ಬೆಳಗಾವಿ: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯ ಆರೋಪಿಗಳ ಬಂಧನಕ್ಕೂ ಮುನ್ನವೇ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಜಮೀನಿಗೆ ಹೋಗಿದ್ದ 15 ವರ್ಷದ ಬಾಲಕಿಯ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದು, ದುರ್ಘಟನೆ 20 ದಿನಗಳ ಹಿಂದೆಯೇ ನಡೆದಿದೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳಿಗಾಗಿ ಶೋಧ ಆರಂಭಿಸಿ ನಾಲ್ವರನ್ನು ಬಂಧಿಸಿದ್ದಾರೆ
ಬೆಳಗಾವಿಯಲ್ಲಿ ಬಾಲಕಿ ಮೇಲೆ ಗಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾದ ಹತ್ತೇ ಗಂಟೆಯಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಶೇಷ ತಂಡ ರಚಿಸಿ ನಾಲ್ವರು ಆರೋಪಿಗಳನ್ನು ಬಂಧಸಿದ್ದಾಗಿ ಬೆಳಗಾವಿ ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.
ಮೈಸೂರು ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವರು ಹೇಳಿದ್ದೇನು?
ಬಂದಿರುವ ಸಂದಿಗ್ಧತೆಯನ್ನು ನಿವಾರಣೆ ಮಾಡಿಕೊಳ್ಳುವ ಶಕ್ತಿಯನ್ನು ಪೊಲೀಸರಿಗೆ ನೀಡಲಿ ಎಂದು ಚಾಮುಂಡಿಯನ್ನು ಪ್ರಾರ್ಥಿಸಿದ್ದೇನೆ. ಇನ್ನೂ ಆರೋಪಿ ಗಳು ಪತ್ತೆಯಾಗಿಲ್ಲ. ಆರೋಪಿಗಳ ಪತ್ತೆಗೆ ಸ್ವಲ ಸಮಯ ಬೇಕಿದೆ. ಸಂತ್ರಸ್ತೆ ತಮ್ಮ ಹೇಳಿಕೆಯನ್ನು ಪೊಲೀಸರಿಗೆ ತಿಳಿಸಿಲ್ಲ. ವಿಚಾರಣೆಗೆ ತೊಂದರೆ ಆಗುವ ದೃಷ್ಟಿಯಿಂದ ನಾನು ಹೆಚ್ಚಿನ ವಿವರ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ನಾಡದೇವತೆ ಚಾಮುಂಡಿಯನ್ನು ಪ್ರಾರ್ಥಿಸಿ ಬಂದಿರುವ ಸಂದಿಗ್ಧತೆಯನ್ನು ನಿವಾರಣೆ ಮಾಡಿಕೊಳ್ಳುವ ಶಕ್ತಿಯನ್ನು ಪೊಲೀಸರಿಗೆ ನೀಡೆಂದು ಬೇಡಿಕೊಂಡಿರುವೆ. ಅಂತೆಯೇ, ಎಲ್ಲರ ಮನಸ್ಸಿಗೂ ಒಳ್ಳೆಯ ಭಾವನೆ ಕೊಡು ಎಂದು ಕೇಳಿಕೊಂಡಿದ್ದೇನೆ ಎನ್ನುವುದಾಗಿ ಮೈಸೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ. ಗೃಹ ಸಚಿವರು ಈಗಾಗಲೇ ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸಂತೃಸ್ತೆಯ ಸ್ನೇಹಿತ ಹೇಳಿದ್ದೇನು?
ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆ ಹೇಗೆ ನಡೆಯಿತು ಎಂದು ವಿವರಿಸಿದ್ದಾರೆ. ಅದಕ್ಕೆ ಸಂಬಂಧಿಸಿದ ಮಾಹಿತಿ ಟಿವಿ9ಗೆ ಲಭ್ಯವಾಗಿದ್ದು, ಯುವಕ ಹೇಳಿದ ವಿಷಯ ಸಾಂಸ್ಕೃತಿಕ ನಗರಿಯ ಜನರನ್ನು ಬೆಚ್ಚಿಬೀಳಿಸುವಂತಿದೆ. ಯುವಕ ಮತ್ತು ಯುವತಿ ಜಾಗಿಂಗ್‌ಗೆ ಹೋದಾಗ ದುಷ್ಕೃತ್ಯ ನಡೆದಿದೆ ಎಂದು ಹೇಳಲಾಗಿದ್ದು, ತನ್ನ ಮೇಲೂ ಹಲ್ಲೆ ನಡೆದಿರುವುದಾಗಿ ಯುವಕ ಹೇಳಿಕೊಂಡಿದ್ದಾನೆ.
ಆಗಸ್ಟ್ 24ರ ಸಂಜೆ 7.25 ರಿಂದ 7.30ರ ಸುಮಾರಿಗೆ ಜೆಎಸ್‌ಎಸ್ ಆಯುರ್ವೇದಿಕ್ ಕಾಲೇಜಿನ ಮುಂದೆ ವಾಟರ್ ಟ್ಯಾಂಕ್ ಬಳಿ ಕಚ್ಚಾ ರಸ್ತೆಯಲ್ಲಿ ನಾವಿಬ್ಬರೂ ಹೋಗಿದ್ದೆವು. ನಾನು ಯಾವಾಗಲೂ ಜಾಗಿಂಗ್‌ಗೆ ಹೋಗುವ ಸ್ಥಳ ಅದಾಗಿತ್ತು. ಅಲ್ಲಿ ಹೋಗಿ ಬೈಕ್ ನಿಲ್ಲಿಸಿದಾಗ 25 ರಿಂದ 30 ವರ್ಷದ ಸುಮಾರು 6 ಮಂದಿ ಬಂದರು. ಬಲ ಭಾಗದಿಂದ ಏಕಾಏಕಿ ಬಂದು ದೊಣ್ಣೆಯಿಂದ ಹಲ್ಲೆ ಮಾಡಿದರು. ನಂತರ ನನ್ನನ್ನು ತಳ್ಳಿ ಜೊತೆಯಲ್ಲಿದ್ದವಳನ್ನು ಪೊದೆಗಳಿರುವ ಜಾಗಕ್ಕೆ ಎಳೆದುಕೊಂಡು ಹೋದರು. ಅದರಲ್ಲಿ ತೆಳ್ಳಗಿರುವ ಒಬ್ಬ ನನ್ನ ಹಣೆಗೆ ಕಲ್ಲಿನಿಂದ ಹೊಡೆದ. ಆಗ ಪ್ರಜ್ಞೆ ಹೋಗಿ 15 ನಿಮಿಷದ ನಂತರ ಪ್ರಜ್ಞೆ ಬಂತು. ಆಗ 4 ಜನ ನನ್ನ ಮುಂದೆ ನಿಂತು ನನ್ನ ತಂದೆಗೆ ಕಾಲ್ ಮಾಡಿಸಿದರು. 3 ಲಕ್ಷ ರೂಪಾಯಿ ಹಣ ಕೊಡುವಂತೆ ಒತ್ತಾಯ ಮಾಡಿದರು. ನಾನು ಗೆಳತಿ ಎಲ್ಲಿ ಎಂದು ಕೇಳಿದಾಗ ಇಬ್ಬರು ಆಕೆಯನ್ನು ಎಳೆದುಕೊಂಡು ಬಂದು ನನ್ನ ಪಕ್ಕ ಕೂರಿಸಿದರು. ಅವಳು ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದಳು. ಅವಳಿಗೆ ತರಚಿದ ಗಾಯಗಳಾಗಿದ್ದವು. ಎಂದು ಪೊಲೀಸರಿಗೆ ಸಂತ್ರಸ್ತೆಯ ಸ್ನೇಹಿತ ಹೇಳಿಕೆ ನೀಡಿದ್ದಾನೆ.
ಇದನ್ನೂ ಓದಿ:
1998ರಲ್ಲಿ ಸತ್ಯ ಸಾಯಿ ಬಾಬಾರ ಭೇಟಿ ಮಾಡಿದ್ದೆ, ಅವರ ಪುಸ್ತಕ ಓದಿ ಮಾಂಸಾಹಾರ ತ್ಯಜಿಸಿದೆ: ಸಿಎಂ ಬೊಮ್ಮಾಯಿ
ಆ ಹುಡುಗಿ ಅಷ್ಟೊತ್ತಿಗೆ ಅಲ್ಲಿಗೆ ಏಕೆ ಹೋಗಿದ್ದಳೋ -ಮೈಸೂರು ಗ್ಯಾಂಗ್ ರೇಪ್ ಬಗ್ಗೆ ಮಂಜುಳಾ ಮಾನಸ ಉಡಾಫೆ ಮಾತು
(Belagavi Gang rape Massacre of 15 year old girl case registered in Ghataprabha Police station)
Published On - 3:07 pm, Fri, 27 August 21