AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DB Inamdar Passes Away: ಮಾಜಿ ಸಚಿವ ಡಿಬಿ ಇನಾಮದಾರ್ ನಿಧನ, ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್​ಗೆ ಆಘಾತ

5 ಬಾರಿ ಕಿತ್ತೂರು ಕ್ಷೇತ್ರದ ಶಾಸಕರಾಗಿ, ಅರಸು, S.M.ಕೃಷ್ಣ, ಎಸ್.ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದ ಡಿ.ಬಿ.ಇನಾಮಾದಾರ್ ನಿಧನರಾಗಿದ್ದಾರೆ.

DB Inamdar Passes Away: ಮಾಜಿ ಸಚಿವ ಡಿಬಿ ಇನಾಮದಾರ್ ನಿಧನ, ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್​ಗೆ ಆಘಾತ
ಡಿ.ಬಿ.ಇನಾಮಾದಾರ್
ರಮೇಶ್ ಬಿ. ಜವಳಗೇರಾ
|

Updated on:Apr 25, 2023 | 10:30 AM

Share

ಬೆಳಗಾವಿ(ಏ.25): ಬೆಳಗಾವಿಯ ಹಿರಿಯ ಕಾಂಗ್ರೆಸ್ ‌ನಾಯಕ, ಮಾಜಿ ಸಚಿವ ಡಿಬಿ ಇನಾಮದಾರ್ ಅವರು ಇಂದು(ಮಂಗಳವಾರ) ವಿಧಿವಶರಾಗಿದ್ದಾರೆ(DB Inamdar Passes Away). ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಿ.ಬಿ. ಇನಾಮದಾರ್ ‌ಅವರು ಕಳೆದೊಂದು ತಿಂಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.  ರಾಜ್ಯ ವಿಧಾನಸಭೆ ಚುನಾವಣೆ ‌ಹೊತ್ತಲ್ಲೇ ಇನಾಮದಾರ್ ನಿಧನದಿಂದ ಬೆಳಗಾವಿ ‌ಕಾಂಗ್ರೆಸ್‌ಗೆ ಆಘಾತವಾಗಿದೆ.

ಇದನ್ನೂ ಓದಿ: ಮೈಸೂರಿನ ಹುಣಸೂರು‌ ಬಿಜೆಪಿ‌ ಅಭ್ಯರ್ಥಿಗೆ ಪಿತೃ ವಿಯೋಗ 

ಡಿ.ಬಿ.ಇನಾಮದಾರ್ ಅವರು 1983ರಲ್ಲಿ ಜನತಾ ಪಕ್ಷದಿಂದ‌ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ‌ಮೊದಲ ಬಾರಿಗೆ ವಿಧಾನಸಭೆಗೆ ಪ್ರವೇಶಿಸಿದ್ದರು. ಒಟ್ಟು 9 ಚುನಾವಣೆಗಳನ್ನ ಎದುರಿಸಿ ಐದು ಚುನಾವಣೆಗಳಲ್ಲಿ ಗೆಲುವು ದಾಖಲಿಸಿದ್ದರು. ದೇವರಾಜ ಅರಸ, ಎಸ್.ಎಂ ಕೃಷ್ಣಾ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು. 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು.

2023ರ ಚುನಾವಣೆಯಲ್ಲಿ ‌ಕಿತ್ತೂರು ಕಾಂಗ್ರೆಸ್ ‌ಟಿಕೆಟ್ ಆಕಾಂಕ್ಷಿ ‌ಆಗಿದ್ದ ಡಿ.ಬಿ ಇನಾಮದಾರ್, ಅನಾರೋಗ್ಯ ಕಾರಣಕ್ಕೆ ‌ಡಿ.ಬಿ ಇನಾಮದಾರ್ ಸೊಸೆ ಲಕ್ಷ್ಮೀ ಇನಾಮದಾರ್‌ಗೆ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಆದರೆ ಕೊನೆಗೆ ಕಾಂಗ್ರೆಸ್​ ಹೈಕಮಾಂಡ್ ಬಾಬಾಸಾಹೇಬ್ ‌ಪಾಟೀಲ್‌ಗೆ ಟಿಕೆಟ್ ನೀಡಿದೆ.

Published On - 10:08 am, Tue, 25 April 23

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!