ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಜನ್ಮದಿನಾಚರಣೆಗೆ ಆಗಮಿಸಿದವರಿಗೆ ತಟ್ಟೆ, ಲೋಟ ಗಿಫ್ಟ್; ಮುಗಿ ಬಿದ್ದ ಮಹಿಳೆಯರು
ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿಯಲ್ಲಿ ಗಿಫ್ಟ್ ಪಾಲಿಟಿಕ್ಸ್ ಆರಂಭವಾಗಿದೆ. ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಂತರ ಇದೀಗ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ಗಿಫ್ಟ್ ಹಂಚಿದ್ದಾರೆ.
ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections) ಸಮೀಪಿಸುತ್ತಿದ್ದಂತೆ ಮತದಾರರ ಓಲೈಸಲು ರಾಜಕೀಯ ಪಕ್ಷಗಳು ಜಿಲ್ಲೆಯಲ್ಲಿ ನಾನಾ ಕಸರತ್ತುಗಳನ್ನು ನಡೆಸುತ್ತಿವೆ. ಅದರಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮತದಾರರನ್ನು ಓಲೈಸುವ ಗಿಫ್ಟ್ ಪಾಲಿಟಿಕ್ಸ್ (Gift Politics in Belagavi) ಮುಂದುವರಿದಿದ್ದು, ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ನಂತರ ಇದೀಗ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ಗಿಫ್ಟ್ ಹಂಚಿದ್ದಾರೆ. ತಮ್ಮ 53ನೇ ಜನ್ಮ ದಿನಾಚರಣೆ ಪ್ರಯುಕ್ತ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ (Sanjay Patil) ಅವರು ಜನ್ಮ ದಿನಾಚರಣೆ (Birthday)ಗೆ ಆಗಮಿಸಿದ ಮಹಿಳೆಯರಿಗೆ ತಟ್ಟೆ, ಲೋಟ, ಬಟ್ಟಲು ಗಿಫ್ಟ್ ನೀಡಿದ್ದಾರೆ.
ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ತಮ್ಮ 53ನೇ ಜನ್ಮ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಜನ್ಮ ದಿನಾಚರಣೆಗೆ ಆಗಮಿಸಿದ ಮಹಿಳೆಯರಿಗೆ ತಟ್ಟೆ, ಲೋಟ, ಬಟ್ಟಲು ಗಿಫ್ಟ್ ನೀಡಿದ್ದು, ಇದನ್ನು ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮುಗಿಬಿದ್ದರು. ಬೆಳಗಾವಿಯ ಗೋಮಟೇಶ್ ವಿದ್ಯಾಪೀಠ ಆವರಣದಲ್ಲಿ ನಿನ್ನೆ ರಾತ್ರಿ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ, ದುರ್ಯೋಧನ ಐಹೊಳೆ, ಮಹಾಂತೇಶ ದೊಡ್ಡಗೌಡರ, ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ ಉಪಸ್ಥಿತರಿದ್ದರು. ಇತ್ತೀಚೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರವಿದ್ದ ಟಿಫಿನ್ ಬಾಕ್ಸ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ಪ್ರತಿಯಾಗಿ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ಗಿಫ್ಟ್ ವಿತರಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:21 am, Mon, 2 January 23