Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಾಠಿ ಯುವಕರಿಂದ ಗೂಂಡಾಗಿರಿ: ಕನ್ನಡ ಮಾತನಾಡು ಅಂದಿದ್ದಕ್ಕೆ ಕಂಡಕ್ಟರ್​​ ಮೇಲೆ ಹಲ್ಲೆ

ಬೆಳಗಾವಿಯಲ್ಲಿ ಸರ್ಕಾರಿ ಬಸ್ ಕಂಡಕ್ಟರ್​ ಮೇಲೆ ಮರಾಠಿ ಯುವಕರು ಹಲ್ಲೆ ಮಾಡಿ, ಗೂಂಡಾಗಿರಿ ಮಾಡಿರುವಂತಹ ಘಟನೆ ನಡೆದಿದೆ. ಯುವತಿಯೊಬ್ಬಳು ಮರಾಠಿಯಲ್ಲಿ ಟಿಕೆಟ್ ಕೇಳಿದಾಗ ಕನ್ನಡದಲ್ಲಿ ಮಾತನಾಡುವಂತೆ ಕಂಡಕ್ಟರ್ ಕೇಳಿದ್ದಕ್ಕೆ ಹಲ್ಲೆ ಮಾಡಲಾಗಿದೆ. ಇನ್ನು ಹಲ್ಲೆಗೊಳಗಾದ ಕಂಡಕ್ಟರ್ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮರಾಠಿ ಯುವಕರಿಂದ ಗೂಂಡಾಗಿರಿ: ಕನ್ನಡ ಮಾತನಾಡು ಅಂದಿದ್ದಕ್ಕೆ ಕಂಡಕ್ಟರ್​​ ಮೇಲೆ ಹಲ್ಲೆ
ಮರಾಠಿ ಯುವಕರಿಂದ ಗೂಂಡಾಗಿರಿ: ಕನ್ನಡ ಮಾತನಾಡು ಅಂದಿದ್ದಕ್ಕೆ ಕಂಡಕ್ಟರ್​​ ಮೇಲೆ ಹಲ್ಲೆ
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on:Feb 21, 2025 | 5:08 PM

ಬೆಳಗಾವಿ, ಫೆಬ್ರವರಿ 21: ಸರ್ಕಾರಿ ಬಸ್‌ ಕಂಡಕ್ಟರ್​​ (Conductor) ಮೇಲೆ ಮರಾಠಿ ಯುವಕರಿಂದ ಗೂಂಡಾಗಿರಿ ಮಾಡಿದ್ದು, ಕನ್ನಡದಲ್ಲಿ ಮಾತನಾಡು ಅಂದಿದ್ದಕ್ಕೆ ಕಂಡಕ್ಟರ್​ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ತಾಲೂಕಿನ ಸುಳೇಬಾವಿ, ಬಾಳೇಕುಂದ್ರಿ ಗ್ರಾಮ ಮಧ್ಯೆ ಗಲಾಟೆ ನಡೆದಿದೆ. ಮಹದೇವ ಹಲ್ಲೆಗೊಳಗಾದ ಸರ್ಕಾರಿ ಬಸ್‌ ಕಂಡಕ್ಟರ್. ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಂಡಕ್ಟರ್ ಮಹದೇವಗೆ ಟಿಕೆಟ್ ಕೊಡುವಂತೆ ಯುವತಿ ಮರಾಠಿಯಲ್ಲಿ ಕೇಳಿದ್ದಾಳೆ. ಯುವತಿ ಜೊತೆ ಯುವಕ ಪ್ರಯಾಣ ಮಾಡುತ್ತಿದ್ದರಿಂದ 2 ಟಿಕೆಟ್ ಕೇಳಿದ್ದಳು. ನನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡಿ ಎಂದು ಕಂಡಕ್ಟರ್ ಮಹದೇವ ಹೇಳಿದ್ದಾರೆ.

ಇದನ್ನೂ ಓದಿ: ಅಂಕಲ್- ಆಂಟಿ ಲವ್ ಸ್ಟೋರಿಗೆ ಬಿಗ್​ ಟ್ವಿಸ್ಟ್​: ಒಬ್ಬನಿಗಾಗಿ ಇಬ್ಬರ ಮಹಿಳೆಯರ ಹೊಡೆದಾಟ

ಇಷ್ಟಕ್ಕೆ ಜನರನ್ನು ಕರೆಸಿ ಚಲಿಸುತ್ತಿರುವ ಬಸ್ ನಿಲ್ಲಿಸಿ ಕಂಡಕ್ಟರ್​ಗೆ ಹಲ್ಲೆ ಮಾಡಲಾಗಿದೆ. ಸದ್ಯ ಹಲ್ಲೆಗೊಳಗಾದ ಬಸ್‌ ಕಂಡಕ್ಟರ್‌ಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಸಿಪಿ ರೋಹನ್ ಜಗದೀಶ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಕಂಡಕ್ಟರ್‌ನಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಮಟ್ಕಾ ಅಡ್ಡೆಯ ಮೇಲೆ ರಾತ್ರೋರಾತ್ರಿ ಪೊಲೀಸರು ದಾಳಿ: 10 ಜನರ ಬಂಧನ

ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಹೊರವಲಯದಲ್ಲಿ ಮಟ್ಕಾ ಅಡ್ಡೆ ಮೇಲೆ ದಾಳಿ ನಡೆಸಿ 10 ಜನರನ್ನು ಪೊಲೀಸರು ಬಂಧಿಸಲಾಗಿದೆ. ಬಂಧಿತರ ಬಳಿ ಇದ್ದ 1.20 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಬಂಧಿತರು ಹಿಂಡಲಗಾ ಜೈಲಿಗೆ ಶಿಫ್ಟ್​ ಮಾಡಲಾಗಿದೆ. ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಗಂಡನನ್ನ ಹತ್ಯೆ ಮಾಡಿ ನದಿಗೆ ಎಸೆದ ಪತ್ನಿ

ಸಿಇಎನ್ ಪೊಲೀಸರ ಭರ್ಜರಿ ಕಾರ್ಯಾಚರಣೆ ಮಾಡಿ ಮಟ್ಕಾ ಅಡ್ಡೆಯ ಮೇಲೆ ರಾತ್ರೋರಾತ್ರಿ ದಾಳಿ ಮಾಡಿದ್ದಾರೆ. ಜಮೀನಿನಲ್ಲಿ ಶೆಡ್ ನಿರ್ಮಿಸಿದ್ದ ಗ್ಯಾಂಗ್ ಐದು ಟೇಬಲ್ ಹಾಕಿ ಮಟ್ಕಾ ಬರೆದುಕೊಳ್ಳುತ್ತಿದ್ದರು. ಮಟ್ಕಾ ಬರೆದುಕೊಳ್ಳುವಾಗಲೇ ಪೊಲೀಸರು ದಾಳಿ ಮಾಡಿ ಹತ್ತು ಜನರನ್ನು ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:06 pm, Fri, 21 February 25

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ