ಬೆಳಗಾವಿಯ ಗಡಿಯಲ್ಲಿ ಹೈಡ್ರಾಮಾ: ಮಹಾರಾಷ್ಟ್ರ ಸಚಿವರ ವಿರುದ್ಧವೇ ಶಿವಸೇನೆ ಕಾರ್ಯಕರ್ತರ ಆಕ್ರೋಶ

ಮಹಾರಾಷ್ಟ್ರದಿಂದ ಬೆಳಗಾವಿ ಗಡಿಗೆ ಆಗಮಿಸಿದ ಶಿವಸೇನೆ ಪುಂಡರು ಹೈಡ್ರಾಮ ನಡೆಸಿದ್ದು, ಮಹಾರಾಷ್ಟ್ರದ ಸಚಿವರ ವಿರುದ್ಧ ಮತ್ತು ಕರ್ನಾಟಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯ ಗಡಿಯಲ್ಲಿ ಹೈಡ್ರಾಮಾ: ಮಹಾರಾಷ್ಟ್ರ ಸಚಿವರ ವಿರುದ್ಧವೇ ಶಿವಸೇನೆ ಕಾರ್ಯಕರ್ತರ ಆಕ್ರೋಶ
ಬೆಳಗಾವಿಯ ಗಡಿಯಲ್ಲಿ ಹೈಡ್ರಾಮಾ: ಮಹಾರಾಷ್ಟ್ರ ಸಚಿವರ ವಿರುದ್ಧವೇ ಶಿವಸೇನೆ ಕಾರ್ಯಕರ್ತರ ಆಕ್ರೋಶ
Follow us
TV9 Web
| Updated By: Rakesh Nayak Manchi

Updated on: Dec 06, 2022 | 6:11 PM

ಬೆಳಗಾವಿ: ಇಂದು ಬೆಳಗಾವಿ ಜಿಲ್ಲೆಗೆ ಭೇಟಿ ನೀಡುವುದಾಗಿ ಹೇಳಿದ್ದ ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರು (Maharashtra border in charge ministers) ಕೊನೆಯ ಕ್ಷಣದಲ್ಲಿ ಜಿಲ್ಲಾ ಭೇಟಿ (Maharashtra ministers belagavi visit)ಯನ್ನು ರದ್ದುಗೊಳಿಸಿದ್ದರು. ಇದಕ್ಕೆ ಆಕ್ರೋಶಗೊಂಡಿರುವ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ (Uddhav Thackeray) ಬಣದ ಕಾರ್ಯಕರ್ತರು ಬೆಳಗಾವಿ ಗಡಿಗೆ ಆಗಮಿಸಿ ಮಹಾರಾಷ್ಟ್ರ ಸರ್ಕಾರ (Maharashtra Govt) ಮತ್ತು ಕರ್ನಾಟಕ ಸರ್ಕಾರದ (Karnataka Govt) ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಶಿವಸೇನೆಯ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ನೇತೃತ್ವದಲ್ಲಿ ಉದ್ಧವ್ ಠಾಕ್ರೆ ಬಣದ ಕಾರ್ಯಕರ್ತರು ಕೊಲ್ಹಾಪುರದಿಂದ ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್‌ಪೋಸ್ಟ್ ಸಮೀಪಕ್ಕೆ ಆಗಮಿಸಿ ಮಹಾರಾಷ್ಟ್ರ ಸಚಿವರ ವಿರುದ್ಧ, ಕರ್ನಾಟಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಬೆಳಗಾವಿ ಗಡಿಗೆ ನುಗ್ಗಲು ಯತ್ನಿಸಿದ್ದಾರೆ.

ಬೆಳಗಾವಿಯ ಗಡಿಯಲ್ಲಿ ಶಿವಸೇನೆ ಕಾರ್ಯಕರ್ತರ ಹೈಡ್ರಾಮಾ ನಡೆಸಿದ್ದು, ಮಹಾರಾಷ್ಟ್ರ ಸಚಿವರ ವಿರುದ್ಧವೇ ಶಿವಸೇನೆ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ನಗರಕ್ಕೆ ತೆರಳುವುದಾಗಿ ಹೇಳಿದ್ದ ಮಹಾರಾಷ್ಟ್ರದ ಸಚಿವರು ಜಿಲ್ಲೆಗೆ ಹೋಗದಿದ್ದಕ್ಕೆ ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ್, ದೇಸಾಯಿ ವಿರುದ್ಧ ಘೋಷಣೆ ಕೂಗಿದರಲ್ಲದೆ, ಸಚಿವರಿಗೆ ಬಳೆ, ಅರಿಶಿನ ಕುಂಕುಮ ತಂದಿದ್ದಾರೆ. ಇದೇ ವೇಳೆ ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿ ಗಡಿಯೊಳಗೆ ನುಸುಳಲು ಯತ್ನಿಸಿದ್ದಾರೆ. ಈ ವೇಳೆ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಕಾಗಲ್ ಪೊಲೀಸರು ವಶಕ್ಕೆ ಪಡೆದರು.

ಇದನ್ನೂ ಓದಿ: ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಎಂಟ್ರಿಗೆ ಅವಕಾಶ ನೀಡುವಂತೆ ಮನವಿ ಕೊಡಲು ಬಂದ ಎಂಇಎಸ್ ಪುಂಡರು ಪೊಲೀಸರ ವಶಕ್ಕೆ

ಸಿಎಂ ಬೊಮ್ಮಾಯಿ ಜೊತೆ ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್‌ ಚರ್ಚೆ

ಮಹಾರಾಷ್ಟ್ರದ ಸಚಿವರಿಗೆ ಪ್ರವೇಶ ನಿರ್ಬಂಧಿಸಿ‌ ಹಿರೇಬಾಗೇವಾಡಿ ಟೋಲ್​ಗೇಟ್ ಬಳಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಪ್ರತಿಭಟನೆ ನಡೆಸಿದ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿದರು. ಈ ವೇಳೆ ಹಿರೇಬಾಗೇವಾಡಿ ಬಳಿ‌ ಘಟನೆಯ ಬಗ್ಗೆ ಫಡ್ನವಿಸ್‌ ಅಸಮಾಧಾನ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರದಿಂದ ಬರುವ ವಾಹನಗಳಿಗೆ ರಕ್ಷಣೆ ನೀಡುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಫಡ್ನವಿಸ್‌ ಮನವಿ ಮಾಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ