ಶ್ರೀರಾಮಸೇನೆ ಬೆಳಗಾವಿ ಜಿಲ್ಲಾಧ್ಯಕ್ಷರ ಮೇಲೆ ಫೈರಿಂಗ್ ಪ್ರಕರಣ; ಆರೋಪಿಗಳಿಗಾಗಿ ಗೋವಾ, ಮಹಾರಾಷ್ಟ್ರದಲ್ಲಿ ಶೋಧ

ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿರುವ ಘಟನೆ ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿ ನಡೆದಿದೆ. ಗಾಯಾಳು ರವಿ ಕೋಕಿತಕರ್​ಗೆ ಚಿಕಿತ್ಸೆ ಮುಂದುವರಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಶ್ರೀರಾಮಸೇನೆ ಬೆಳಗಾವಿ ಜಿಲ್ಲಾಧ್ಯಕ್ಷರ ಮೇಲೆ ಫೈರಿಂಗ್ ಪ್ರಕರಣ; ಆರೋಪಿಗಳಿಗಾಗಿ ಗೋವಾ, ಮಹಾರಾಷ್ಟ್ರದಲ್ಲಿ ಶೋಧ
ಬೆಳಗಾವಿ: ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಮೋದ್ ಮುತಾಲಿಕ್
Follow us
TV9 Web
| Updated By: Rakesh Nayak Manchi

Updated on:Jan 08, 2023 | 12:08 PM

ಬೆಳಗಾವಿ: ಶ್ರೀರಾಮಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ (Shriram Sena Belagavi district president) ರವಿ ಕೋಕಿತಕರ್ ಮೇಲೆ ನಡೆದ ಗುಂಡಿನ ದಾಳಿ (Firing) ಪ್ರಕರಣ ಸಂಬಂಧ ಆರೋಪಿಗಳ ಬಂಧನಕ್ಕೆ ಪೊಲೀಸರ ವಿಶೇಷ ತಂಡ ರಚಿಸಲಾಗಿದೆ. ನಾಲ್ಕು ಪ್ರತ್ಯೇಕ ತಂಡ ರಚನೆ ಮಾಡಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. ಒಂದು ತಂಡ ಗೋವಾ, ಮತ್ತೊಂದು ತಂಡ ಮಹಾರಾಷ್ಟ್ರಕ್ಕೆ ತೆರಳಿಗೆ ತೀವ್ರ ಶೋಧ ನಡೆಸುತ್ತಿದ್ದು, ಮತ್ತೆರಡು ತಂಡಗಳು ಜಿಲ್ಲೆಯಲ್ಲಿ ಶೋಧ ಕಾರ್ಯ ನಡೆಸುತ್ತಿದೆ. ಇನ್ನು, ಘಟನೆಯಲ್ಲಿ ಗಾಯಗೊಂಡ ಗಾಯಾಳು ರವಿ ಕೋಕಿತಕರ್, ಚಾಲಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅದರಂತೆ ಆಸ್ಪತ್ರೆಗೆ ಭೇಟಿ ನೀಡಿದ ಶ್ರೀರಾಮಸೇನೆ ಸಂಸ್ಥಾಪಕ ಮುತಾಲಿಕ್ ಅವರು ಆರೋಗ್ಯ ವಿಚಾರಿಸಿದರು.

ಏನಿದು ಪ್ರಕರಣ?

ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಇಬ್ಬರು ಅಪರಿಚಿತರು ಗುಂಡಿನ ದಾಳಿ ನಡೆದಿರುವ ಘಟನೆ ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿ ನಡೆ ನಿನ್ನೆ ನಡೆದಿತ್ತು. ಘಟನೆಯಲ್ಲಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್, ಕಾರು ಚಾಲಕ ಮನೋಜ್ ದೇಸೂರಕರ್‌ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿಲಾಯಿತು. ರವಿ ಕೋಕಿತಕರ್ ಕಾರಿನಲ್ಲಿ ಬೆಳಗಾವಿಯಿಂದ ಹಿಂಡಲಗಾ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಹಿಂಡಲಗಾ ಗ್ರಾಮದ ಬಳಿ ರೋಡ್ ಹಂಪ್​​​​ನಲ್ಲಿ ಕಾರು ನಿಧಾನವಾಗಿದೆ. ಈ ವೇಳೆ ಅಪರಿಚಿತರು ಫೈರಿಂಗ್ ಮಾಡಿದ್ದರು. ಇದರಿಂದ ಗುಂಡು ರವಿ ಗದ್ದಕ್ಕೆ ತಗುಲಿ ಬಳಿಕ ಚಾಲಕನ ಕೈಗೆ ತಗುಲಿತ್ತು.

ಇದನ್ನೂ ಓದಿ: ಯುವಕನಿಂದ ಅಪ್ರಾಪ್ತ ಬಾಲಕನ ಅಪಹರಣ: ಕಾರಣ ಕೇಳಿ ದಂಗಾದ ಪೊಲೀಸರು

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ರವಿ ಕೋಕಿತಕರ್ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆ ಬಳಿ ಹಿಂದೂಪರ ಕಾರ್ಯಕರ್ತರ ಜಮಾವಣೆಯಾಗಿದ್ದು, ಆಸ್ಪತ್ರೆಗೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಖಾಸಗಿ ಆಸ್ಪತ್ರೆ ಬಳಿ ಒಂದು KSRP ತುಕಡಿ ನಿಯೋಜನೆ ಮಾಡಲಾಗಿದೆ. ಸದ್ಯ ರವಿ ಕೋಕಿತಕರ್ ಪ್ರಾಣಾಪಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಮನೋಜ್ ದೇಸೂರಕರ್‌ಗೂ ಚಿಕಿತ್ಸೆ ಮುಂದುವರಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Sun, 8 January 23