ದೇಶದಲ್ಲಿ ಅತೀ ಹೆಚ್ಚು ಲಸಿಕೆ ನೀಡುವುದರಲ್ಲಿ ದ್ವಿತೀಯ ಸ್ಥಾನ‌ ಗಳಿಸಿದ ಹೆಮ್ಮೆ ಬೆಳಗಾವಿ ಜಿಲ್ಲೆಗೆ: ಜಿಲ್ಲಾಧಿಕಾರಿ ಹಿರೇಮಠ

ನಿರೀಕ್ಷಿತ ಗುರಿ ಸಾಧನೆಯಾಗದಿದ್ದರೂ ಒಟ್ಟಾರೆ ಲಸಿಕೆ ಪ್ರಮಾಣದಲ್ಲಿ ಇಡೀ ದೇಶದಲ್ಲಿಯೇ ಅತೀ ಹೆಚ್ಚು ಲಸಿಕೆ ನೀಡುವುದರಲ್ಲಿ ದ್ವಿತೀಯ ಸ್ಥಾನ‌ ಗಳಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ.

ದೇಶದಲ್ಲಿ ಅತೀ ಹೆಚ್ಚು ಲಸಿಕೆ ನೀಡುವುದರಲ್ಲಿ ದ್ವಿತೀಯ ಸ್ಥಾನ‌ ಗಳಿಸಿದ ಹೆಮ್ಮೆ ಬೆಳಗಾವಿ ಜಿಲ್ಲೆಗೆ: ಜಿಲ್ಲಾಧಿಕಾರಿ ಹಿರೇಮಠ
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ:  ಸೆಪ್ಟೆಂಬರ್​ 17 ರಂದು ನಡೆದ ಮೆಗಾ‌ ಲಸಿಕಾ ಮೇಳದಲ್ಲಿ ಇಡೀ ದೇಶದಲ್ಲಿಯೇ ಬೆಳಗಾವಿ ಜಿಲ್ಲೆಯು ಎರಡನೇ ಸ್ಥಾನ ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 4,09,977 ಲಸಿಕೆ ನೀಡುವ ಮೂಲಕ ಪ್ರಥಮ ಸ್ಥಾನ ಪಡೆದಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಸೆಪ್ಟೆಂಬರ್​ 17 ರಂದು‌‌ ಒಂದೇ ದಿನದಲ್ಲಿ 2,57,604 ಲಸಿಕೆ ನೀಡುವ ಮೂಲಕ ದ್ವಿತೀಯ ಸ್ಥಾನದಲ್ಲಿದೆ.
ಬೆಳಗಾವಿ ಜಿಲ್ಲೆಯು ಮೂರು‌ ಲಕ್ಷ ಲಸಿಕೆಯ ಗುರಿಯನ್ನು ಹೊಂದಿತ್ತು. ನಿರೀಕ್ಷಿತ ಗುರಿ ಸಾಧನೆಯಾಗದಿದ್ದರೂ ಒಟ್ಟಾರೆ ಲಸಿಕೆ ಪ್ರಮಾಣದಲ್ಲಿ ಇಡೀ ದೇಶದಲ್ಲಿಯೇ ಅತೀ ಹೆಚ್ಚು ಲಸಿಕೆ ನೀಡುವುದರಲ್ಲಿ ದ್ವಿತೀಯ ಸ್ಥಾನ‌ ಗಳಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ.

ಈ ಸಾಧನೆಗೆ ಶ್ರಮಿಸಿದ ಕಂದಾಯ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ನಗರ ಸ್ಥಳೀಯ ಸಂಸ್ಥೆಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸುತ್ತೇನೆ.  ಮೆಗಾ ಲಸಿಕಾಮೇಳ ಯಶಸ್ವಿಯಾಗಲು ಸಹಕರಿಸಿದ ಎಲ್ಲ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ  ಧನ್ಯವಾದಗಳು ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಹೇಳಿದ್ದಾರೆ.

vaccination

ಮೆಗಾ ಲಸಿಕಾಮೇಳ, ದೇಶಕ್ಕೆ‌ ಬೆಳಗಾವಿ ದ್ವಿತೀಯ ಸ್ಥಾನ

ಕೊಪ್ಪಳ: ನಾವು ಸತ್ರೂ ಲಸಿಕೆ ಹಾಕಿಸಿಕೊಳ್ಳಲ್ಲ; ವಿಡಿಯೋ ಫುಲ್ ವೈರಲ್
ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಇರುವ ಅಸ್ತ್ರವೆಂದರೆ ಅದು ಕೊರೊನಾ ಲಸಿಕೆ. ಆದರೆ ಕೊರೊನಾ ಲಸಿಕೆ ಪಡೆಯಲು ವ್ಯಕ್ತಿಯೊಬ್ಬರು ಹಿಂದೇಟು ಹಾಕಿರುವ ಘಟನೆ ಕೊಪ್ಪಳ ತಾಲೂಕಿನ ಇರಕಲ್ ಗಡ ಗ್ರಾಮದಲ್ಲಿ ನಡೆದಿದೆ. ಲಸಿಕೆ ಪಡೆಯುವುದರಿಂದ ಏನು ಪ್ರಯೋಜನ ಅಂತ ವ್ಯಕ್ತಿ ಪ್ರಶ್ನೆ ಮಾಡಿದ್ದಾರೆ. ಅಧಿಕಾರಿಗಳು ಎಷ್ಟೇ ಮನವೊಲಿಸಿದರೂ ಲಸಿಕೆ ಪಡೆಯಲು ವ್ಯಕ್ತಿ ನಿರಾಕರಣೆ ಮಾಡಿದ್ದು, ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ನಾವು ಹೀಗೆ ಸಾಯಲಿ, ಲಸಿಕೆ ಹಾಕಿಸಿಕೊಳ್ಳುವುದಿಲ್ಲ ಅಂತ ವ್ಯಕ್ತಿ ನಿರಾಕರಣೆ ಮಾಡಿದ್ದಾರೆ. ಯಾವ ಕೊರೊನಾ ಇಲ್ಲ, ಏನಿಲ್ಲ ಎಂದು ಅಧಿಕಾರಿಗಳೊಂದಿಗೆ ವ್ಯಕ್ತಿ ವಾದಕ್ಕಿಳಿದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಪ್ಪಳದಲ್ಲಿ ಮಾತ್ರವಲ್ಲ ರಾಜ್ಯದ ಬಹುತೇಕ ಜನರು ಕೊರೊನಾ ಲಸಿಕೆ ಪಡೆಯಲು ಹಿಂದೆ ಸರಿಯುತ್ತಿದ್ದಾರೆ. ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡಪರಿಣಾಮವಿಲ್ಲ ಅಂತ ಹೇಳಿದ್ದರೂ ಜನರು ಮಾತ್ರ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ.

ಇದನ್ನೂ ಓದಿ:
2.5 ಕೋಟಿ ಡೋಸ್​ ದಾಖಲೆ ಬರೆದ ಕೊರೊನಾ ಲಸಿಕೆ ಅಭಿಯಾನ; ಎರಡನೇ ಸ್ಥಾನದಲ್ಲಿದೆ ಕರ್ನಾಟಕ

Vaccine Drive: ಕರ್ನಾಟಕದಲ್ಲಿ ಇಂದು ದೇಶದಲ್ಲೇ ಅತಿ ಹೆಚ್ಚು ಕೊವಿಡ್ ಲಸಿಕೆ ವಿತರಣೆ: ನಿಮ್ಮ ಜಿಲ್ಲೆಯಲ್ಲಿ ಎಷ್ಟು ಡೋಸ್? ಚೆಕ್ ಮಾಡಿ

Read Full Article

Click on your DTH Provider to Add TV9 Kannada