ಬೆಳಗಾವಿ: ಎರಡು ಕಾರುಗಳ ನಡುವೆ ಡಿಕ್ಕಿ;ಮೂವರು ಸ್ಥಳದಲ್ಲೇ ಸಾವು
ಬೆಳಗಾವಿ ಜಿಲ್ಲೆಯ ಯರಗಟ್ಟಿ (Yaragatti) ತಾಲೂಕಿನ ಕುರಬಗಟ್ಟಿ ಬಳಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ, ಫೆ.23: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ (Yaragatti) ತಾಲೂಕಿನ ಕುರಬಗಟ್ಟಿ ಬಳಿ ನಡೆದಿದೆ. ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಮುತ್ತು ನಾಯಕ್ (08), ಗೋಪಾಲ್ ನಾಯಕ್ (45) ಹಾಗೂ ಧಾರವಾಡ ಮೂಲದ ಅನ್ನಪೂರ್ಣಾ ಶಿರೋಳ(53) ಮೃತ ದುರ್ದೈವಿಗಳು. ಇಬ್ಬರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸಾರಿಗೆ ಬಸ್ಗಳ ನಡುವೆ ಡಿಕ್ಕಿ; ಗಾಯಾಳುಗಳು ಆಸ್ಪತ್ರೆಗೆ ದಾಖಲು
ಧಾರವಾಡ: ಸಾರಿಗೆ ಬಸ್ಗಳ ನಡುವೆ ಡಿಕ್ಕಿಯಾಗಿ ಬಸ್ನಲ್ಲಿದ್ದ ಹಲವರಿಗೆ ಗಾಯವಾದ ಘಟನೆ ಧಾರವಾಡ ನಗರದ ಎಸ್ಪಿ ಕಚೇರಿ ಎದುರಲ್ಲೇ ನಡೆದಿದೆ. ಗೋಕಾಕ್ದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್, ಹಾನಗಲ್ ಕಡೆ ಹೊರಟಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ. ಎರಡು ಬಸ್ ಡಿಕ್ಕಿಯ ನಂತರ ಒಂದು ಬಸ್ ಎಸ್ ಪಿ ಕಚೇರಿ ಕಂಪೌಂಡ್ಗೆ ಡಿಕ್ಕಿ ಹೊಡೆದಿದೆ. ಮತ್ತೊಂದು ಬಸ್ನ ಮುಂದಿನ ಭಾಗ ನಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆ ಧಾರವಾಡ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ:ಪ್ರತ್ಯೇಕ ಅಪಘಾತ; ತಂದೆಗೆ ಚಿಕಿತ್ಸೆ ಕೊಡಿಸಬೇಕಿದ್ದವ, ಹೆತ್ತ ಮಗು ನೋಡಲು ಹೋಗ್ತಿದವರು ಸೇರಿ ನಾಲ್ವರು ಸಾವು
ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಸದಸ್ಯರ ನಡುವೆ ಮಾರಾಮಾರಿ
ಬೆಂಗಳೂರು: ಜಿಲ್ಲೆ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಸದಸ್ಯರ ನಡುವೆ ಮಾರಾಮಾರಿಯಾಗಿದೆ. ಕೋನಸಂದ್ರ ಗ್ರಾಮದ ಸದಸ್ಯ ಮಂಜುನಾಥ್ ಎಂಬುವವರಿಂದ ಮಹಾಂತಲಿಂಗಾಪುರ ಗ್ರಾಮದ ಸದಸ್ಯ ನಾಗರಾಜುಪಿಲ್ಲಪ್ಪ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಕುಡಿಯುವ ನೀರಿನ ಟ್ಯಾಂಕರ್ ಬಿಲ್ ವಿಚಾರ ಚರ್ಚೆ ವೇಳೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಪಿಲ್ಲಪ್ಪ ಮೇಲೆ ಪಿಡಿಓ, ಕಾರ್ಯದರ್ಶಿ ಮತ್ತು ಸದಸ್ಯರ ಸಮ್ಮುಖದಲ್ಲಿ ಹಲ್ಲೆ ಮಾಡಲಾಗಿದೆ. ಇದೀಗ ಹಲ್ಲೆ ಖಂಡಿಸಿ ಸುತ್ತಮುತ್ತಲಿನ ಗ್ರಾಮಸ್ಥರು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುತ್ತಿದ್ದಾರೆ. ಗ್ರಾಮ ಪಂಚಾಯತಿ ಸ್ಥಳದಲ್ಲಿ ಬಿಡುವಿನ ವಾತಾವರಣ ಎದುರಾಗಿದ್ದು, ಸ್ಥಳಕ್ಕೆ ಜಿಗಣಿ ಪೊಲೀಸರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:40 pm, Fri, 23 February 24