ಬೆಳಗಾವಿ: ಭೀಕರ ಬರದ ಛಾಯೆ: ಮಳೆ ಆಗದೆ ಒಣಗಿ ಹುಲ್ಲಿನಂತಾದ ಭತ್ತ, ಕಂಗಾಲಾದ ರೈತರು

Belagavi News: ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಭಾಗದಲ್ಲಿ ಅತೀ ಹೆಚ್ಚು ಭತ್ತ ಬೆಳೆಯುತ್ತಾರೆ. ಉತ್ತಮವಾದ ಮಳೆಯಾಗಿ ಒಳ್ಳೆಯ ಫಸಲು ತೆಗೆಯುವ ನಿರೀಕ್ಷೆಯಲ್ಲಿದ್ದ ರೈತರಿಗೆ ಈ ಬಾರಿ ಮಳೆರಾಯ ಶಾಕ್ ಕೊಟ್ಟಿದೆ. ಸಾಲ ಮಾಡಿ ಬಿತ್ತನೆ ಮಾಡಿದ ರೈತರಿಗೆ ಸೂಕ್ತ ಸಮಯಕ್ಕೆ ಸರಿಯಾದ ಮಳೆ ಆಗದ ಹಿನ್ನೆಲೆ ಇದೀಗ ಸಂಪೂರ್ಣವಾಗಿ ಬೆಳೆ ಒಣಗಿ ಹೋಗಿದ್ದು, ರೈತರು ಕಂಗಾಲಾಗಿದ್ದಾರೆ.

ಬೆಳಗಾವಿ: ಭೀಕರ ಬರದ ಛಾಯೆ: ಮಳೆ ಆಗದೆ ಒಣಗಿ ಹುಲ್ಲಿನಂತಾದ ಭತ್ತ, ಕಂಗಾಲಾದ ರೈತರು
ಒಣಗಿ ಹುಲ್ಲಿನಂತಾದ ಭತ್ತ
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on:Sep 25, 2023 | 3:33 PM

ಬೆಳಗಾವಿ, ಸೆಪ್ಟೆಂಬರ್​ 25: ರಾಜ್ಯದ ಅತಿದೊಡ್ಡ ಜಿಲ್ಲೆಗಳಲ್ಲಿ ಒಂದಾದ ಆ ಜಿಲ್ಲೆಯ ಉಪವಿಭಾಗವೊಂದರಲ್ಲಿ ಪಂಚನದಿಗಳು ಹರಿದಿವೆ. ಆ ಉಪವಿಭಾಗದಲ್ಲಿ ಶೇಕಡ 25ರಷ್ಟು ಗ್ರಾಮಗಳು ನದಿಪಾತ್ರದಲ್ಲಿದ್ದು ನೀರಾವರಿ ಪ್ರದೇಶವಾಗಿದ್ದರೆ. ಉಳಿದ ಶೇಕಡ 75ರಷ್ಟು ಭಾಗದಲ್ಲಿ ನೀರಿಲ್ಲದೇ ಬೆಳೆಗಳು ಒಣಗುತ್ತಿವೆ. ಮಳೆ ಆಗದ ಹಿನ್ನೆಲೆ ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದಲ್ಲಿ ಬೆಳೆದ ಅತೀ ಹೆಚ್ಚು ಭತ್ತ (paddy crop) ಒಣಗಿ ಹುಲ್ಲಿನಂತಾಗಿದೆ. ಮಳೆ ಇಲ್ಲದ್ದಕ್ಕೆ ಒಣಗಿದ ಬೆಳಿಯಿಂದ ರೈತರು ಕಂಗಾಲಾಗಿದ್ದಾರೆ.

ಜಿಲ್ಲೆಯಲ್ಲಿ ಭೀಕರ ಬರದ ಪರಿಸ್ಥಿತಿ ಎದುರಾಗಿದೆ. ಸಂತೋಷ ಪಾಟೀಲ್ ಎಂಬುವವರ ಮೂರು ಎಕರೆಯಲ್ಲಿ ಭತ್ತ ಬೆಳೆದಿದ್ದರು. ಆದರೆ ಮಳೆ ಆಗದ ಹಿನ್ನೆಲೆ ಬೆಳೆ ಸಂಪೂರ್ಣ ಹಾಳಾಗಿದೆ. ಹಾಗಾಗಿ ಭತ್ತವನ್ನ ಕಿತ್ತು ಗದ್ದೆಯಿಂದ ಹೊರ ಎಸೆದಿದ್ದಾರೆ.

ಮಕ್ಕಳ ಶಾಲೆಗೆ ಶುಲ್ಕ ಕಟ್ಟಲು ಸಹ ಹಣವಿಲ್ಲ‌ದಂತಾಗಿದೆ. ಸಾಲ ಮಾಡಿ ಬಿತ್ತನೆ ಮಾಡಿದ್ದು ಬೆಳೆಯೂ ಕೈ ಕೊಟ್ಟಿದೆ. ಸಾಲಗಾರರು ವಾಪಾಸ್ ಹಣ ಕೊಡುವಂತೆ ಕೇಳುತ್ತಿದ್ದಾರೆ. ಇನ್ನೊಂದಡೆ ಸರ್ಕಾರ ಪರಿಹಾರ ಘೋಷಣೆ ಮಾಡುತ್ತಿಲ್ಲ. ಬದುಕುವುದೇ ಕಷ್ಟವಾಗಿದ್ದು ಸೂಕ್ತ ಪರಿಹಾರ ನೀಡದಿದ್ದರೆ ಆತ್ಮಹತ್ಯೆ ಒಂದೇ ದಾರಿ ಅಂತ ರೈತರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಮಳೆ ಬಾರದೇ ಒಣಗುತ್ತಿದೆ ಬೆಳೆ: ರೈತರ ನರಕಯಾತನೆ, ನದಿಪಾತ್ರದ ಗ್ರಾಮಗಳಲ್ಲಿ ಕಳ್ಳರ ಕಾಟ

ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಭಾಗದಲ್ಲಿ ಅತೀ ಹೆಚ್ಚು ಭತ್ತ ಬೆಳೆಯುತ್ತಾರೆ. ಉತ್ತಮವಾದ ಮಳೆಯಾಗಿ ಒಳ್ಳೆಯ ಫಸಲು ತೆಗೆಯುವ ನಿರೀಕ್ಷೆಯಲ್ಲಿದ್ದ ರೈತರಿಗೆ ಈ ಬಾರಿ ಮಳೆರಾಯ ಶಾಕ್ ಕೊಟ್ಟಿದೆ. ಸಾಲ ಮಾಡಿ ಬಿತ್ತನೆ ಮಾಡಿದ ರೈತರಿಗೆ ಸೂಕ್ತ ಸಮಯಕ್ಕೆ ಸರಿಯಾದ ಮಳೆ ಆಗದ ಹಿನ್ನೆಲೆ ಇದೀಗ ಸಂಪೂರ್ಣವಾಗಿ ಬೆಳೆ ಒಣಗಿ ಹೋಗಿದೆ.

ಇಷ್ಟೊತ್ತಿಗಾಗಲೇ ಫಸಲು ಕೈಗೆ ಬರುತ್ತೆ ಅಂದುಕೊಂಡಿದ್ದವರಿಗೆ ಒಣಗಿದ ಬೆಳೆ ಕಂಡು ಸಂಕಟ ಪಡುತ್ತಿದ್ದಾರೆ. ಅಲ್ಪಸ್ವಲ್ಪ ಬೆಳೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದವರಿಗೆ ಆಗಷ್ಟ್ ತಿಂಗಳಲ್ಲಿ ಒಂದೇ ಒಂದು ಹನಿ ಮಳೆ ಆಗದ ಹಿನ್ನೆಲೆ ಭತ್ತದ ಬೆಳೆ ಸಂಪೂರ್ಣವಾಗಿ ಒಣಗಿ ಹೋಗಿದೆ. ಮಳೆಗೆ ಕಾದು ಕಾದು ಸುಸ್ತಾದ ರೈತರು ಇದೀಗ ಬೆಳೆ ಒಣಗಿದ್ದನ್ನ ಕಂಡು ಭತ್ತದ ಬೆಳೆಯನ್ನ ಕಟಾವು ಮಾಡಿ ಬಿಸಾಡುತ್ತಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಜಿಲ್ಲೆಯಲ್ಲಿ ಬರದ ಪರಿಸ್ಥಿತಿ: ರೈತನ ಪಾಲಿಗೆ ಕಹಿಯಾದ ಸಿಹಿ ಗೆಣಸು

ಮುಂದಿನ ಬೆಳೆ ಬೆಳೆಯಲು ಭೂಮಿಯನ್ನ ತಯಾರು ಮಾಡುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇನ್ನೂ ಕಟಾವು ಮಾಡಲು ಕೂಡ ಹಣ ಖರ್ಚು ಮಾಡಬೇಕು, ಬಿತ್ತನೆ, ಕೀಟನಾಶಕ ಸೇರಿದಂತೆ ಎಲ್ಲದಕ್ಕೂ ಖರ್ಚಾಗುತ್ತೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಅಂತಾ ರೈತರು ಒತ್ತಾಯ ಮಾಡಿದ್ದಾರೆ.

ಜಿಲ್ಲೆಯಲ್ಲಿ ಮಳೆ ಆಗದ ಹಿನ್ನೆಲೆ ಸಾಕಷ್ಟು ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವು ಕಡೆಗಲ್ಲಿ ಬೆಳೆ ಒಣಗಿ ರೈತರೇ ಕಿತ್ತೆಸೆಯುವ ಕೆಲಸ ಮಾಡ್ತಿದ್ದು, ಬೆಳೆ ಹಾನಿ ಸರ್ವೇ ಮಾಡಲು ಅಧಿಕಾರಿಗಳು ಮುಂದಾಗದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿ ಬೆಳೆ ಹಾನಿ ಪ್ರದೇಶದ ಸರ್ವೇ ಮಾಡಿಸಿ ಪರಿಹಾರ ನೀಡುವ ಕೆಲಸವಾಗಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:32 pm, Mon, 25 September 23

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ