ತೆಲಂಗಾಣದಲ್ಲಿ ಭೀಕರ ಅಪಘಾತ, ಬೆಳಗಾವಿ ಮೂಲದ ಒಂದೇ ಕುಟುಂಬದ ಐವರು ದುರ್ಮರಣ

ತೆಲಂಗಾಣದ ಕಡಪ-ಚಿತ್ತೂರ್​ ರಾಷ್ಟ್ರೀಯ ಹೆದ್ದಾರಿಯಯಲ್ಲಿ ಲಾರಿ ಹಾಗೂ ಕ್ರೂಸರ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೆಳಗಾವಿ ಮೂಲದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಇನ್ನು ಈ ದುರ್ಘಟನೆಯಲ್ಲಿ 11 ಜನರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತೆಲಂಗಾಣದಲ್ಲಿ ಭೀಕರ ಅಪಘಾತ, ಬೆಳಗಾವಿ ಮೂಲದ ಒಂದೇ ಕುಟುಂಬದ ಐವರು ದುರ್ಮರಣ
ಕ್ರೂಸರ್-ಲಾರಿ ಅಪಘಾತ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Sep 15, 2023 | 1:05 PM

ಬೆಳಗಾವಿ/ಮಠಮಪಲ್ಲಿ(ತೆಲಂಗಾಣ), (ಸೆಪ್ಟೆಂಬರ್ 15): ತೆಲಂಗಾಣದ (Telangana) ಸೂರ್ಯಪೇಠ ಜಿಲ್ಲೆಯ ಮಠಮಪಲ್ಲಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ಬೆಳಗಾವಿ (Belagavi) ಜಿಲ್ಲೆ ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಇಂದು (ಸೆಪ್ಟೆಂಬರ್ 15) ಬೆಳಗಿನ ಜಾವ 3:30 ರ ಸುಮಾರಿಗೆ ಕಡಪ-ಚಿತ್ತೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಸರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕ್ರೂಸರ್​ನಲ್ಲಿದ್ದ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಶೋಭಾ ಆಜೂರ (36), ಅಂಬಿಕಾ ಆಜೂರ (14), ಮಾನಂದಾ ಆಜೂರ (32), ಹನುಮಂತ ಆಜೂರ (42) ಚಾಲಕ ಹನುಮಂತ ಜಾಧವ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು 11 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ರೂಸರ್ ವಾಹನ ಮಾಡಿಕೊಂಡು ಮೊದಲು ಶ್ರೀಶೈಲ ದರ್ಶನ ಪಡೆದು ಬಳಿಕ ತಿರುಪತಿಗೆ ತೆರಳಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಇಂದು ಮನೆಗೆ ವಾಪಸ್ ಆಗುತ್ತಿದ್ದರು. ಆದ್ರೆ, ಜವರಾಯ ಅಟ್ಟಹಾಸ ಮೆರೆದಿದ್ದು, ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ ಮನೆಗೆ ಬರುತ್ತಿದ್ದವರ ಪೈಕಿ ಐವರು ಮಸಣ ಸೇರಿದ್ದಾರೆ. ಇನ್ನು ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಯುತ್ತಿದ್ದಾರೆ.

Published On - 11:59 am, Fri, 15 September 23

20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್