ಬೆಳಗಾವಿ: ವರನ ತಾಯಿ ಕುರುಡಿ ಎಂದು ಮದ್ವೆ ಹಿಂದಿನ ದಿನ ಆತ್ಮಹತ್ಯೆ ಮಾಡಿಕೊಂಡ ವಧು
ಚಿಕ್ಕೋಡಿ ತಾಲೂಕಿನ ನವಲಿಹಾಳದಲ್ಲಿ 24 ವರ್ಷದ ಯುವತಿ ವರನ ತಾಯಿ ಕುರುಡು ಎಂದು ತಿಳಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳಗಾವಿ ಹುಡುಗನ ಜೊತೆ ಮೇ 25 ರಂದು ಮದುವೆ ನಿಶ್ಚಯವಾಗಿತ್ತು. ಆದರೆ ಹಿಂದಿನ ದಿನ ವಿಷಯ ತಿಳಿದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿ, ಮೇ 28: ವರನ ತಾಯಿ ಕುರುಡು ಎಂಬ ವಿಷಯ ತಿಳಿದು ಭಾವಿ ಸೊಸೆ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಚಿಕ್ಕೋಡಿ (Chikodi) ತಾಲೂಕಿನ ನವಲಿಹಾಳ ಗ್ರಾಮದಲ್ಲಿ ನಡೆದಿದೆ. ಶೃತಿ ಬುರಡ್(24) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಅರಿಶಿಣ ಕಾರ್ಯಕ್ರಮದ ದಿನದಂದೇ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಡಕಲಾಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ ಹುಡುಗನ ಜೊತೆಗೆ ಮೇ 25ರಂದು ಶೃತಿಗೆ ಮದುವೆ ನಿಶ್ಚಯವಾಗಿತ್ತು. ಆದರೆ ಮದುವೆಯ ಹಿಂದಿನ ದಿನ ಯುವತಿಗೆ ವರನ ತಾಯಿ ಕುರುಡು ಎಂಬ ವಿಷಯ ತಿಳಿದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು
ಮತ್ತೊಂದು ಪ್ರಕರಣದಲ್ಲಿ ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ಪಟ್ಟಣದ ಲಕ್ಷ್ಮಿ ನಗರದಲ್ಲಿ ನಡೆದಿದೆ. ಅಕಿಯಾರ್ ಝಾರೆ(10) ಮೃತ ಬಾಲಕ. ಕ್ರಿಕೆಟ್ ಆಡುವಾಗ ಬಾವಿಗೆ ಬಿದ್ದ ಚೆಂಡು ತರಲು ಹೋಗಿ ಕಾಲು ಜಾರಿ ಬಿದ್ದು ಅನಾಹುತ ಸಂಭವಿಸಿದೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ಹರಿದ ನೆತ್ತರು: ಓರ್ವನ ಬರ್ಬರ ಕೊಲೆ, ಮತ್ತೊಬ್ಬನಿಗೆ ತಲ್ವರ್ ಏಟು
ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಸಿ ಬಾಲಕನ ಮೃತ ದೇಹ ಹೊರ ತೆಗೆಯಲಾಗಿದೆ. ಬಾಲಕನ ಮೃತ ದೇಹ ಪತ್ತೆಯಾಗುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆನ್ ಲೈನ್ ಬೆಟ್ಟಿಂಗ್ನಲ್ಲಿ 14 ಸಾವಿರ ರೂ ಸೋತ ಯುವಕ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಆನ್ ಲೈನ್ ಬೆಟ್ಟಿಂಗ್ನಲ್ಲಿ 14 ಸಾವಿರ ರೂ ಸೋತ ಯುವಕನೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಬೀನ್ ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ರಾಬೀನ್, ಆನ್ ಲೈನ್ ಬೆಟ್ಟಿಂಗ್ನಲ್ಲಿ ಕೇವಲ 14 ಸಾವಿರ ರೂ. ಹಣ ಕಳೆದುಕೊಂಡಿದ್ದ. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಮುಂದಾಗಿದ್ದ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.
ಕೆಎಸ್ಆರ್ಟಿಸಿ ಬಸ್ ಡಿಕ್ಕಿ: ಬೈಕ್ನಲ್ಲಿದ್ದ ಇಬ್ಬರು ಸವಾರರ ಸಾವು
ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ಇಬ್ಬರು ಸವಾರರು ಸಾವನ್ನಪ್ಪಿರುವಂತಹ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಮತ್ತಿಹಳ್ಳಿ ಬಳಿ ದುರಂತ ಸಂಭವಿಸಿದೆ. ರಜನಿಕಾಂತ್(33) ಉಮೇಶ್(32) ಮೃತ ಬೈಕ್ ಸವಾರರು. ಘಟನಾ ಸ್ಥಳಕ್ಕೆ ಹೊನ್ನವಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇದನ್ನೂ ಓದಿ: ಪತಿ-ಪತ್ನಿ ಜಗಳದಲ್ಲಿ ಬಲಿಯಾಯ್ತು ಏನೂ ಅರಿಯದ ಮಗು: ಮಲತಂದೆ ಸೇರಿ ನಾಲ್ವರ ಬಂಧನ
ರಸ್ತೆ ಕಾಮಗಾರಿ ಹಿನ್ನೆಲೆ ಕಿರಿದಾದ ರಸ್ತೆಯಲ್ಲಿ ಇಕ್ಕಟ್ಟಿನಲ್ಲಿ ಸಂಚಾರ ಮಾಡುವ ಪರಿಸ್ಥಿತಿ ಹಿನ್ನೆಲೆ ಬೈಕ್ಗೆ ನೇರವಾಗಿ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದ್ದರಿಂದ ದುರಂತ ಸಂಭವಿಸಿದೆ. ಸರ್ಕಾರಿ ಬಸ್ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.







