ಬೆಳಗಾವಿ ಅರಣ್ಯ ಪ್ರದೇಶದಲ್ಲಿ ಮದ್ಯದ ಪಾರ್ಟಿ ಪ್ರಕರಣ: ಉಳಿದ ನಾಲ್ವರ ವಿರುದ್ಧವೂ ತನಿಖೆಗೆ ಡಿ.ಸಿ. ಸೂಚನೆ

ಬೆಳಗಾವಿ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿರುವ ಫಾಲ್ಸ್​​ಗಳಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಇದನ್ನು ಉಲ್ಲಂಘಿಸಿ ಹೆಸ್ಕಾಂ ಸಿಬ್ಬಂದಿ, ವೈದ್ಯರು ಮದ್ಯದ ಪಾರ್ಟಿ ಮಾಡಿದ್ದರು. ಈ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿ ಉಳಿದ ನಾಲ್ವರನ್ನು ಬಿಟ್ಟು ಕಳುಹಿಸಲಾಗಿತ್ತು. ಸದ್ಯ ಇವರ ವಿರುದ್ಧವೂ ತನಿಖೆಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಬೆಳಗಾವಿ ಅರಣ್ಯ ಪ್ರದೇಶದಲ್ಲಿ ಮದ್ಯದ ಪಾರ್ಟಿ ಪ್ರಕರಣ: ಉಳಿದ ನಾಲ್ವರ ವಿರುದ್ಧವೂ ತನಿಖೆಗೆ ಡಿ.ಸಿ. ಸೂಚನೆ
ಜಾಂಬೋಟಿ ಅರಣ್ಯ ವಲಯದ ಜಲಪಾತದ ಬಳಿ ಮದ್ಯದ ಪಾರ್ಟಿ ಮಾಡಿದ ಹೆಸ್ಕಾಂ ಅಧಿಕಾರಿಗಳು ಮತ್ತು ವೈದ್ಯರ ತಂಡ
Follow us
| Updated By: Rakesh Nayak Manchi

Updated on:Jul 31, 2023 | 5:22 PM

ಬೆಳಗಾವಿ, ಜುಲೈ 31: ಆದೇಶ ಉಲ್ಲಂಘಿಸಿ ಅರಣ್ಯ ಪ್ರದೇಶದಲ್ಲಿರುವ ಜಲಪಾತದ ಬಳಿ ಅಧಿಕಾರಿಗಳು ಮದ್ಯದ ಪಾರ್ಟಿ ನಡೆಸಿದ ಪ್ರಕರಣ ಸಂಬಂಧ ಕೈಬಿಡಲಾಗಿದ್ದ ಇತರ ನಾಲ್ವರ ವಿರುದ್ಧವೂ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಬೆಳಗಾವಿ (Belagavi) ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಅರಣ್ಯ ಇಲಾಖೆಗೆ (Forest Department) ಆದೇಶಿಸಿದ್ದಾರೆ.

ಅರಣ್ಯ ವ್ಯಾಪ್ತಿಯ ಫಾಲ್ಸ್​​ಗಳಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಜುಲೈ 27 ರಂದು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಉಲ್ಲಂಘನೆ ಮಾಡಿ ಹೆಸ್ಕಾಂ ಸಿಬ್ಬಂದಿ, ವೈದ್ಯರು ಮದ್ಯದ ಪಾರ್ಟಿ ನಡೆಸಿ ಮೋಜು ಮಸ್ತಿ ಮಾಡಿದ್ದರು.

ಇದನ್ನೂ ಓದಿ: Gokak Falls: ಮೈದುಂಬಿ ಹರಿಯುತ್ತಿರುವ ಬೆಳಗಾವಿಯ ಗೋಕಾಕ್ ಫಾಲ್ಸ್​ಗೆ ಪ್ರವೇಶ ನಿರ್ಬಂಧ, ಬಿಗಿ ಪೊಲೀಸ್ ಬಂದೋಬಸ್ತ್

ಪ್ರಕರಣ ಸಂಬಂಧ ವೈದ್ಯ ಸೇರಿ ನಾಲ್ವರ ವಿರುದ್ಧ ಜಾಂಬೋಟಿ ಅರಣ್ಯ ವಲಯದಲ್ಲಿ ಪ್ರಕರಣ ದಾಖಲಿಸಿ ಉಳಿದ ನಾಲ್ವರನ್ನು ಬಿಟ್ಟು ಕಳುಹಿಸಿದ್ದರು. ಈ ಬಗ್ಗೆ ಟಿವಿ9 ವರದಿ ಮಾಡಿದ ಬೆನ್ನಲ್ಲೇ ಜಿಲ್ಲಾಧಿಕಾರಿ ನಿತೇಸ್ ಪಾಟೀಲ್ ಉಳಿದ ನಾಲ್ವರ ವಿರುದ್ಧವೂ ದೂರು ದಾಖಲಿಸಿ ಸೂಕ್ತ ತನಿಖೆ ನಡೆಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಭಾರೀ ಮಳೆ ಹಿನ್ನೆಲೆ ಜಲತಾಗಳು ದುಮ್ಮಿಕ್ಕುತ್ತಿದೆ, ನದಿಗಳು ಉಕ್ಕಿ ಹರಿಯುತ್ತಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿಯ ಜಾಂಬೋಟಿ ಬಳಿ ಇರುವ ಜಲಪಾತ ವೀಕ್ಷಣೆಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಅದರಂತೆ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಆದರೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಯ ಕಣ್ಣು ತಪ್ಪಿಸಿ ಹೆಸ್ಕಾಂ ಅಧಿಕಾರಿಗಳು ಮತ್ತು ವೈದ್ಯರ ತಂಡ ಜಲಪಾತದ ಬಳಿ ಮದ್ಯದ ಪಾರ್ಟಿ ನಡೆಸಿದ್ದರು. ಅಷ್ಟೇ ಅಲ್ಲದೆ, ಅಲ್ಲೇ ಅಡುಕೆ ಮಾಡಿ ಸೇವನೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Mon, 31 July 23

ತಾಜಾ ಸುದ್ದಿ
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ