National Voters Day: ಬೆಳಗಾವಿ ಜಿಲ್ಲಾಧಿಕಾರಿಗೆ ರಾಜ್ಯಮಟ್ಟದ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ

| Updated By: ವಿವೇಕ ಬಿರಾದಾರ

Updated on: Jan 26, 2023 | 7:50 AM

ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಭಾಜನರಾಗಿದ್ದಾರೆ.

National Voters Day: ಬೆಳಗಾವಿ ಜಿಲ್ಲಾಧಿಕಾರಿಗೆ ರಾಜ್ಯಮಟ್ಟದ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ
ಬೆಳಗಾವಿ ಡಿಸಿ ನಿತೇಶ್ ಪಾಟೀಲ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್
Follow us on

ಬೆಳಗಾವಿ: ಭಾರತ ಚುನಾವಣಾ ಆಯೋಗದ (Election Commission of India) ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ (National Voters Day) ಪ್ರಯುಕ್ತ ಕೊಡಮಾಡುವ ಅತ್ಯುತ್ತಮ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಭಾಜನರಾಗಿದ್ದಾರೆ.

ಚುನಾವಣಾ ಆಯೋಗದ ವತಿಯಿಂದ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್​ನಲ್ಲಿ ಏರ್ಪಡಿಸಲಾಗಿದ್ದ 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿಯನ್ನು ಪ್ರದಾನ‌ ಮಾಡಿದರು. ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜಕುಮಾರ್ ಮೀನಾ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭಾರತ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾಧಿಕಾರಿಗಳು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಕಾಗವಾಡ ತಹಶೀಲ್ದಾರರಾಗಿರುವ ರಾಜೇಶ್ ಬುರ್ಲಿ ಅವರಿಗೆ ಸಹಾಯಕ ಮತದಾರರ ನೋಂದಣಾಧಿಕಾರಿ ವಿಭಾಗದಲ್ಲಿ ಪ್ರಶಸ್ತಿಯನ್ನ ನೀಡಿ ಗೌರವಿಸಿದರು. ಮತದಾರರ ನೋಂದಣಿ, ಪರಿಷ್ಕರಣೆ ಸೇರಿದಂತೆ ಒಟ್ಟಾರೆ ಚುನಾವಣಾ ಕಾರ್ಯವನ್ನು ಅತ್ಯುತ್ತಮವಾಗಿ ಕಾರ್ಯನಿರ್ವಹಣೆಯನ್ನು ಪರಿಗಣಿಸಿ ವಿವಿಧ ವಿಭಾಗಗಳಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿರುತ್ತದೆ.

ಇದೇ ರೀತಿ ತುಮಕೂರು, ಯಾದಗಿರಿ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಪ್ರಶಸ್ತಿ ನೀಡಲಾಯಿತು. ಇದಲ್ಲದೆ ವಿವಿಧ ಜಿಲ್ಲೆಗಳ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ನೋಂದಣಾಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಚುನಾವಣಾ ಶಾಖೆಯ ತಾಂತ್ರಿಕ ಸಿಬ್ಬಂದಿಗೂ ಪ್ರತ್ಯೇಕ ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಯಿತು.

ಸಹದೇವ ಮಾನೆ ಟಿವಿ9 ಬೆಳಗಾವಿ