ಬೆಳಗಾವಿ: ಎರಡು ಕಾರುಗಳ ನಡುವೆ ಡಿಕ್ಕಿ;ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಯರಗಟ್ಟಿ (Yaragatti) ತಾಲೂಕಿನ ಕುರಬಗಟ್ಟಿ ಬಳಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಳಗಾವಿ: ಎರಡು ಕಾರುಗಳ ನಡುವೆ ಡಿಕ್ಕಿ;ಮೂವರು ಸ್ಥಳದಲ್ಲೇ ಸಾವು
ಯರಗಟ್ಟಿ ತಾಲೂಕಿನಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Feb 23, 2024 | 6:36 PM

ಬೆಳಗಾವಿ, ಫೆ.23: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ (Yaragatti) ತಾಲೂಕಿನ ಕುರಬಗಟ್ಟಿ ಬಳಿ ನಡೆದಿದೆ. ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಮುತ್ತು ನಾಯಕ್ (08), ಗೋಪಾಲ್ ನಾಯಕ್ (45) ಹಾಗೂ ಧಾರವಾಡ ಮೂಲದ ಅನ್ನಪೂರ್ಣಾ ಶಿರೋಳ(53) ಮೃತ ದುರ್ದೈವಿಗಳು. ಇಬ್ಬರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಾರಿಗೆ ಬಸ್​ಗಳ ನಡುವೆ ಡಿಕ್ಕಿ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ಧಾರವಾಡ: ಸಾರಿಗೆ ಬಸ್​ಗಳ ನಡುವೆ ಡಿಕ್ಕಿಯಾಗಿ ಬಸ್​ನಲ್ಲಿದ್ದ ಹಲವರಿಗೆ ಗಾಯವಾದ ಘಟನೆ ಧಾರವಾಡ ನಗರದ ಎಸ್​ಪಿ ಕಚೇರಿ ಎದುರಲ್ಲೇ ನಡೆದಿದೆ. ಗೋಕಾಕ್​​ದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್​, ಹಾನಗಲ್ ಕಡೆ ಹೊರಟಿದ್ದ ಬಸ್​ಗೆ ಡಿಕ್ಕಿ ಹೊಡೆದಿದೆ. ಎರಡು ಬಸ್ ಡಿಕ್ಕಿಯ ನಂತರ ಒಂದು ಬಸ್ ಎಸ್‌ ಪಿ ಕಚೇರಿ‌ ಕಂಪೌಂಡ್​ಗೆ ಡಿಕ್ಕಿ ಹೊಡೆದಿದೆ. ಮತ್ತೊಂದು ಬಸ್​ನ ಮುಂದಿನ ಭಾಗ ನಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆ ಧಾರವಾಡ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ಪ್ರತ್ಯೇಕ ಅಪಘಾತ; ತಂದೆಗೆ ಚಿಕಿತ್ಸೆ ಕೊಡಿಸಬೇಕಿದ್ದವ, ಹೆತ್ತ ಮಗು ನೋಡಲು ಹೋಗ್ತಿದವರು ಸೇರಿ ನಾಲ್ವರು ಸಾವು

ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಸದಸ್ಯರ ನಡುವೆ ಮಾರಾಮಾರಿ

ಬೆಂಗಳೂರು: ಜಿಲ್ಲೆ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಸದಸ್ಯರ ನಡುವೆ ಮಾರಾಮಾರಿಯಾಗಿದೆ. ಕೋನಸಂದ್ರ ಗ್ರಾಮದ ಸದಸ್ಯ ಮಂಜುನಾಥ್ ಎಂಬುವವರಿಂದ ಮಹಾಂತಲಿಂಗಾಪುರ ಗ್ರಾಮದ ಸದಸ್ಯ ನಾಗರಾಜುಪಿಲ್ಲಪ್ಪ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಕುಡಿಯುವ ನೀರಿನ ಟ್ಯಾಂಕರ್ ಬಿಲ್ ವಿಚಾರ ಚರ್ಚೆ ವೇಳೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಪಿಲ್ಲಪ್ಪ ಮೇಲೆ ಪಿಡಿಓ, ಕಾರ್ಯದರ್ಶಿ ಮತ್ತು ಸದಸ್ಯರ ಸಮ್ಮುಖದಲ್ಲಿ ಹಲ್ಲೆ ಮಾಡಲಾಗಿದೆ. ಇದೀಗ ಹಲ್ಲೆ ಖಂಡಿಸಿ ಸುತ್ತಮುತ್ತಲಿನ ಗ್ರಾಮಸ್ಥರು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುತ್ತಿದ್ದಾರೆ. ಗ್ರಾಮ ಪಂಚಾಯತಿ ಸ್ಥಳದಲ್ಲಿ ಬಿಡುವಿನ ವಾತಾವರಣ ಎದುರಾಗಿದ್ದು, ಸ್ಥಳಕ್ಕೆ ಜಿಗಣಿ ಪೊಲೀಸರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Fri, 23 February 24

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us