AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಡಿ.ಕೆ.ಶಿವಕುಮಾರ್‌ ಬೆಳಗಾವಿ ಪ್ರವಾಸದ ವೇಳೆ ಕರ್ತವ್ಯಲೋಪ: ಡಿಹೆಚ್‌ಒಗೆ ಶೋಕಾಸ್​​ ನೋಟಿಸ್​​

Belagavi News: ಸಿಎಂ ಡಿ.ಕೆ. ಶಿವಕುಮಾರ್ ಅವರ ಬೆಳಗಾವಿ ಪ್ರವಾಸದ ವೇಳೆ ಸುಸಜ್ಜಿತ ಆ್ಯಂಬುಲೆನ್ಸ್ ಹಾಗೂ ತಜ್ಞ ವೈದ್ಯರನ್ನು ನಿಯೋಜಿಸದೆ ಶಿಷ್ಟಾಚಾರ ಉಲ್ಲಂಘಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ (DHO) ಈಶ್ವರ ಗಡಾದಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ನಿಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದರ ಕುರಿತು ಈ ನೋಟಿಸ್​​ ಸ್ವೀಕರಿಸಿದ ದಿನಾಂಕದಿಂದ ಏಳು ದಿನಗಳ ಒಳಗಾಗಿ ಲಿಖಿತ ಸಮಜಾಯಿಷಿಯನ್ನು ಸಲ್ಲಿಸುವಂತೆಯೂ ಸೂಚಿಸಲಾಗಿದೆ.

ಸಿಎಂ ಡಿ.ಕೆ.ಶಿವಕುಮಾರ್‌ ಬೆಳಗಾವಿ ಪ್ರವಾಸದ ವೇಳೆ ಕರ್ತವ್ಯಲೋಪ: ಡಿಹೆಚ್‌ಒಗೆ ಶೋಕಾಸ್​​ ನೋಟಿಸ್​​
ಬೆಳಗಾವಿ ಡಿಹೆಚ್‌ಒಗೆ ಶೋಕಾಸ್​​ ನೋಟಿಸ್​​Image Credit source: Tv9 Kannada
ಸಹದೇವ್​ ಮಾನೆ
| Edited By: |

Updated on:Jul 21, 2026 | 2:58 PM

Share

ಮುಖ್ಯಾಂಶಗಳು

  • ಸಿಎಂ ಪ್ರವಾಸದ ವೇಳೆ ಕರ್ತವ್ಯಲೋಪ ಆರೋಪ
  • ಬೆಳಗಾವಿ ಡಿಹೆಚ್​​ಒಗೆ ಶೋಕಾಸ್​​ ನೋಟಿಸ್​​ ಜಾರಿ
  • ಏಳು ದಿನಗಳ ಒಳಗಾಗಿ ಉತ್ತರಿಸುವಂತೆ ಸೂಚನೆ

ಬೆಂಗಳೂರು, ಜುಲೈ 21: ಸಿಎಂ ಡಿ.ಕೆ. ಶಿವಕುಮಾರ್‌ ಬೆಳಗಾವಿ ಪ್ರವಾಸದ ವೇಳೆ ಡಿಹೆಚ್‌ಒ ಯಡವಟ್ಟು ಮಾಡಿದ್ದು, ಅಡ್ವಾನ್ಸ್ ಲೈಫ್‌ ಸಪೋರ್ಟ್ ಆ್ಯಂಬುಲೆನ್ಸ್ ಮತ್ತು ತಜ್ಞ ವೈದ್ಯರ ನೇಮಿಸದೇ ಬೇಜವಾಬ್ದಾರಿ ತೋರಿರುವ ಆರೋಪ ಕೇಳಿಬಂದಿದೆ. ಸರ್ಕಾರ ನಿರ್ದೇಶನವಿದ್ದರೂ ಲೈಫ್‌ ಸಪೋರ್ಟ್ ಆ್ಯಂಬುಲೆನ್ಸ್ ನೀಡದೆ ಸಾಮಾನ್ಯ ಆ್ಯಂಬುಲೆನ್ಸ್ ನಿಯೋಜಿಸದ ಜೊತೆಗೆ ವೈದ್ಯಕೀಯ ತಂಡದೊಂದಿಗೆ ನಿರಂತರ ಸಂಪರ್ಕ ಸಾಧಿಸದೇ ನಿರ್ಲಕ್ಷ್ಯ ತೋರಿದ್ದಾರೆ. ಅಲ್ಲದೆ, ಸಿಎಂ ವಾಸ್ತವ್ಯ ಸ್ಥಳದಲ್ಲಿ ತಜ್ಞ ವೈದ್ಯರ ಬದಲು ಪಿಜಿ ವೈದ್ಯರ ನಿಯೋಜನೆ ಮಾಡುವ ಮೂಲಕ ಕರ್ತವ್ಯಲೋಪ ಎಸಗಿರುವ ಹಿನ್ನೆಲೆ ಶಿಷ್ಟಾಚಾರ ಉಲ್ಲಂಘಿಸಿದ ಡಿಹೆಚ್‌ಒ ಈಶ್ವರ ಗಡಾದಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಶೋಕಾಸ್​​ ನೋಟಿಸ್​​​ನಲ್ಲಿ ಏನಿದೆ?

ಮುಖ್ಯಮಂತ್ರಿಗಳ ಪ್ರವಾಸದ ವೇಳೆ ಅವರ ಭದ್ರತೆಗೆ ಅಗತ್ಯವಾಗಿದ್ದ ಅಡ್ವಾನ್ಸ್ ಲೈಫ್‌ ಸಪೋರ್ಟ್ ಆ್ಯಂಬುಲೆನ್ಸ್ ಮತ್ತು ತಜ್ಞ ವೈದ್ಯರ ನೇಮಿಸದೇ ಇರುವುದು ಪರಿಶೀಲನೆ ವೇಳೆ ದೃಢಪಟ್ಟಿದೆ. ಅಲ್ಲದೆ ಆ ವೇಳೆ ತಾವು ಕೂಡ ಹಾಜರಿಲ್ಲದೆ ಇರುವುದು ಗಮನಕ್ಕೆ ಬಂದಿದ್ದು, ಕನಿಷ್ಠ ಸೌಲಭ್ಯಗಳಾದ ಗ್ಲುಕೋಮೀಟರ್ ಮತ್ತು ಬಿಪಿ ಅಪಾರ್ಚರ್ಸ್ ಸಹ ಇಲ್ಲದಿರೋದು ಗೊತ್ತಾಗಿದೆ. ವಿಐಪಿ/ವಿವಿಐಪಿ ಪ್ರೋಟೋಕಾಲ್​​ಗೆ ಅನುಗುಣವಾಗಿ ಸುಸಜ್ಜಿತ ಜೀವ ರಕ್ಷಕ ವಾಹನ ಹಾಗೂ ಅಗತ್ಯ ಉಪಕರಣಗಳನ್ನು ಒದಗಿಸದೆ ಕರ್ತವ್ಯಲೋಪ ಎಸಗಲಾಗಿದೆ ಎಂದು ಶೋಕಾಸ್​​ ನೋಟಿಸ್​​ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ವಿಮೆ ಆಸೆಗೆ ತನ್ನದೇ ಅಂಗಡಿಯಲ್ಲಿ ಕಳ್ಳತನ ಮಾಡಿದ ಚಿನ್ನದಂಗಡಿ ಮಾಲೀಕ! ಕೊನೆಗೂ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ನಿಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದರ ಕುರಿತು ಈ ನೋಟಿಸ್​​ ಸ್ವೀಕರಿಸಿದ ದಿನಾಂಕದಿಂದ ಏಳು ದಿನಗಳ ಒಳಗಾಗಿ ಲಿಖಿತ ಸಮಜಾಯಿಷಿಯನ್ನು ಸಲ್ಲಿಸುವಂತೆಯೂ ಸೂಚಿಸಲಾಗಿದೆ. ಕಾಲಮಿತಿಯೊಳಗೆ ಸಮರ್ಪಕ ಉತ್ತರ ಸಲ್ಲಿಸದಿದ್ದಲ್ಲಿ ಅಥವಾ ಉತ್ತರ ತೃಪ್ತಿಕರವಾಗಿರದಿದ್ದಲ್ಲಿ ಅನ್ವಯಿಸುವ ನಿಯಮಗಳಡಿ ನಿಮ್ಮ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಸೂಚಿಸೋದಾಗಿ ಬೆಳಗಾವಿ ಜಿಲ್ಲಾ ಪಂಚಾಯತ್​​​ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೋಟಿಸ್​​​ನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:00 pm, Tue, 21 July 26

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ