AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವ್ವರ್ ಜತೆ ಮಗಳು ಪರಾರಿ: ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ!

ಲವ್ವರ್ ಜತೆ ಮಗಳು ಮನೆ ಬಿಟ್ಟು ಹೋದಳೆಂದು ತಂದೆ ಆಕೆಯ ತಿಥಿ ಮಾಡಿ ಸಂಬಂಧ ಕಡಿದುಕೊಂಡಿದ್ದಲ್ಲದೆ, ಬಂಧು-ಬಳಗ ಹಾಗೂ ಊರಿನವರನ್ನು ಕರೆಸಿ ತಿಥಿ ಊಟ ಹಾಕಿಸಿದ ವಿಲಕ್ಷಣ ವಿದ್ಯಮಾನ ಬೆಳಗಾವಿ ಜಿಲ್ಲೆಯ ನಾಗರಾಳ ಗ್ರಾಮದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ, ಮಗಳ ಶ್ರದ್ಧಾಂಜಲಿ ಬ್ಯಾನರ್​ಗಳನ್ನೂ ಊರಿನ ಅಲ್ಲಲ್ಲಿ ಹಾಕಿಸಿ ಮನದ ನೋವು, ಆಕ್ರೋಶ ಹೊರಹಾಕಿದ್ದಾರೆ.

ಲವ್ವರ್ ಜತೆ ಮಗಳು ಪರಾರಿ: ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ!
ಲವ್ವರ್ ಜತೆ ಮಗಳು ಪರಾರಿ: ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ!
Sahadev Mane
| Updated By: Ganapathi Sharma|

Updated on:Oct 11, 2025 | 2:33 PM

Share

ಚಿಕ್ಕೋಡಿ, ಅಕ್ಟೋಬರ್ 11: ಪ್ರೀತಿಸಿದ ಯುವಕ ಯುವತಿ ಪೋಷಕರ ವಿರೋಧದ ನಡುವೆಯೂ ಓಡಿ ಹೋಗಿ ಮದುವೆಯಾಗುವುದು, ತಮ್ಮ ಇಚ್ಛೆಗೆ ವಿರುದ್ಧವಾಗಿ ಮದುವೆಯಾದವರನ್ನು ಪೋಷಕರು ಕೊಲೆ ಮಾಡಿಸುವುದು, ಇತ್ಯಾದಿ ಪ್ರಕರಣಗಳ ಬಗ್ಗೆ ಆಗಾಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿರುತ್ತದೆ. ಆದರೆ, ಬೆಳಗಾವಿ (Belegavi) ಜಿಲ್ಲೆಯ ನಾಗರಾಳ ಗ್ರಾಮದಲ್ಲಿ ವಿಚಿತ್ರ ಪ್ರಕರಣವೊಂದು ವರದಿಯಾಗಿದೆ. ಇಲ್ಲಿ, ತಮ್ಮ ಇಚ್ಛೆಗೆ ವಿರುದ್ಧವಾಗಿ ಓಡಿಹೋದ ಮಗಳ ತಿಥಿ ಮಾಡಿದ ವ್ಯಕ್ತಿಯೊಬ್ಬರು, ಇಡೀ ಊರಿಗೆ ಊಟ ಹಾಕಿಸಿದ ಘಟನೆ ನಡೆದಿದೆ. ಮಗಳು ತಮ್ಮ ಪಾಲಿಗೆ ಸತ್ತು ಹೋದಳೆಂದು ತಂದೆ ಇಡೀ ಊರಿಗೆ ತಿಥಿ ಊಟ ಹಾಕಿಸಿದ್ದಾರೆ.

ಏನಿದು ಪ್ರಕರಣ?

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದ ಶಿವಗೌಡ ಎಂಬವರ ಮಗಳು ಅದೇ ಗ್ರಾಮದ ವಿಠ್ಠಲ್ ಬಸ್ತವಾಡೆ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ, ಪೋಷಕರಿಗೆ ಈ ಬಗ್ಗೆ ಸಮ್ಮತಿ ಇರಲಿಲ್ಲ. ಇಂಥ ಸಂದರ್ಭದಲ್ಲೇ ಶಿವಗೌಡ ಮಗಳು ವಿಠ್ಠಲ್ ಬಸ್ತವಾಡೆ ಜತೆ ಪರಾರಿಯಾಗಿದ್ದಾಳೆ. ಮೊದಲಿಗೆ ಶಿವಗೌಡ ಅವರು ರಾಯಬಾಗ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಿದ್ದರು. ನಂತರ, ಮಗಳು ಪ್ರೀತಿಸಿದ ಯುವಕನ ಜತೆ ಓಡಿಹೋಗಿರುವುದು ಗೊತ್ತಾಗಿದೆ. ಇದರಿಂದ ಮನನೊಂದ ಅವರು ಮಗಳು ತಮ್ಮ ಪಾಲಿಗೆ ಸತ್ತು ಹೋಗಿದ್ದಾಳೆ ಎಂದು ತಿಥಿ ಮಾಡಿದ್ದಾರೆ ಶಿವಗೌಡಗೆ ನಾಲ್ಕು ಜನ ಹೆಣ್ಣುಮಕ್ಕಳಿದ್ದು, ಈ ಪೈಕಿ ಈಗ ಓಡಿಹೋದವಳು ಕೊನೆಯವಳಾಗಿದ್ದಳು. ಮಗಳು ಮನೆತನದ ಸಂಸ್ಕಾರ ಮುರಿದು ಓಡಿಹೋಗಿದ್ದರಿಂದ ಮನನೊಂದಿರುವ ಶಿವಗೌಡ ಪಾಟೀಲ್, ನಾಗರಾಳ ಗ್ರಾಮದಲ್ಲಿ ಹೆತ್ತ ಮಗಳಿಗೆ ಶ್ರಾದ್ಧ ಮಾಡಿ ಕರುಳ ಬಳ್ಳಿ ಸಂಬಂಧ ಕತ್ತರಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ತಂದೆ ಮತ್ತು ಗೆಳೆಯನಿಂದ ಪದೇ ಪದೇ ಅತ್ಯಾಚಾರ, 3 ಬಾರಿ ಗರ್ಭಪಾತ

ಬಂಧು-ಬಳಗ ಸೇರಿದಂತೆ ಸಂಬಂಧಿಕರನ್ನು ಕರೆಸಿ ಭೋಜನ ಹಾಕಿಸಿದ್ದಾರೆ. ಅಷ್ಟೇ ಅಲ್ಲದೆ, ಮಗಳ ಫೋಟೊ ಹಾಕಿ ಊರ ತುಂಬ ಶ್ರದ್ಧಾಂಜಲಿ ಬ್ಯಾನರ್​ಗಳನ್ನೂ ಹಾಕಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:15 pm, Sat, 11 October 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!