AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ದುಷ್ಕರ್ಮಿಗಳಿಂದ ಐವರಿಗೆ ಚಾಕು ಇರಿತ

ಕನ್ನಡ ರಾಜ್ಯೋತ್ಸವ ಮೆರವಣಿ ವೇಳೆ ಭಯಾಕನ ಘಟನೆಯೊಂದು ನಡೆದಿದೆ. ಬೆಳಗಾವಿಯ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿ ಮೆರವಣಿ ವೇಳೆ ದುಷ್ಕರ್ಮಿಗಳು ಐವರಿಗೆ ಚಾಕು ಇರಿದು ಪರಾರಿ ಆಗಿರುವಂತಹ ಘಟನೆ ನಡೆದಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬೆಳಗಾವಿಯ ‌ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ: ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ದುಷ್ಕರ್ಮಿಗಳಿಂದ ಐವರಿಗೆ ಚಾಕು ಇರಿತ
ರಾಜ್ಯೋತ್ಸವ ಮೆರವಣಿಗೆ
Sahadev Mane
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 01, 2025 | 10:36 PM

Share

ಬೆಳಗಾವಿ, ನವೆಂಬರ್​ 01: ಕನ್ನಡ ರಾಜ್ಯೋತ್ಸವ (Kannada Rajyotsava) ಮೆರವಣಿಗೆ ವೇಳೆ ಐವರಿಗೆ ಚಾಕು ಇರಿದು (stabbed) ದುಷ್ಕರ್ಮಿಗಳು ಪರಾರಿಯಾಗಿರುವಂತಹ ಘಟನೆ ನಗರದ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿ ನಡೆದಿದೆ. ಮೂವರು ಬಿಮ್ಸ್ ಆಸ್ಪತ್ರೆಗೆ ಮತ್ತು ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುನಾಥ್​ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ವಿನಾಯಕ್ ಮತ್ತು ನಜೀರ್ ಪಠಾಣ್‌ ಎಂಬುವರಿಗೆ ಚಾಕು ಇರಿಯಲಾಗಿದೆ.

ನಡೆದದ್ದೇನು?

ಬೆಳಗಾವಿಯ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿ ಕನ್ನಡ ರಾಜ್ಯೋತ್ಸವ ಅಂಗವಾಗಿ ರೂಪಕಗಳ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಐವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಬೆಳಗಾವಿಯ ‌ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

ಕಮಿಷನರ್ ಭೂಷಣ್ ಬೊರಸೆ ಹೇಳಿದ್ದಿಷ್ಟು 

ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಕಮಿಷನರ್ ಭೂಷಣ್ ಬೊರಸೆ ಭೇಟಿ ನೀಡಿ ಹಲ್ಲೆಗೊಳಗಾದವರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈಜಂಕ್ಷನ್ ಬಳಿ ರಾಜ್ಯೋತ್ಸವ ಮೆರವಣಿಗೆ ವೇಳೆ ಘರ್ಷಣೆ ಆಗಿದೆ. ನಾಲ್ವರಿಗೆ ಚಾಕುವಿನಿಂದ ಇರಿದಿದ್ದಾರೆ, ಒಬ್ಬರ ತಲೆಗೆ ಗಾಯ ಆಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಕನ್ನಡ ರಾಜ್ಯೋತ್ಸವದಂದೇ MES ಕಾರ್ಯಕರ್ತರ ಪುಂಡಾಟ; ಅನುಮತಿ ಇಲ್ಲದಿದ್ರೂ ಕರಾಳ ದಿನ ಆಚರಣೆ!

ಯಾರು ಹಲ್ಲೆ‌ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಘಟನೆ ನಡೆದ ಸ್ಥಳದ ಸಿಸಿಟಿವಿ ಪರಿಶೀಲನೆ ಕೂಡ ಮಾಡುತ್ತೇವೆ. ಗಾಯಗೊಂಡ ಎಲ್ಲರೂ ಬೆಳಗಾವಿಯ ನೆಹರುನಗರದ ನಿವಾಸಿಗಳು. ರಾಜ್ಯೋತ್ಸವ ಮೆರವಣಿಗೆಯಲ್ಲಿ ಈವರೆಗೆ 3-4 ಲಕ್ಷ ಜನರು ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.

11ಕ್ಕೂ ಹೆಚ್ಚು ಜನರು ಹಲ್ಲೆ ಮಾಡಿ ಪರಾರಿ ಎಂದ ಗಾಯಾಳು 

ಗಾಯಾಳು ರಾಘವೇಂದ್ರ ಎಂಬುವವರು ಮಾತನಾಡಿದ್ದು, ಮೆರವಣಿಗೆಯಲ್ಲಿ ರೂಪಕ ವಾಹನ ತಂದಿದ್ದೇವು. ನಮ್ಮ ವಾಹನದ ಬಳಿ ಬೇರೆಯವರೊಂದಿಗೆ ಅಪರಿಚಿತರು ಜಗಳ ಮಾಡುತ್ತಿದ್ದರು. ನಮ್ಮ ರೂಪಕ ವಾಹನ ನೋಡಿ ನಮ್ಮ ಮೇಲೆ ಹಲ್ಲೆ ಮಾಡಿದರು.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ಬಂತು: ಬೆಳಗಾವಿಯಲ್ಲಿ ಮತ್ತೆ ಬಾಲ ಬಿಚ್ಚಿದ ಎಂಇಎಸ್

ಕೈಯಲ್ಲಿ ಚಾಕು ಹಿಡಿದು ಬಂದು ಹಲ್ಲೆ ಮಾಡಿದ್ದಾರೆ ಎಂದರು. ಹನ್ನೊಂದಕ್ಕೂ ಅಧಿಕ ಜನರಿಂದ ಎಳೆಂಟು ಜನರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಕೆಲವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೋಗಿದ್ದಾರೆ ಎಂದರು.

ಯುವತಿಯರ ಬಳಿ ಅಸಭ್ಯ ವರ್ತನೆ ಮಾಡ್ತಿದ್ದವರಿಗೆ ಲಾಠಿ ಏಟು

ಇನ್ನು ರಾತ್ರಿಯಾದರೂ ಬೆಳಗಾವಿಯಲ್ಲಿ ರಾಜ್ಯೋತ್ಸವ ಉತ್ಸಾಹ ಕಡಿಮೆ ಆಗಿಲ್ಲ. ಯುವತಿಯರ ಪಕ್ಕ ಡ್ಯಾನ್ಸ್ ಮಾಡುತ್ತಿದ್ದ ಯುವಕರಿಗೆ ಪೊಲೀಸರು ಲಾಠಿ ಏಟು ನೀಡಿದ್ದು, ಸ್ಥಳದಿಂದ ದಿಕ್ಕಪಾಲಾಗಿದ್ದಾರೆ. ಇಂದು ಬೆಳಗ್ಗೆಯಿಂದಲೂ ಚೆನ್ನಮ್ಮ ವೃತ್ತದಲ್ಲಿ ಅದ್ಧೂರಿ ರಾಜ್ಯೋತ್ಸವ ನಡೆಯುತ್ತಿದ್ದು, ಡಿಜೆ ಹಾಡುಗಳಿಗೆ ಯುವಜನತೆ ಕುಣಿದು ಕುಪ್ಪಳಿಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:11 pm, Sat, 1 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ