ಬೊಮ್ಮಾಯಿ ಮನವಿ ನಂತರ ಪ್ರತಿಭಟನೆ ಹಿಂಪಡೆದ ರೈತರು: ಜನವರಿ 3, 4ರಂದು ಸಿಎಂ ಭೇಟಿಗೆ ಅವಕಾಶ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವಿ ನಂತರ ಬೆಳಗಾವಿಯ ಸುವರ್ಣಸೌಧದ ಬಳಿಯ ಪ್ರತಿಭಟನೆಯನ್ನು ರೈತರು ಹಿಂಪಡೆದಿದ್ದಾರೆ.
ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವಿ ನಂತರ ರೈತರು ಪ್ರತಿಭಟನೆ ಹಿಂಪಡೆದಿದ್ದಾರೆ. ಇಂದು (ಡಿ.19) ಬೆಳಿಗ್ಗೆ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದಂತೆ ರೈತರು ಪ್ರತಿಭಟನೆಗೆ ಇಳಿದಿದ್ದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರ ಮನವೊಲಿಸಲು ಯಶಸ್ವಿಯಾಗಿದ್ದಾರೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಮುಖ್ಯಮಂತ್ರಿ ಬೊಮ್ಮಾಯಿ ಅಧಿವೇಶನದಲ್ಲಿ ಬ್ಯುಸಿಯಾಗಿದ್ದಾರೆ. 2023ರ ಜನವರಿ 3 ಮತ್ತು 4ರಂದು ಭೇಟಿಗೆ ಅವಕಾಶ ನೀಡಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ನಾಳೆ ವಿಧಾನಸಭೆ ಅಧಿವೇಶನದಲ್ಲಿ SC, ST ಮೀಸಲಾತಿ ಹೆಚ್ಚಳ ವಿಧೇಯಕ ಸೇರಿ ಒಟ್ಟು 4 ಮಸೂದೆ ಮಂಡನೆ
ಸುವರ್ಣ ಸೌಧ 4 ಕಿಲೋ ಮೀಟರ್ ಸುತ್ತ ಸಿಸಿಟಿವಿ ಅಳವಡಿಕೆ
ಅಧಿವೇಶನ ಹಿನ್ನಲೆ ಸುವರ್ಣ ಸೌಧ ಸುತ್ತ 4 ಕಿಲೋ ಮೀಟರ್ ಸಿಸಿಟಿವಿ ಅಳವಡಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಹಾಗೂ ಪ್ರತಿಭಟನೆ ಹಿನ್ನಲೆ ಅಳವಡಿಸಲಾಗಿದೆ. ಪೊಲೀಸ್ ಇಲಾಖೆಯಿಂದ ಸಿಸಿಟಿವಿ ಅಳವಡಿಸಲಾಗಿದ್ದು, ಕಮಾಂಡೆಂಟ್ ರೂಮ್ ಮೂಲಕ ನಿಗಾ ವಹಿಸಲಾಗುವುದು ಎಂದರು.
ಇದನ್ನೂ ಓದಿ: ವಿಧಾನಪರಿಷತ್ ಸಭಾಪತಿ ಚುನಾವಣೆ: ನಾಳೆ ಮಧ್ಯಾಹ್ನ ನಾಮಪತ್ರ ಸಲ್ಲಿಸಲಿರುವ ಬಸವರಾಜ ಹೊರಟ್ಟಿ
ನಿಪ್ಪಾಣಿ ಪುರಸಭೆ ಮೇಲೆ ಭಗವಾಧ್ವಜ ಹಾರಿಸಿದ ವಿಚಾರವಾಗಿ ಮಾತನಾಡಿದ ಅವರು ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಯಮಕನಮರಡಿಯಲ್ಲಿ ಕಳ್ಳತನ ಪ್ರಕರಣವೊಂದರಲ್ಲಿ ಗೋಲ್ಡ್ ರಿಕವರಿಯಲ್ಲಿ ಪೊಲೀಸರ ಮೇಲೆ ಬಂದ ಆರೋಪದ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಮಾಹಿತಿ ಪಡೆಯುತ್ತೇನೆ. ಬಳಿಕ ಹೇಳಿಕೆ ನೀಡುತ್ತೇನೆ. ಅದೇನೆ ಇದ್ದರು ಕಾನೂನು ಪ್ರಕ್ರಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:41 pm, Mon, 19 December 22