುತ್ತೇವೆ ಎಂದು ಎನ್​ಸಿಪಿ ನಾಯಕ ಶರದ್ ಪವಾರ್(Sharad Pawar), ಸಿಎಂ ಬೊಮ್ಮಾಯಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮನವಿ ಕೊಡಲು ಬಂದ ಎಂಇಎಸ್ ಪುಂಡರನ್ನ ವಶಕ್ಕೆ ಪಡೆದ ಪೊಲೀಸರು

ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರ ಆಕ್ರೋಶ ಹಿನ್ನೆಲೆಯಲ್ಲಿ ಎಂಇಎಸ್ ಪುಂಡರು ಮಹಾರಾಷ್ಟ್ರ ನಾಯಕರ ಮೋರೆ ಹೋಗಿದ್ದಾರೆ. ಶರದ್ ಪವಾರ್‌ಗೆ ಕರೆ ಮಾಡಿ ಮಾತಾಡಿ ಲಾರಿಗಳಿಗೆ ಕಲ್ಲು ತೂರಾಟದ ವಿಡಿಯೋ ಕಳುಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶರದ್ ಪವಾರ್, ಮುಂಬೈನಲ್ಲಿ ಇಂದು(ಡಿಸೆಂಬರ್ 06) ದಿಢೀರ್ ಸುದ್ದಿಗೋಷ್ಠಿ ನಡೆಸಿ, ಗಡಿ ವಿವಾದದಲ್ಲಿ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿದರು.

ಬೆಳಗಾವಿ ಗಲಾಟೆ ಬಗ್ಗೆ MES​​ ನಾಯಕರು ಕರೆ ಮಾಡಿ ತಿಳಿಸಿದ್ದಾರೆ. ಕರ್ನಾಟಕ ಸಿಎಂ ಹೇಳಿಕೆಯಿಂದಲೇ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಗಡಿ ವಿಚಾರವಾಗಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು. ಮುಂದಿನ 24 ಗಂಟೆಯಲ್ಲಿ ಶಾಂತ ವಾತಾವರಣ ನಿರ್ಮಾಣ ಮಾಡಿ. ಇಲ್ಲದಿದ್ದರೆ ನಾವೂ ತಾಳ್ಮೆ ಕಳೆದುಕೊಳ್ಳುತ್ತೇವೆ ಎಂದ ಶರದ್ ಪವಾರ್ ಎಚ್ಚರಿಕೆ ನೀಡಿದರು.

ಇದನ್ನೂ ಒದಿ: ಬಂದೇ ಬರುವೆ ಬೆಳಗಾವಿಗೆ ಎಂದ ಮಹಾ ಸಚಿವ ದೇಸಾಯಿ: ರೊಚ್ಚಿಗೆದ್ದ ಕನ್ನಡಿಗರಿಂದ ಮಹಾರಾಷ್ಟ್ರ ಲಾರಿಗಳು ಗ್ಲಾಸ್​ ಪೀಸ್​, ಪೀಸ್

ಏನಾದ್ರೂ ಅನಾಹುತವಾದ್ರೆ ಅದಕ್ಕೆ ಸಿಎಂ ಬೊಮ್ಮಾಯಿಯೇ ಕಾರಣ. MES ನಾಯಕರನ್ನು ಭೇಟಿಯಾಗಿ ಅವರ ಸಮಸ್ಯೆ ಬಗ್ಗೆ ತಿಳಿದುಕೊಳ್ಳುವೆ. ಈ ರೀತಿಯ ಘಟನೆಗಳು ದೇಶಕ್ಕೆ ಮಾರಕ. ಕರ್ನಾಟಕ ಸಿಎಂ ಬೊಮ್ಮಾಯಿ ಗಡಿ ವಿವಾದ ಆರಂಭ ಮಾಡಿದ್ದಾರೆ. ಮುಂದಿನ 48 ಗಂಟೆಯಲ್ಲಿ ಪ್ರಕರಣ ಮುಗಿಯದಿದ್ದರೆ ನಾನೇ ಬೆಳಗಾವಿಗೆ ಹೋಗಬೇಕಾಗುತ್ತೆ ಎಂದು ಶರದ್ ಪವಾರ್​ ಎಚ್ಚರಿಸಿದರು.

ಬೂದಿ ಮುಚ್ಚಿದ ಕೆಂಡದಂತಿರುವ ಕರ್ನಾಟಕ-ಮಹಾರಾಷ್ಟ್ರ ಗಡಿ (Maharashtra And Karnataka Border Dispute) ವಿವಾದ  ಧಗಧಗ ಅಂತಿದೆ. ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆಯಲ್ಲಿದೆ. ಈ ಸಮಯದಲ್ಲಿ ಕನ್ನಡಿಗರ ಸ್ವಾಭಿಮಾನ ಕೆಣಕಿದ ಮಹಾರಾಷ್ಟ್ರ ಸಚಿವರು, ನಾವು ಬೆಳಗಾವಿ ಬಂದೇ ಬರುತ್ತೇವೆ ಎಂದು ಸವಾಲ್​ ಹಾಕಿದ್ರು. ಇದಕ್ಕೆ ಕೆರಳಿ ಕೆಂಡವಾಗಿದ್ದ ಕನ್ನಡಿಗರು, ಬರ್ತೀರಾ ಬನ್ನಿ ಒಂದು ಕೈ ನೋಡೇ ಬಿಡೋಣ ಎಂದು ದೊಡ್ಡ ದಂಡು ಕಟ್ಟಿಕೊಂಡು ಬೆಳಗಾವಿ ಗಡಿಗೆ ನುಗ್ಗಿಯೇ ಬಿಟ್ಟಿದ್ದಾರೆ. ಇದರಿಂದ ಎಂಇಎಸ್(MES) ಪತರಗುಟ್ಟಿದ್ದು, ಮಹಾರಾಷ್ಟ್ರ ನಾಯಕರ ಮೋರೆ ಹೊಗಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:14 pm, Tue, 6 December 22

Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?