ಗದಗ: ಆರ್‌ಸಿಬಿ ಗೆದ್ದ ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿ ಹೃದಯಾಘಾತದಿಂದ ಸಾವು
ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಐಪಿಎಲ್ ಗೆಲುವಿನ ಸಂಭ್ರಮದ ನಡುವೆ ಬೆಳಗಾವಿ ಜಿಲ್ಲೆಯಲ್ಲಿ ದುರಂತ ಒಂದು ಸಂಭವಿಸಿದೆ. ಹೃದಯಾಘಾತದಿಂದ ಓರ್ವ ಅಭಿಮಾನಿ ಸಾವನ್ನಪ್ಪಿದ್ದಾನೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಳಗಾವಿ, ಜೂನ್ 04: ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangaluru) ಇತಿಹಾಸ ಸೃಷ್ಟಿಸಿದೆ. 18 ವರ್ಷಗಳ ಬಳಿಕ ಚೊಚ್ಚಲ ಬಾರಿಗೆ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದೆ. ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ಆರ್‌ಸಿಬಿ ಐಪಿಎಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಆರ್‌ಸಿಬಿ ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಗೆಲ್ಲುತ್ತಿದ್ದಂತೆ ಎಲ್ಲೆಡೆ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಈ ವೇಳೆ ಹೃದಯಾಘಾತದಿಂದ ಓರ್ವ ಅಭಿಮಾನಿ (fan) ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್‌ನಲ್ಲಿ ಟ್ರೋಫಿ ಗೆದ್ದ ಹಿನ್ನೆಲೆ ಎಲ್ಲೆಡೆ ಸಂಭ್ರಮ ಜೋರಾಗಿದೆ. ಇತ್ತ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಕೂಡ ಸಂಭ್ರಮ ಮುಗಿಲು ಮುಟ್ಟಿತ್ತು. ಈ ಸಂಭ್ರಮದಲ್ಲಿ ಭಾಗಿಯಾಗಿದ್ದ ಅಭಿಮಾನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕುಣಿಯುತ್ತಿದ್ದ ವೇಳೆ ಕುಸಿದುಬಿದ್ದು ಮಂಜುನಾಥ್ ಕುಂಬಾರ(25) ಸಾವನ್ನಪ್ಪಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿ: ಆರ್‌ಸಿಬಿ ಅಭಿಮಾನಿ ಸಾವು
ಇನ್ನೂ ಶಿವಮೊಗ್ಗದಲ್ಲಿ ಕೂಡ ಸಂಭ್ರಮಾಚರಣೆ ವೇಳೆ ಆರ್‌ಸಿಬಿ ಅಭಿಮಾನಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದು ಅಭಿಮಾನಿ ಅಭಿ ದುರ್ಮರಣ ಹೊಂದಿದ್ದಾರೆ. ಸಂಭ್ರಮಾಚರಣೆ ಮಾಡುವ ವೇಳೆ ಅಪಘಾತ ಸಂಭವಿಸಿದೆ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಸ್, ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬೆನಚಿನಮರಡಿ ಗ್ರಾಮದ ಹೊರವಲಯದಲ್ಲಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದು, 15ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಕೊಳವಿ ಗ್ರಾಮದ ಯಲ್ಲವ್ವ ಬೀರನಗಡ್ಡಿ(70) ಮೃತ ಮಹಿಳೆ. ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಗೋಕಾಕ್ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಚಿತ್ರದುರ್ಗ: ಮಗಳ ಅಡ್ಮಿಷನ್ಗಾಗಿ ಊರಿಗೆ ತೆರಳುತ್ತಿದ್ದ ತಂದೆಯನ್ನ ಮಾರ್ಗ ಮಧ್ಯೆ ಕೊಂದ ಅಪರಿಚಿತರು
ಬೈಲಹೊಂಗಲ ಗೋಕಾಕ್ ಮಾರ್ಗದಲ್ಲಿ ಬಸ್ ಸಂಚರಿಸುತಿತ್ತು. ಡಿಕ್ಕಿ ರಭಸಕ್ಕೆ ಪಲ್ಟಿಯಾಗಿದ್ದ ಬಸ್ ಅಡಿ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ. ಬಸ್ನಲ್ಲಿದ್ದ ಪ್ರಯಾಣಿಕರನ್ನು ಸ್ಥಳೀಯರು ಕಿಟಕಿ ಗಾಜುಗಳನ್ನ ಒಡೆದು ರಕ್ಷಿಸಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.







