ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ: 2 ದಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

1924ರಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಕರ್ನಾಟಕ ಸರ್ಕಾರ ವಿಜೃಂಭಣೆಯಿಂದ ಆಚರಿಸುತ್ತಿದೆ. ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಅಧಿವೇಶನದ ಸ್ಮರಣಾರ್ಥ ಹಲವು ಕಾರ್ಯಕ್ರಮಗಳನ್ನು ಏರ್ಪಾಟಾಗಿದ್ದು, ಕಾಂಗ್ರೆಸ್ ನಾಯಕರು ಮತ್ತು ಪ್ರಮುಖ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಇನ್ನು ಈ ಕಾರ್ಯಕ್ರಮ ನಿಮಿತ್ತ ಬೆಳಗಾವಿ ತಾಲೂಕಿನ ಪ್ರಾಥಮಿ ಹಾಗೂ ಪ್ರೌಢ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.

ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ: 2 ದಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿ ತಾಲೂಕಿನ ಶಾಲೆಗಳಿಗೆ 2 ದಿನ ರಜೆ ಘೋಷಣೆ
Follow us
Sahadev Mane
| Updated By: ರಮೇಶ್ ಬಿ. ಜವಳಗೇರಾ

Updated on:Dec 25, 2024 | 4:26 PM

ಬೆಳಗಾವಿ, (ಡಿಸೆಂಬರ್ 25): ಅದು 1924, ಸ್ವಾತಂತ್ರ್ಯ ಸಂಗ್ರಾಮ ಚುರುಕು ಪಡೆದ ದಿನಗಳು. ಆ ದಿನಗಳಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಮಹಾ ಅಧಿವೇಶನ ನಡೆದಿತ್ತು. ಆ ಅಧಿವೇಶನ ನಡೆದು ನೂರುವರ್ಷಗಳು ತುಂಬುತ್ತಿವೆ. ಹೀಗಾಗಿ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ವಿಜೃಂಭಣೆಯಿಂದ ಆಚರಿಸಲು ಸಜ್ಜಾಗಿದ್ದು, ಬೆಳಗಾವಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಈ ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ತಾಲೂಕಿನ ಸರ್ಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಡಿಸೆಂಬರ್ 26 ಮತ್ತು 27 ಎರಡು ದಿನ ರಜೆ ಘೋಷಣೆ ಮಾಡಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಗುರುವಾರ ಮತ್ತು ಶುಕ್ರವಾರ ಎರಡು ದಿನ ನಡೆಯುವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆದಿದೆ. ಗುರುವಾರ ಸಂಜೆ ಪೀರನವಾಡಿಯಲ್ಲಿರುವ ಗಾಂಧಿ ಭವನದಲ್ಲಿ ಎಐಸಿಸಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಖರ್ಗೆ ಅವರೇ ಎಲ್ಲರಿಗೂ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ. ಇನ್ನು ಗುರುವಾರ ಸುವರ್ಣ ಸೌಧದಲ್ಲಿ ಗಾಂಧಿ ಪ್ರತಿಮೆ ಉದ್ಘಾಟನೆ ಮಾಡಲಿದ್ದು ಫೋಟೋ ಸೆಷನ್ ಕೂಡ ನಡೆಯಲಿದೆ.

ಇದನ್ನೂ ಓದಿ: ನಾಳೆ ಎಐಸಿಸಿ ಮಹಾಧಿವೇಶನದ ಶತಮಾನೋತ್ಸವ: ಕುಂದಾನಗರಿ ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರ ದಂಡು

ಇದಕ್ಕಾಗಿ ಈಗಾಗಲೇ ಕಾಂಗ್ರೆಸ್ ನಾಯಕರ ದಂಡೇ ಕುಂದಾನಗರಿಯಲ್ಲಿ ಬೀಡು ಬಿಟ್ಟಿದೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಮುನಿಯಪ್ಪ, ಎಂಬಿ ಪಾಟೀಲ್ ಸೇರಿ ಘಟಾನುಘಟಿ ನಾಯಕರು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್‌ ಅಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, 140 ಸಂಸದರು ನಾಳೆ(ಡಿಸೆಂಬರ್ 26) ಬೆಳಗಾವಿಗೆ ಆಗಮಿಸಲಿದ್ದು, ಪ್ರಮುಖ ನಾಯಕರಿಗೆ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ವ್ಯವಸ್ಥೆ ಮಾಡಲಾಗಿದೆ.

ಈ ಕಾರ್ಯಕ್ರಮಕ್ಕೆ ಬಿಜೆಪಿ ಟೀಕೆ

ಇನ್ನು ಕಾಂಗ್ರೆಸ್ ಆಯೋಜಿಸಿರುವ ಈ ಗಾಂಧಿ ಕಾರ್ಯಕ್ರಮಕ್ಕೆ ವಿಪಕ್ಷ ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ಸರ್ಕಾರದ ಹಣದಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇನ್ನು ಈ ಬಗ್ಗೆ ಬಿಜೆಪಿ ಸಂಸದ ಮಾತನಾಡಿ, ಮಹಾತ್ಮ ಗಾಂಧಿಯವರು ಜೀವನದಲ್ಲೇ ಒಂದೇ ಬಾರಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಅದು ಕೂಡ ಬೆಳಗಾವಿಯಲ್ಲಿ ಅಧ್ಯಕ್ಷರಾಗಿದ್ದರು. ಅದರ ನೆನಪಿಗೆ ಕಾಂಗ್ರೆಸ್ ಪಕ್ಷ ಸಮಾವೇಶ ಮಾಡುತ್ತಿದೆ. ಮಹಾತ್ಮ ಗಾಂಧಿ ಹೆಸರಿನಲ್ಲಿ ನಕಲಿ ಗಾಂಧಿಗಳ ವೈಭವಿಕರಣ ನಡೆಯುತ್ತಿದೆ. ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಪಕ್ಷ ವಿಸರ್ಜನೆ ಮಾಡಬೇಕಿತ್ತು. ಆದರೆ ಆ ಕೆಲಸವನ್ನು ಮಾಡಲಿಲ್ಲ. ಸರಕಾರದ ದುಡ್ಡಿನಲ್ಲಿ ಅಧಿವೇಶನ ನಡೆಯುತ್ತಿದ್ದಾರೆ. ವಿದ್ಯುತ್ ಅಲಂಕಾರ, ಕಟೌಟ್ ಗಳನ್ನು ಹಾಕುವ ಮೂಲಕ ಪೂರ್ತಿ ಕಾಂಗ್ರೆಸ್ ಮಯವನ್ನಾಗಿ ಮಾಡುತ್ತಿದ್ದಾರೆ. ಯಾವ ಪುರುಷಾರ್ಥಕ್ಕೆ ಕಾರ್ಯಕ್ರಮ ಮಾಡಬೇಕು..? ಗಾಂಧಿ ಕನಸಿನ ಭಾರತ ಹೇಗಿತ್ತು..? ಕಾಂಗ್ರೆಸ್ ನ ಭಾರತ ಹೇಗಿದೆ? ಗ್ರಾಮ ಅಭಿವೃದ್ಧಿಗೆ ಆದ್ಯತೆಯನ್ನ ಕಾಂಗ್ರೆಸ್ ಕೊಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:24 pm, Wed, 25 December 24

ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ
ಶಿವಣ್ಣ ಶೀಘ್ರದಲ್ಲೇ ಶೂಟಿಂಗ್ ಮಾಡಬಹುದು: ಖುಷಿ ಹಂಚಿಕೊಂಡ ಡಾಲಿ
ಶಿವಣ್ಣ ಶೀಘ್ರದಲ್ಲೇ ಶೂಟಿಂಗ್ ಮಾಡಬಹುದು: ಖುಷಿ ಹಂಚಿಕೊಂಡ ಡಾಲಿ
ಸಿದ್ದರಾಮಯ್ಯ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಶಿವಣ್ಣ
ಸಿದ್ದರಾಮಯ್ಯ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಶಿವಣ್ಣ
ಡಾಮಿನೇಟ್ ಮಾಡುವ ಪ್ರವೃತ್ತಿ ರಜತ್​ಗೆ ಮುಳುವಾಯಿತೇ?
ಡಾಮಿನೇಟ್ ಮಾಡುವ ಪ್ರವೃತ್ತಿ ರಜತ್​ಗೆ ಮುಳುವಾಯಿತೇ?
ಹೆದ್ದಾರಿಯಲ್ಲೇ ಕಾರು ಬೈಕ್ ನಿಲ್ಲಿಸಿ ರಂಪಾಟ, ಕಿ.ಮೀಗಟ್ಟಲೆ ಟ್ರಾಫಿಕ್ ಜಾಮ್
ಹೆದ್ದಾರಿಯಲ್ಲೇ ಕಾರು ಬೈಕ್ ನಿಲ್ಲಿಸಿ ರಂಪಾಟ, ಕಿ.ಮೀಗಟ್ಟಲೆ ಟ್ರಾಫಿಕ್ ಜಾಮ್
ಅಧಿಕಾರಿಗಳು ಕೇವಲ ಸಿದ್ದರಾಮಯ್ಯ ಪ್ರಕರಣದಲ್ಲಿ ತಪ್ಪು ಮಾಡ್ತಾರೆಯೇ? ಕೃಷ್ಣ
ಅಧಿಕಾರಿಗಳು ಕೇವಲ ಸಿದ್ದರಾಮಯ್ಯ ಪ್ರಕರಣದಲ್ಲಿ ತಪ್ಪು ಮಾಡ್ತಾರೆಯೇ? ಕೃಷ್ಣ