Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ವಿದ್ಯುತ್ ತಂತಿ ತಗುಲಿ ತಂದೆ-ಮಗ ಸ್ಥಳದಲ್ಲೇ ದುರ್ಮರಣ

ಬೆಳಗಾವಿ ಜಿಲ್ಲೆಯ ಅಥಣಿ (Athani)  ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ.

ಬೆಳಗಾವಿ: ವಿದ್ಯುತ್ ತಂತಿ ತಗುಲಿ ತಂದೆ-ಮಗ ಸ್ಥಳದಲ್ಲೇ ದುರ್ಮರಣ
ಮೃತ ತಂದೆ, ಮಗ
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 26, 2023 | 8:14 PM

ಬೆಳಗಾವಿ, ನ.26: ವಿದ್ಯುತ್ ತಂತಿ ತಗುಲಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ (Athani)  ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ. ತಂದೆ ಮಲ್ಲಿಕಾರ್ಜುನ ಪೂಜಾರಿ(32), ಮಗ ಪ್ರೀತಮ್(7) ಮೃತ ರ್ದುದೈವಿಗಳು. ಪ್ರೀತಮ್​ನನ್ನು ತಂದೆ ಮಲ್ಲಿಕಾರ್ಜುನ ತೋಟಕ್ಕೆ ಕರೆದುಕೊಂಡು ಹೋಗಿದ್ದ. ಈ ವೇಳೆ ಮೋಟಾರ್ ಆನ್ ಮಾಡಿ ವಾಟರ್‌ವಾಲ್ ಟರ್ನ್ ಮಾಡುವಾಗ ಮಲ್ಲಿಕಾರ್ಜುನ್‌ಗೆ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ನೋಡಿದ ಮಗ, ತಂದೆಯನ್ನು ರಕ್ಷಿಸಲು ಕೈ ಹಿಡಿದಾಗ ಈ ದುರ್ಘಟನೆ ಸಂಭವಿಸಿದೆ. ಈ ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎತ್ತುಗಳನ್ನ ಮೈ ತೊಳೆಯಲು ಹೋಗಿ 16 ವರ್ಷದ ಬಾಲಕ ಸಾವು

ಹಾವೇರಿ: ಹಾನಗಲ್ ತಾಲೂಕಿನ ಮಲಗುಂದ ಗ್ರಾಮದಲ್ಲಿ ಎತ್ತುಗಳಿಗೆ ಮೈತೊಳೆಯಲು ಹೋಗಿದ್ದಾಗ ಸುದೀಪ್​ ಎಂಬ 16 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ದೊಡ್ಡಕೋವಿ(16) ಮೃತ ವ್ಯಕ್ತಿ. ಈ ಕುರಿತು ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಚಾಮರಾಜನಗರ: ಗಂಡು ಹುಲಿ ಸಾವು; ಅರಣ್ಯ ಸಂರಕ್ಷಣಾಧಿಕಾರಿಯೇ ಕಾರಣ ಎಂದ ಪರಿಸರವಾದಿ ಜೋಸೆಫ್ ಹೂವರ್

ಆನೇಕಲ್: ವಿದ್ಯುತ್ ಮೋಟಾರ್ ವೈರ್ ಕಚ್ಚಿ ಕಾಡಾನೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜ್ಯದ ಗಡಿಭಾಗ ತಮಿಳುನಾಡಿನ ತಾವರೆಕೆರೈ ಬಳಿ ನಡೆದಿದೆ. ಬನ್ನೇರುಘಟ್ಟ ಅರಣ್ಯದಿಂದ ತಮಿಳುನಾಡಿನತ್ತ ಹೋಗಿದ್ದ ಕಾಡಾನೆ, ಆಹಾರ ಅರಸಿ ಕಾಡಂಚಿನ ಗ್ರಾಮಗಳತ್ತ ಬಂದಿದ್ದವು. ರೈತರೊಬ್ಬರು ಕೋಳಿ ಫಾರಂ, ಬೋರ್‌ವೆಲ್‌ಗೆ ವಿದ್ಯುತ್ ತಂತಿ ಹಾಕಿದ್ದರು. ಗುಂಪಿನಲ್ಲಿದ್ದ ಕಾಡಾನೆಯೊಂದು ವಿದ್ಯುತ್ ವೈರ್ ಕಚ್ಚಿ ಕೊನೆಯುಸಿರೆಳೆದಿದೆ. ನೆಲದೊಳಗೆ ಅಥವಾ ಕಂಬಕ್ಕೆ ತಂತಿ ಹಾಕಿದ್ದರೆ ಅವಘಡ ಆಗುತ್ತಿರಲಿಲ್ಲ. ತೋಟದ ನೆಲದ ಮೇಲೆ ತಂತಿಹಾಕಿ ಹಾಗೆ ಬಿಟ್ಟಿದ್ದರಿಂದ ಈ ಅವಘಡ ಸಂಭವಿಸಿದೆ. ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ, ಪೊಲೀಸರು ಕೋಳಿ ಫಾರಂ ಮಾಲೀಕ ನಾರಾಯಣನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Sun, 26 November 23

ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ