ಬೆಳಗಾವಿ ಗಡಿ ಪ್ರವೇಶಿಸದಂತೆ ಮಹಾರಾಷ್ಟ್ರದ 3 ಸಚಿವರು, ಓರ್ವ ಎಂಪಿಗೆ ನಿರ್ಬಂಧ

ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ಕರೆ ಕೊಟ್ಟಿದೆ. ಇದರ ಮಧ್ಯೆ ಬೆಳಗಾವಿಯಲ್ಲಿ ನವೆಂಬರ್ 01 ಕರ್ನಾಟಕ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆಗೆ ನಿರ್ಧರಿಸಿದ್ದ ಎಂಇಎಸ್​ಗೆ ಜಿಲ್ಲಾಡಳಿ​ತ ಶಾಕ್ ಕೊಟ್ಟಿದೆ.​

ಬೆಳಗಾವಿ ಗಡಿ ಪ್ರವೇಶಿಸದಂತೆ ಮಹಾರಾಷ್ಟ್ರದ 3 ಸಚಿವರು, ಓರ್ವ ಎಂಪಿಗೆ ನಿರ್ಬಂಧ
Edited By:

Updated on: Oct 31, 2023 | 8:08 AM

ಬೆಳಗಾವಿ (ಅಕ್ಟೋಬರ್.31) : ಬೆಳಗಾವಿಯಲ್ಲಿ (Belagavi) ನವೆಂಬರ್ 01 ಕರ್ನಾಟಕ ರಾಜ್ಯೋತ್ಸವ( Kannada Rajyotsava) ದಿನದಂದು ಕರಾಳ ದಿನಾಚರಣೆಗೆ ನಿರ್ಧರಿಸಿದ್ದ ಎಂಇಎಸ್​ಗೆ (MES) ಜಿಲ್ಲಾಡಳಿ​ತ ಶಾಕ್ ಕೊಟ್ಟಿದೆ.​ ಕರ್ನಾಟಕ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಪುಂಡರು ಕರಾಳ ದಿನ ಆಚರಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮೂವರು ಸಚಿವರು ಹಾಗೂ ಒಬ್ಬ ಸಂಸದರಿಗೆ ಅ.31ರಿಂದ ನ.2ರ ಸಂಜೆವರೆಗೆ ಬೆಳಗಾವಿ ನಗರ ಹಾಗೂ ಜಿಲ್ಲೆಯ ಗಡಿಪ್ರವೇಶಿಸದಂತೆ ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ನಗರ ಸೇರಿ ಜಿಲ್ಲಾದ್ಯಂತ ಕನ್ನಡಪರ ಸಂಘಟನೆಗಳು ಅದ್ದೂರಿ ರಾಜ್ಯೋತ್ಸವ ಆಚರಣೆಗೆ ತಯಾರಿ ನಡೆಸಿವೆ. ಆದರೆ, ರಾಜ್ಯೋತ್ಸವ ದಿನದಂದೇ ಮಹಾರಾಷ್ಟ್ರ ಏಕೀಕರಣ ಸಮಿತಿಯವರು ಕರಾಳ ದಿನಾಚರಣೆ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸಚಿವರಾದ ಶಂಭುರಾಜ ದೇಸಾಯಿ, ಚಂದ್ರಕಾಂತ ಪಾಟೀಲ, ದೀಪಕ್‌ ಕೇಸರಕರ್‌ ಮತ್ತು ಸಂಸದ ಧೈರ್ಯಶೀಲ ಮಾನೆ ಅವರು ಬೆಳಗಾವಿ ಗಡಿ ಪ್ರವೇಶಿಸದಂತೆ ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಇದನ್ನೂ ಓದಿ: KSRTC ಬಸ್‌ಗೆ ಬೆಂಕಿ: ಕರ್ನಾಟಕ-ಮಹಾರಾಷ್ಟ್ರ ಮಧ್ಯೆ‌ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ

ನಿಷೇಧಾಜ್ಞೆಗೆ ಒಳಗಾಗಿರುವ ಮಹಾರಾಷ್ಟ್ರದ ಮೂವರು ಸಚಿವರು ಹಾಗೂ ಸಂಸದರು ರಾಜ್ಯೋತ್ಸವದ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿ ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ.

ಅಲ್ಲದೆ, ಇವರು ಬೆಳಗಾವಿ ಜಿಲ್ಲೆ ಗಡಿ ಪ್ರವೇಶಿಸಿದರೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಘೇರಾವ್ ಹಾಕಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಇದರಿಂದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಎಂಇಎಸ್ ಪುಂಡರ ಮಧ್ಯೆ ಘರ್ಷಣೆಯಾಗುವ ಆತಂಕದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us