AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆಯಿಂದ ಜನಪ್ರಿಯರಾಗಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಇನ್ನಿಲ್ಲ

Kakasaheb Patil passes away: ನಿಪ್ಪಾಣಿ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಪ್ರಚಾರದಲ್ಲಿ ಸಿಎಂ ಸಿದ್ದರಾಮಯ್ಯ "ಕಾಕಾ ಪಾಟೀಲ್ ನಿಂಗೂ ಫ್ರೀ" ಎಂದು ಹೇಳಿದ್ದ ಮಾಜಿ ಶಾಸಕ ಇದೀಗ ನೆನಪು ಮಾತ್ರ.

ಗ್ಯಾರಂಟಿ ಯೋಜನೆಯಿಂದ ಜನಪ್ರಿಯರಾಗಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಇನ್ನಿಲ್ಲ
ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್
Sahadev Mane
| Edited By: |

Updated on: Jun 18, 2025 | 2:54 PM

Share

ಬೆಳಗಾವಿ, ಜೂನ್​ 18: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿಪ್ಪಾಣಿ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್(70) (Kaka Saheb Patil) ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಾಂಗ್ರೆಸ್​ ತನ್ನ ಗ್ಯಾರಂಟಿ ಯೋಜನೆಗಳ ಪ್ರಚಾರದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) “ಕಾಕಾ ಪಾಟೀಲ್‌ ನಿಂಗೂ ಫ್ರೀ” ಎಂದು ಹೇಳಿದ್ದರು. ಆ ಮೂಲಕ ಜನಪ್ರಿಯವಾಗಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಇನ್ನೂ ನೆನಪು ಮಾತ್ರ. ಹಲವು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಕಾಕಾ ಸಾಹೇಬ್ ಪಾಟೀಲ್ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದಿಂದ ಆಯ್ಕೆಯಾಗಿ 1999-2013ರವರೆಗೆ ಸತತ 3 ಬಾರಿ ಶಾಸಕರಾಗಿದ್ದರು. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಮಕ್ಕಳು ಮತ್ತು ಬೆಂಬಲಿಗರನ್ನು ಅಗಲಿದ್ದಾರೆ. ಜಿಲ್ಲೆಯ ನಿಪ್ಪಾಣಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಇದನ್ನೂ ಓದಿ
Image
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
Image
ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಉತ್ಪನ್ನ ಮಳಿಗೆ: ಡಿಕೆಶಿ ಹೇಳಿದ್ದಿಷ್ಟು
Image
ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್​ ಮಳಿಗೆ ಸ್ಥಾಪನೆಗೆ ಮುಂದಾದ ಬಿಎಂಆರ್​ಸಿಎಲ್​
Image
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು

ಗ್ಯಾರಂಟಿ ಯೋಜನೆಯಿಂದಲೇ ಫೇಮಸ್​ ಆಗಿದ್ದ ಕಾಕಾ ಸಾಹೇಬ್ ಪಾಟೀಲ್

ಕಾಕಾ ಸಾಹೇಬ್ ಪಾಟೀಲ್​ ಅವರು ವಿಧಾನ ಸಭೆ ಚುನಾವಣೆಯಲ್ಲಿ ನಿರಂತರವಾಗಿ ಕೆಲಸ ಮಾಡಿದ್ದರು. ಇದೇ ಚುನಾವಣೆಯಲ್ಲಿ ಕಾಂಗ್ರೆಸ್​ ಅಧಿಕಾರಕ್ಕೇರಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತ್ತು. ಈ ವೇಳೆ ಪ್ರಚಾರದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ‘ಮಹಾದೇವಪ್ಪ ನಿಂಗೂ ಫ್ರೀ’, ‘ಕಾಕಾ ಪಾಟೀಲ್‌ ನಿಂಗೂ ಫ್ರೀ’ ಎಂದು ಹೇಳಿದ್ದರು.

ಸಿಎಂ ಸಿದ್ದರಾಮಯ್ಯ ಟ್ವೀಟ್​

ಕಾಕಾ ಸಾಹೇಬ್ ಪಾಟೀಲ್ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ‘ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಹಿರಿಯ ನಾಯಕರಾಗಿದ್ದ ಕಾಕಾಸಾಹೇಬ್ ಪಾಟೀಲ ಅವರ ನಿಧನ ದುಃಖವುಂಟುಮಾಡಿದೆ. ನೇರ ನಡೆ ನುಡಿ, ಜನಪರ ಕಾಳಜಿಯ ಮುತ್ಸದ್ದಿ ನಾಯಕನ ಅಗಲಿಕೆಯಿಂದ ರಾಜಕೀಯ ರಂಗ ಮಾತ್ರವಲ್ಲ, ಇಡೀ ಸಮಾಜ ಬಡವಾಗಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಉತ್ಪನ್ನ ಮಳಿಗೆಗೆ ಅನುಮತಿ: ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.

ಡಿಕೆ ಶಿವಕುಮಾರ್​ ಸಂತಾಪ

ಇನ್ನು ಡಿಕೆ ಶಿವಕುಮಾರ್​ ಕೂಡ ಸಂತಾಪ ಸೂಚಿಸಿದ್ದಾರೆ. ‘ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕಾಕಾಸಾಹೇಬ್ ಪಾಟೀಲ್ ಅವರು ತಡರಾತ್ರಿ ಕೊನೆಯುಸಿರೆಳೆದಿರುವ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ’ ಎಂದಿದ್ದಾರೆ.

ಡಿಕೆ ಶಿವಕುಮಾರ್ ಟ್ವೀಟ್​

‘ಪಾಟೀಲ್ ಅವರು ಸತತ ಮೂರು ಬಾರಿ ನಿಪ್ಪಾಣಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ, ಜನಪರ ಕಾರ್ಯಗಳನ್ನು ಮಾಡಿದ್ದರು. ಅವರ ಅಗಲಿಕೆ ಪಕ್ಷಕ್ಕೆ ಹಾಗೂ ನಿಪ್ಪಾಣಿ ಕ್ಷೇತ್ರದ ಜನತೆಗೆ ತುಂಬಲಾರದ ನಷ್ಟವಾಗಿದೆ. ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಕಂಬಮಿ ಮಿಡಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.