ಬೆಳಗಾವಿ ಪಾಲಿಕೆ ಸೂಪರ್ ಸೀಡ್: ಅಭಯ್​​ ಪಾಟೀಲ್​, ಸತೀಶ ಜಾರಕಿಹೊಳಿ ಮಧ್ಯೆ ವಾಗ್ಯುದ್ಧ

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇತ್ತೀಚಿಗೆ ತೆರಿಗೆ ಹೆಚ್ಚಳ ಮಾಡಿ ಠರಾವು ಹೊರಡಿಸಲಾಗಿತ್ತು. ಠರಾವು ಪ್ರತಿಯನ್ನು ಪಾಲಿಕೆ ಆಯುಕ್ತ ಅಶೋಕ ದುಡದುಂಟಿ ತಿದ್ದುಪಡಿ ಮಾಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆಯುಕ್ತ ಅಶೋಕ ದುಡದುಂಟಿ ವಿರುದ್ಧ ಯುಪಿಎಸ್ಸಿಗೆ ಪತ್ರ ಬರೆಯುತ್ತೇನೆ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೇಳಿದ್ದರು.

ಬೆಳಗಾವಿ ಪಾಲಿಕೆ ಸೂಪರ್ ಸೀಡ್: ಅಭಯ್​​ ಪಾಟೀಲ್​, ಸತೀಶ ಜಾರಕಿಹೊಳಿ ಮಧ್ಯೆ ವಾಗ್ಯುದ್ಧ
ಶಾಸಕ ಅಭಯ ಪಾಟೀಲ, ಸಚಿವ ಸತೀಶ ಜಾರಕಿಹೊಳಿ
Follow us
| Updated By: ವಿವೇಕ ಬಿರಾದಾರ

Updated on: Oct 22, 2023 | 9:50 AM

ಬೆಳಗಾವಿ ಅ.22: ಬೆಳಗಾವಿ ಮಹಾನಗರ ಪಾಲಿಕೆ (Belagavi City Corporation) ಸೂಪರ್ ಸೀಡ್ ವಿಚಾರವಾಗಿ ಸಚಿವ ಹಾಗೂ ಶಾಸಕರ ನಡುವೆ ಬಿಗ್ ಫೈಟ್ ನಡೆದಿದೆ. ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡದುಂಟಿ ವಿರುದ್ಧ ಯುಪಿಎಸ್ಸಿಗೆ ಪತ್ರ ಬರೆಯುತ್ತೇನೆ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ (Abhay Patil) ಹೇಳಿದ್ದರು. ಈ ವಿಚಾರವಾಗಿ ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ (Satish Jarkiholi) ಯುಪಿಎಸ್ಸಿಗೆ ಪತ್ರ ಬರೆದರೇ ಪಾಲಿಕೆ ಸೂಪರ್ ಸೀಡ್ ಮಾಡುತ್ತೇವೆ ಎಂದಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇತ್ತೀಚಿಗೆ ತೆರಿಗೆ ಹೆಚ್ಚಳ ಮಾಡಿ ಠರಾವು ಹೊರಡಿಸಲಾಗಿತ್ತು. ಠರಾವು ಪ್ರತಿಯನ್ನು ಪಾಲಿಕೆ ಆಯುಕ್ತ ಅಶೋಕ ದುಡದುಂಟಿ ತಿದ್ದುಪಡಿ ಮಾಡಿರುವ ಆರೋಪ ಕೇಳಿಬಂದಿದೆ.

ಮಹಾನಗರ ಪಾಲಿಕೆ 2023-24 ಸಾಲಿಗೆ ಅನ್ವಯ ಆಗುವಂತೆ ತೆರಿಗೆ ಹೆಚ್ಚಳ ಮಾಡಿದೆ. ಆದರೆ 2024-25 ಸಾಲಿನ ತೆರಿಗೆ ಹೆಚ್ಚಳ ಎಂದು ಪಾಲಿಕೆ ಆಯುಕ್ತ ಅಶೋಕ ದುಡದುಂಟಿ ರಾಜ್ಯ ಸರ್ಕಾರ ಪತ್ರ ರವಾನೆ ಮಾಡಿದ್ದರು. ಈ ವಿಚಾರವಾಗಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಹಾಗೂ ಸದಸ್ಯರು ಸರ್ಕಾರದ ದಿಕ್ಕು ತಪ್ಪಿಸಿ ಬೆಳಗಾವಿ ಮಹಾನಗರ ಪಾಲಿಕೆ ಸೂಪರ್ ಸೀಡ್​ಗೆ ಯತ್ನಿಸಲಾಗುತ್ತಿದೆ ಎಂದು ಆರೋಪ ಮಾಡಿದ್ದರು. ಪಾಲಿಕೆ ಆಯುಕ್ತ ಅಶೋಕ ದುಡದುಂಟಿಗೆ ಕೆಲ ದಿನಗಳಲ್ಲಿ ಪ್ರಮೋಷನ್ ಸಿಗಲಿದೆ. ಪಾಲಿಕೆ ಆಯುಕ್ತ ಅಶೋಕ ದುಡದುಂಟಿ ಕೆಎಎಸ್​ನಿಂದ ಐಎಎಸ್ ಪ್ರಮೋಷನ್ ಆಗಲಿದೆ.

ಇದನ್ನೂ ಓದಿ: ಬೆಳಗಾವಿ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಗದ್ದಲ, ಅಖಾಡಕ್ಕಿಳಿದ ಸತೀಶ್ ಜಾರಕಿಹೊಳಿ

ಯುಪಿಎಸ್ಸಿಗೆ ಪತ್ರ ಬರೆಯುವ ಮೂಲಕ ಪ್ರಮೋಷನ್ ತಡೆಯಲು ಅಭಯ್ ಪಾಟೀಲ್​ ಯತ್ನಿಸಿದ್ದಾರೆ. ಶಾಸಕ ಅಭಯ ಪಾಟೀಲ್ ಪತ್ರ ಬರೆದರೇ ಅದನ್ನೇ ಇಟ್ಟುಕೊಂಡು ಪಾಲಿಕೆ ಸೂಪರ್ ಸೀಡ್ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಮತ್ತು ಸದಸ್ಯರಿಗೆ ಸಚಿವ ಸತೀಶ್ ಜಾರಕಿಹೊಳಿ ನೇರವಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಕಡತ ಮಿಸ್

ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಕಡತ ಕಾಣೆಯಾಗಿವೆ. ಆಸ್ತಿ ಕರ ಹೆಚ್ಚಳ ಮಾಡುವ ಕುರಿತು ಸಹಿ ಮಾಡಿದ್ದ, ಸಾಮಾನ್ಯ ಸಭೆಯಲ್ಲಿ ಅಂಗೀಕಾರವಾಗಿ ಸರ್ಕಾರಕ್ಕೆ ಕಳುಹಿಸಬೇಕಿದ್ದ ದಾಖಲೆ ಕಳ್ಳತನವಾಗಿದೆ. ಈ ಪ್ರಕರಣವನ್ನು ಸತೀಶ್​ ಜಾರಕಿಹೊಳಿ ಗಂಭೀರವಾಗಿ ತೆಗೆದುಕೊಂಡಿದ್ದು, ಖುದ್ದು ಮಹಾನಗರ ಪಾಲಿಕೆಗೆ ಅಗಮಿಸಿ ಖಡತ ಮಿಸ್ ಆದ ಬಗ್ಗೆ ಚರ್ಚೆ ನಡೆಸಿ, ಇಂದು 12 ಗಂಟೆ ಒಳಗಾಗಿ ಮೇಯರ್ ಸಹಿ ಮಾಡಿದ ದಾಖಲೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಳಿಕ ಸತೀಶ್​ ಜಾರಕಿಹೊಳಿ ಮಾರ್ಕೆಟ್ ಠಾಣೆ ಎಸಿಪಿ, ಸಿಪಿಐ ಇಬ್ಬರನ್ನೂ ಪಾಲಿಕೆಗೆ ಕರೆಯಿಸಿಕೊಂಡು, ತನಿಖೆಗೆ ಸೂಚನೆ ನೀಡಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ