ಬೆಳಗಾವಿ ಗುಂಪು ಘರ್ಷಣೆ: ಕಲ್ಲು ತೂರಾಟ, ತಲ್ವಾರ್ ಪ್ರದರ್ಶಿಸಿದವರ ವಿರುದ್ಧ ಎಫ್​ಐಆರ್​​, 10 ಮಂದಿಯ ಬಂಧನ

ಬೆಳಗಾವಿಯ ಅಳ್ವಾನ್​​ನ ಆದರ್ಶ ಮರಾಠ ವಿದ್ಯಾಮಂದಿರ ಶಾಲೆ ಗ್ರೌಂಡ್​ನಲ್ಲಿ ಗುರುವಾರ ಸಂಜೆ 4.30ಕ್ಕೆ ಅಪ್ರಾಪ್ತರು ಕ್ರಿಕೆಟ್ ಆಟ ಆಡಿದ್ದರು. ನಂತರ ಗೆದ್ದ ತಂಡದ ಮೇಲೆ ಮತ್ತೊಂದು ತಂಡದಿಂದ ಹಲ್ಲೆ ನಡೆದಿತ್ತು. ಘರ್ಷಣೆ ಮುಂದುವರಿದು ಸಂಜೆ 6 ಗಂಟೆಗೆ ಒಂದು ಯುವಕರ ಗುಂಪು ಕಲ್ಲು ತೂರಾಟ ಮಾಡಿತ್ತು. ಆಮೇಲೆ ಏನಾಯ್ತು ಎಂಬುದನ್ನು ತಿಳಿಯಲು ಮುಂದೆ ಓದಿ.

ಬೆಳಗಾವಿ ಗುಂಪು ಘರ್ಷಣೆ: ಕಲ್ಲು ತೂರಾಟ, ತಲ್ವಾರ್ ಪ್ರದರ್ಶಿಸಿದವರ ವಿರುದ್ಧ ಎಫ್​ಐಆರ್​​, 10 ಮಂದಿಯ ಬಂಧನ
ಘಟನಾ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ
Follow us
Sahadev Mane
| Updated By: Ganapathi Sharma

Updated on:May 24, 2024 | 9:45 AM

ಬೆಳಗಾವಿ, ಮೇ 24: ಬೆಳಗಾವಿ (Belagavi) ನಗರದ ಅಳ್ವಾನ್ ಗಲ್ಲಿಯಲ್ಲಿ ನಡೆದ ಗುಂಪು ಘರ್ಷಣೆ ಸಂಬಂಧ ಶಹಾಪುರ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಮುಸ್ಲಿಮ್ ಮತ್ತು ಹಿಂದೂ ಯುವಕರ ಮೇಲೆ ಕೇಸ್ ದಾಖಲಿಸಲಾಗಿದೆ. ತಲ್ವಾರ್ ಪ್ರದರ್ಶನ, ಕಲ್ಲು ತೂರಾಟ ಸಂಬಂಧ ಐಪಿಸಿ ಸೆಕ್ಷನ್ (IPC Sections) 143, 147, 148, 323, 324, 307, 354, 504, 506, 153A, 149 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 13 ಹಿಂದೂ ಯುವಕರ ಮೇಲೂ ಐಪಿಸಿ ಸೆಕ್ಷನ್ 143, 147, 148, 323, 324, 307, 354, 504, 506, 153A ಹಾಗೂ 149ರಡಿ ಪ್ರಕರಣ ದಾಖಲಿಸಲಾಗಿದೆ.

ಈ ಮಧ್ಯೆ, ಎರಡೂ ಗುಂಪುಗಳ ತಲಾ ಐವರನ್ನು ಪೊಲೀಸರು ಬಂಧಿಸಿದ್ದಾರೆ. ತಲ್ವಾರ್​​ ಎಸೆದ ಆರೋಪ ಎದುರಿಸುತ್ತಿರುವ ಅಬ್ದುಲ್ ಎಂಬಾತನನ್ನೂ ಬಂಧಿಸಲಾಗಿದೆ.

ಬೆಳಗಾವಿಯ ಅಳ್ವಾನ್​​ನ ಆದರ್ಶ ಮರಾಠ ವಿದ್ಯಾಮಂದಿರ ಶಾಲೆ ಗ್ರೌಂಡ್​ನಲ್ಲಿ ಗುರುವಾರ ಸಂಜೆ 4.30ಕ್ಕೆ ಅಪ್ರಾಪ್ತರು ಕ್ರಿಕೆಟ್ ಆಟ ಆಡಿದ್ದರು. ನಂತರ ಗೆದ್ದ ತಂಡದ ಮೇಲೆ ಮತ್ತೊಂದು ತಂಡದಿಂದ ಹಲ್ಲೆ ನಡೆದಿತ್ತು. ಘರ್ಷಣೆ ಮುಂದುವರಿದು ಸಂಜೆ 6 ಗಂಟೆಗೆ ಒಂದು ಯುವಕರ ಗುಂಪು ಕಲ್ಲು ತೂರಾಟ ಮಾಡಿತ್ತು. ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಕಲ್ಲು ತೂರದಂತೆ ಅಳ್ವಾನ್ ಗಲ್ಲಿ ನಿವಾಸಿಗಳು ಎಚ್ಚರಿಕೆ ನೀಡಿದ್ದರು.

ಸಂಜೆ 6.15ಕ್ಕೆ ಇಬ್ಬರು ಪೊಲೀಸ್ ಕಾನ್ಸ್​​ಟೇಬಲ್ ಸ್ಥಳಕ್ಕೆ ಆಗಮಿಸಿದರು. ಪೊಲೀಸ್​ ಜೀಪ್​ನಲ್ಲಿ ಮಹಿಳಾ ಅಧಿಕಾರಿ ಆಗಮಿಸಿದ ವೇಳೆ ಯುವಕರ ಗುಂಪೊಂದು ತಲ್ವಾರ್​ ಎಸೆದು ಅಲ್ಲಿಂದ ಕಾಲ್ಕಿತ್ತಿದೆ.

ಕಲ್ಲುತೂರಾಟದಿಂದ 8 ಜನರಿಗೆ ಗಾಯ

ಕಲ್ಲು ತೂರಾಟದ ವೇಳೆ 8 ಜನ ಗಾಯಗೊಂಡಿದ್ದು, ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲ ಚಿಕಿತ್ಸೆ ಪಡೆದು ರಾತ್ರಿಯೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಂಜೆ 7 ಗಂಟೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ಮಾಡಿದ್ದಾರೆ. ನಂತರ ರಾತ್ರಿ 7.30ಕ್ಕೆ ಶಹಾಪುರ ಪೊಲೀಸ್ ಠಾಣೆ ಬಳಿ ಜನ ಜಮಾವಣೆಯಾಗಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ವಿಕೋಪಕ್ಕೆ ಹೋದ ಕ್ರಿಕೆಟ್ ಜಗಳ, ಹಿಂದೂ ಮನೆಗಳ ಮೇಲೆ ಕಲ್ಲು ತೂರಿ ತಲ್ವಾರ್ ಪ್ರದರ್ಶನ

ಹಿಂದೂ ಮುಖಂಡರು, ಮಹಾನಗರ ಪಾಲಿಕೆ ಸದಸ್ಯರು ಭೇಟಿ ನೀಡಿದ್ದಾರೆ. ರಾತ್ರಿ 8 ಗಂಟೆಗೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಶಹಾಪುರ ಠಾಣೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ. ರಾತ್ರಿ 10 ಗಂಟೆ ಹೊತ್ತಿಗೆ ನಗರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಘಟನೆ ಸಂಬಂಧ ರಾತ್ರಿ 12 ಗಂಟೆಗೆ ಶಹಾಪುರ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:51 am, Fri, 24 May 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ