AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ವಾಪಸ್ ನೀಡಿಲ್ಲವೆಂದು ದೇವಸ್ಥಾನದಲ್ಲೇ ಗೆಳೆಯನ ಕೊಲೆ! ಆರೋಪಿ ಅರೆಸ್ಟ್

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ಮೊಬೈಲ್ ಫೋನ್ ಮರಳಿ ಕೊಡದಿದ್ದಕ್ಕೆ ಸ್ನೇಹಿತನನ್ನೇ ಭೀಕರವಾಗಿ ಅಂತ್ಯಗೊಳಿಸಿದ ಘಟನೆ ನಡೆದಿದೆ. ಲಕ್ಷ್ಮಿ ದೇವಸ್ಥಾನದಲ್ಲಿ ಮಲಗಿದ್ದ ಫಕ್ಕೀರಪ್ಪ ಎಂಬುವವರ ತಲೆಯ ಮೇಲೆ ಭಸ್ಮದ ಕಲ್ಲು ಎತ್ತಿ ಹಾಕಿ ಆರೋಪಿ ಮಲ್ಲಿಕಾರ್ಜುನ ಪರಾರಿಯಾಗಿದ್ದನು. ತಕ್ಷಣವೇ ಕಾರ್ಯಪ್ರವೃತ್ತರಾದ ಮುರಗೋಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಮೊಬೈಲ್ ವಾಪಸ್ ನೀಡಿಲ್ಲವೆಂದು ದೇವಸ್ಥಾನದಲ್ಲೇ ಗೆಳೆಯನ ಕೊಲೆ! ಆರೋಪಿ ಅರೆಸ್ಟ್
ಸಾಂದರ್ಭಿಕ ಚಿತ್ರImage Credit source: Deccan herald
ಸಹದೇವ್​ ಮಾನೆ
| Edited By: |

Updated on: Jul 19, 2026 | 2:18 PM

Share

ಮುಖ್ಯಾಂಶಗಳು

  • ಮೊಬೈಲ್ ಮರಳಿ ನೀಡದಿದ್ದಕ್ಕೆ ಸ್ನೇಹಿತನಿಂದಲೇ ವ್ಯಕ್ತಿಯ ಭೀಕರ ಅಂತ್ಯ.
  • ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ಘಟನೆ.
  • ಭಸ್ಮ ಹಾಕುವ ಕಲ್ಲು ಎತ್ತಿ ಹಾಕಿ ಕೃತ್ಯ ಎಸಗಿದ ಆರೋಪಿ ಮಲ್ಲಿಕಾರ್ಜುನ ಬಂಧನ.

ಬೆಳಗಾವಿ, ಜುಲೈ 19: ಇತ್ತೀಚೆಗೆ ಸಮಾಜದಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ ಸುಲಿಗೆಗಳಂತಹ ಹೇಯ ಕೃತ್ಯಗಳೇ ನಡೆದು ಹೋಗುತ್ತವೆ. ಅಂತದ್ದೇ ಒಂದು ಅಮಾನವೀಯ ಕೃತ್ಯ ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದ್ದು, ಕೇವಲ ಒಂದು ಮೊಬೈಲ್ ಫೋನ್‌ಗಾಗಿ ಸ್ನೇಹಿತರಿಬ್ಬರ ನಡುವೆ ನಡೆದ ಜಗಳವೊಂದು ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ. ಮೊಬೈಲ್ ಮರಳಿ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಆವರಣದಲ್ಲೇ ಮಲಗಿದ್ದ ವ್ಯಕ್ತಿಯೊಬ್ಬರ ಜೀವ ತೆಗೆದಿರುವ ಘಟನೆ ಸವದತ್ತಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ನಡೆದಿದೆ.

ಪ್ರಕರಣದ ಹಿನ್ನೆಲೆ

ಗ್ರಾಮದ ನಿವಾಸಿಯಾದ ಫಕ್ಕೀರಪ್ಪ ಪಿಡ್ಡೆನ್ನವರ್ (40) ಎಂಬುವವರೇ ಈ ದುರಂತದಲ್ಲಿ ಜೀವ ಕಳೆದುಕೊಂಡ ದುರ್ದೈವಿ. ಇವರ ಸ್ನೇಹಿತ ಮಲ್ಲಿಕಾರ್ಜುನ ಪೂಜೇರಿ ಎಂಬಾತನೇ ಈ ಕೃತ್ಯ ಎಸಗಿರುವ ಆರೋಪಿಯಾಗಿದ್ದಾನೆ. ಮೂಲಗಳ ಪ್ರಕಾರ, ಕಳೆದ ಎರಡು ದಿನಗಳ ಹಿಂದೆ ಮಲ್ಲಿಕಾರ್ಜುನನ ಮೊಬೈಲ್ ಫೋನ್ ಅನ್ನು ಫಕ್ಕೀರಪ್ಪ ಪಡೆದುಕೊಂಡಿದ್ದರು. ಆದರೆ, ಕೆಲಸ ಮುಗಿದ ನಂತರವೂ ಅದನ್ನು ಮರಳಿ ನೀಡದೆ ಎರಡು ದಿನಗಳಿಂದ ಸತಾಯಿಸುತ್ತಿದ್ದರು ಎನ್ನಲಾಗಿದೆ.

ತನ್ನ ಫೋನ್ ಪಡೆಯಲು ಮಲ್ಲಿಕಾರ್ಜುನ ಹಲವು ಬಾರಿ ಕೇಳಿದ್ದರೂ ಫಕ್ಕೀರಪ್ಪ ನಿರ್ಲಕ್ಷ್ಯ ವಹಿಸಿದ್ದ. ಕೊನೆಗೆ ಬೇಸತ್ತ ಮಲ್ಲಿಕಾರ್ಜುನ, ಫಕ್ಕೀರಪ್ಪನ ಮನೆವರೆಗೂ ಹೋಗಿ ಮೊಬೈಲ್ ನೀಡುವಂತೆ ಒತ್ತಾಯ ಮಾಡಿದ್ದ. ಈ ವೇಳೆ ಫಕ್ಕೀರಪ್ಪ, ಸಂಜೆ ವೇಳೆಗೆ ನಿನ್ನ ಮೊಬೈಲ್ ಮರಳಿ ಕೊಡುತ್ತೇನೆ ಎಂದು ಹೇಳಿ ಅಲ್ಲಿಂದ ಕಳುಹಿಸಿದ್ದ.

ದೇವಸ್ಥಾನದಲ್ಲಿ ನಡೆದ ಘೋರ ಕೃತ್ಯ

ಶನಿವಾರ ಸಂಜೆ ಫಕ್ಕೀರಪ್ಪ ಗ್ರಾಮದ ಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಮಲಗಿದ್ದ. ಇದನ್ನು ಗಮನಿಸಿದ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಬಂದು ಮತ್ತೊಮ್ಮೆ ತನ್ನ ಮೊಬೈಲ್ ನೀಡುವಂತೆ ಕೇಳಿದ್ದ. ಆದರೆ, ಫಕ್ಕೀರಪ್ಪ ಈ ಬಾರಿಯೂ ತಕ್ಷಣಕ್ಕೆ ಮೊಬೈಲ್ ನೀಡದೆ, ರಾತ್ರಿ ಕೊಡುತ್ತೇನೆ ಎಂದು ಮತ್ತೆ ಸಬೂಬು ಹೇಳಿದ್ದ. ಇದರಿಂದ ವಿಪರೀತ ಕೋಪಗೊಂಡ ಮಲ್ಲಿಕಾರ್ಜುನ, ದೇವಸ್ಥಾನದ ಆವರಣದಲ್ಲೇ ಇದ್ದ ಭಸ್ಮ (ವಿಭೂತಿ) ಅರೆಯುವ ದೊಡ್ಡ ಕಲ್ಲನ್ನು ಎತ್ತಿ, ಮಲಗಿದ್ದ ಫಕ್ಕೀರಪ್ಪನ ತಲೆಯ ಮೇಲೆ ಜೋರಾಗಿ ಹಾಕಿದ್ದಾನೆ. ಕಲ್ಲಿನ ಭಾರಿ ಏಟಿಗೆ ಫಕ್ಕೀರಪ್ಪ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೃತ್ಯ ಎಸಗಿದ ತಕ್ಷಣ ಆರೋಪಿ ಮಲ್ಲಿಕಾರ್ಜುನ ಅಲ್ಲಿಂದ ಕಾಲ್ಕಿತ್ತಿದ್ದಾನೆ.

ಆರೋಪಿ ಬಂಧನ

ದೇವಸ್ಥಾನದಲ್ಲಿ ರಕ್ತದ ಮಡುವಿನಲ್ಲಿ ಶವ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಮುರಗೋಡ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಮುರಗೋಡ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಮಹಜರು ನಡೆಸಿದ ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ ಮುರಗೋಡ ಪೊಲೀಸರು, ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿ ಮಲ್ಲಿಕಾರ್ಜುನನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್