AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್ ಅರೆಸ್ಟ್ ಎಂದು ಯಾಮಾರಿಸಿ ವೃದ್ಧ ಉದ್ಯಮಿಯ 15 ಕೋಟಿ ರೂ. ಎಗರಿಸಿದ್ರು!

ಬೆಳಗಾವಿಯಲ್ಲಿ ಆಘಾತಕಾರಿ ಸೈಬರ್ ವಂಚನೆ ಬೆಳಕಿಗೆ ಬಂದಿದೆ. 'ಡಿಜಿಟಲ್ ಅರೆಸ್ಟ್' ನೆಪದಲ್ಲಿ ವಂಚಕರು ವೃದ್ಧ ಉದ್ಯಮಿಯೊಬ್ಬರಿಂದ 15 ಕೋಟಿ ರೂ. ದೋಚಿದ್ದಾರೆ. ಹಣ ವರ್ಗಾವಣೆಗೆ ಬೆದರಿಸಿದ ವಂಚಕರು ಬಳಿಕ ಸಂಪರ್ಕ ಕಡಿತಗೊಳಿಸಿದ್ದಾರೆ. ದೂರು ದಾಖಲಾದ ನಂತರ ಪೊಲೀಸರು 90 ಲಕ್ಷ ರೂ. ಇರುವ ಖಾತೆ ಫ್ರೀಜ್ ಮಾಡಿದ್ದಾರೆ. ಸೈಬರ್ ವಂಚನೆಗಳಿಂದ ಎಚ್ಚರವಾಗಿರುವಂತೆ ಮತ್ತು ಯಾವುದೇ ಅನುಮಾನವಿದ್ದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಡಿಜಿಟಲ್ ಅರೆಸ್ಟ್ ಎಂದು ಯಾಮಾರಿಸಿ ವೃದ್ಧ ಉದ್ಯಮಿಯ 15 ಕೋಟಿ ರೂ. ಎಗರಿಸಿದ್ರು!
ಡಿಜಿಟಲ್ ಅರೆಸ್ಟ್ ಎಂದು ಯಾಮಾರಿಸಿ ವೃದ್ಧ ಉದ್ಯಮಿಯ 15 ಕೋಟಿ ರೂ. ಎಗರಿಸಿದ್ರು!
ಸಹದೇವ್​ ಮಾನೆ
| Edited By: |

Updated on: Mar 21, 2026 | 2:34 PM

Share

ಬೆಳಗಾವಿ, ಮಾರ್ಚ್​ 21: ಜಿಲ್ಲೆಯಲ್ಲಿ ಸೈಬರ್ ವಂಚಕರು ವೃದ್ಧ ಉದ್ಯಮಿಯನ್ನು ಗುರಿಯಾಗಿಸಿಕೊಂಡು 15 ಕೋಟಿ ರೂಪಾಯಿ ದೋಚಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಡಿಜಿಟಲ್ ಅರೆಸ್ಟ್ (Digital Arrest) ಎಂದು ಬೆದರಿಸಿರುವ ವಂಚಕರು ಕೋಟಿಗಟ್ಟಲೆ ಹಣ ದೋಚಿದ್ದಾರೆ. ಪ್ರಕರಣ ಬೆಳಗಾವಿಯ ಸಿಇಎನ್ ಠಾಣೆಯಲ್ಲಿ ದಾಖಲಾಗಿದೆ.

ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡ ವಂಚಕರು

ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ವಿಡಿಯೋ ಕಾಲ್ ಮಾಡಿ ಬೆದರಿಸಿದ್ದ ವಂಚಕರು, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಹೇಳಿ ಭಯ ಹುಟ್ಟಿಸಿದ್ದರು. ತನಿಖೆ ನಡೆಯುತ್ತಿದೆ, ಹಣವನ್ನು ಸುರಕ್ಷತೆಗೆ ಬೇರೆ ಖಾತೆಗೆ ವರ್ಗಾಯಿಸಿ, ಬಳಿಕ ಮರಳಿಸುತ್ತೇವೆ ಎಂದು ನಂಬಿಸಿ ಹಂತ ಹಂತವಾಗಿ 15 ಕೋಟಿ ರೂ. ವರ್ಗಾಯಿಸಿಕೊಂಡಿದ್ದರು. ಬಳಿಕ ಸಂಪರ್ಕ ಕಡಿತಗೊಂಡಾಗ ವೃದ್ಧ ಉದ್ಯಮಿಗೆ ಅನುಮಾನ ಬಂದು ಮಾರ್ಚ್ 18ರಂದು ಬೆಳಗಾವಿ ನಗರದ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ ಡಿಜಿಟಲ್ ಅರೆಸ್ಟ್ ವಂಚನೆಗೆ ಬ್ರೇಕ್: ವಾಟ್ಸಾಪ್‌ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಮೋದಿ ಸರ್ಕಾರ!

90 ಲಕ್ಷ ರೂ. ಇರುವ ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೊಲೀಸರು

ಪೊಲೀಸರು ತಕ್ಷಣ ಕ್ರಮ ಕೈಗೊಂಡು ವಂಚಕರ ಖಾತೆಗಳನ್ನು ಫ್ರೀಜ್ ಮಾಡಿದ್ದು, 15 ಕೋಟಿಯಲ್ಲಿ 90 ಲಕ್ಷ ರೂ. ಇರುವ ಖಾತೆಯನ್ನು ತಡೆಹಿಡಿದಿದ್ದಾರೆ. ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ. ಒಂದೇ ತಿಂಗಳಲ್ಲಿ ಮೂವರು ಹಿರಿಯ ನಾಗರಿಕರು ಇಂತಹ ವಂಚನೆಗೆ ಒಳಗಾಗಿರುವ ಹಿನ್ನೆಲೆಯಲ್ಲಿ, ಇಂತಹ ಬೆದರಿಕೆಗಳಿಗೆ ಹೆದರದೇ ತಕ್ಷಣ ಪೊಲೀಸರಿಗೆ ದೂರು ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ