AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಪ್ರೀತಿ ನಿರಾಕರಿಸಿದ್ದಕ್ಕೆ ನರ್ಸ್​ ಮೇಲೆ ಮಾರಣಾಂತಿಕ ಹಲ್ಲೆ, ಮನನೊಂದ ತಂದೆ ಸಾವು

ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ನರ್ಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಆಕೆ ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೋಪಗೊಂಡ ಆತ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಈ ಘಟನೆಯಿಂದ ಮನನೊಂದ ನರ್ಸ್ ತಂದೆ ಮೃತಪಟ್ಟಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ ಮತ್ತು ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹದೇವ್​ ಮಾನೆ
| Edited By: |

Updated on: Nov 28, 2024 | 10:37 AM

Share

ಬೆಳಗಾವಿ, ನವೆಂಬರ್ 28: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ನರ್ಸ್​ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಅಕ್ಟೋಬರ್ 30ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೃತ್ಯದ ಸಿಸಿಟಿವಿ ವಿಡಿಯೋ ಕೂಡ ಲಭ್ಯವಾಗಿದೆ. ಪಾಗಲ್ ಪ್ರೇಮಿ ಪ್ರಕಾಶ್ ಜಾಧವ್​​ ಎಂಬಾತ ಕೃತ್ಯ ಎಸಗಿದ್ದಾನೆ. ಏತನ್ಮಧ್ಯೆ, ಮಗಳ ಮೇಲಿನ ದಾಳಿಯಿಂದ ಮನನೊಂದ ಆಕೆಯ ತಂದೆ ಮೃತಪಟ್ಟಿದ್ದಾರೆ.

ಘಟನೆಯ ಹಿನ್ನೆಲೆ

ಪ್ರೀತಿಸುವಂತೆ ನರ್ಸ್ ಹಿಂದೆ ಬಿದ್ದಿದ್ದ ಆರೋಪಿ ಪ್ರಕಾಶ್​​, ಆಕೆ ಪ್ರೀತಿಸಲು ನಿರಾಕರಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಕೈ ಚೀಲದಲ್ಲಿ ಮಚ್ಚು ಇಟ್ಟುಕೊಂಡು ಬಂದಿದ್ದ ಆತ, ಆಸ್ಪತ್ರೆಯ ಕೌಂಟರ್​ಗೆ ನುಗ್ಗಿ ನರ್ಸ್​ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಆತನ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಘಟನೆ ಬಗ್ಗೆ ಮಾಹಿತಿ ದೊರೆತ ಕೂಡಲೇ ಆರೋಪಿಯನ್ನು ಬಂಧಿಸಲಾಗಿದೆ. ಖಡೇಬಜಾರ್ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆಯಾಗೆಂದು ಪ್ರತಿ ದಿನ ಪೀಡಿಸುತ್ತಿದ್ದ ಆರೋಪಿ

ಬೆಳಗಾವಿಯ ಖಾಸಗಿ ಆಸ್ಪತ್ರೆ ಬಳಿಯ ಕಾಲೋನಿಯಲ್ಲಿ ನೆಲೆಸಿದ್ದ ಪ್ರಕಾಶ್​​, ಪ್ರೀತಿಸುವಂತೆ ನರ್ಸ್ ಹಿಂದೆ ಬಿದ್ದಿದ್ದ. ಮದುವೆ ಆಗುವಂತೆ ಪ್ರತಿದಿನ ನರ್ಸ್​ಗೆ ಪೀಡಿಸುತ್ತಿದ್ದ. ಕೆಲ ದಿನಗಳ ಹಿಂದೆ ತನ್ನ ಕುಟುಂಬದ ಜೊತೆ ನರ್ಸ್​ ಮನೆಗೆ ಹೋಗಿದ್ದ. ನರ್ಸ್ ಕುಟುಂಬಸ್ಥರ ಬಳಿ ಮದುವೆ ಮಾಡಿಕೊಡುವಂತೆ ಪ್ರಸ್ತಾಪಿಸಿದ್ದ. ಆದರೆ ಮದುವೆ ಮಾಡಿಕೊಡಲು ನರ್ಸ್ ಕುಟುಂಬಸ್ಥರು ನಿರಾಕರಿಸಿದ್ದರು. ಇದಾದ ಬಳಿಕವೂ, ಮದುವೆ ಆಗುವಂತೆ ನರ್ಸ್​ ಬೆನ್ನುಬಿದ್ದದ್ದ ಪ್ರಕಾಶ್​​, ಆಕೆ ಸ್ಪಂದಿಸದಿದ್ದಾಗ ಆಸ್ಪತ್ರೆಗೆ ನುಗ್ಗಿ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.

ಏತನ್ಮಧ್ಯೆ ಮಗಳ ಮೇಲಿನ ಹಲ್ಲೆ ವಿಚಾರದಿಂದ ನೊಂದಿದ್ದ ನರ್ಸ್ ತಂದೆ ಮೃತಪಟ್ಟಿದ್ದಾರೆ. ಮಗಳ ಸ್ಥಿತಿ ಹೀಗಾಯ್ತಲ್ಲ ಎಂದು ನೊಂದಿದ್ದ ಅವರು, ಘಟನೆ ನಡೆದು 15 ದಿನದ ಬಳಿಕ ಮೃತಪಟ್ಟಿದ್ದಾರೆ. ಆರೋಪಿಯಿಂದ ಮಗಳಿಗೆ ಜೀವ ಬೆದರಿಕೆ ಇದ್ದ ಬಗ್ಗೆ ಅವರು ಹೆಚ್ಚು ಆತಂಕಕ್ಕೊಳಗಾಗಿದ್ದರು. ಜೈಲಿನಿಂದ ಹೊರಬಂದ ಬಳಿಕ ಆರೋಪಿ ಏನಾದರೂ ಮಾಡಿದಾನೆಂಬ ಆತಂಕ ಅವರನ್ನು ಕಾಡುತ್ತಿತ್ತು. ಇದೇ ಆತಂಕದಿಂದ ಅವರು ಮೃತಪಟ್ಟಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಲವ್ ವಿಚಾರಕ್ಕೆ ನಡೆಯಿತು ಭೀಕರ ಗುಂಡಿನ ದಾಳಿ, ಕೂದಲೆಳೆ ಅಂತರದಲ್ಲಿ ಪಾರಾದ ಯುವಕ

ಸದ್ಯ ಇಬ್ಬರು ಹೆಣ್ಣು ಮಕ್ಕಳು ತಂದೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಮನೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು, ತಾಯಿ ವಾಸ ಮಾಡುತ್ತಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಸಂತ್ರಸ್ತೆ ನರ್ಸ್ ಹೇಳಿದ್ದಾರೆ.

ಮತ್ತೊಂದೆಡೆ, ಬೆಳಗಾವಿ ನಗರದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚುತ್ತಿರುವ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಧ್ಯಾಹ್ನ ತುರ್ತುಸಭೆ ಕರೆದಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು