ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ವಸೂಲಿ ಮಾಡಿದ್ದವರ ವಿರುದ್ಧ ಕೇಸ್; ಪ್ರತಿಭಟನೆಗಿಳಿದ ಸಿಬ್ಬಂದಿ

ಬೆಳಗಾವಿ ಜಿಲ್ಲೆಯಾದ್ಯಂತ ಗ್ರಾಮ ಒನ್ ಕೇಂದ್ರ ಬಂದ್ ಮಾಡಿ ಸಿಬ್ಬಂದಿ ಆಕ್ರೋಶ ಹೊರ ಹಾಕಿದ್ದಾರೆ. ಗೃಹಲಕ್ಷ್ಮೀ ಅರ್ಜಿ ಹಾಕಲು ಹಣ ಪಡೆದಿದ್ದಕ್ಕೆ ಪೊಲೀಸರು ಕೇಸ್ ದಾಖಲಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ವಸೂಲಿ ಮಾಡಿದ್ದವರ ವಿರುದ್ಧ ಕೇಸ್; ಪ್ರತಿಭಟನೆಗಿಳಿದ ಸಿಬ್ಬಂದಿ
ಪ್ರತಿಭಟನೆ ನಡೆಸುತ್ತಿರುವ ಗ್ರಾಮ ಒನ್ ಸಿಬ್ಬಂದಿ
Follow us
| Updated By: ಆಯೇಷಾ ಬಾನು

Updated on: Jul 31, 2023 | 2:49 PM

ಬೆಳಗಾವಿ, ಜುಲೈ 31: ಸರ್ಕಾರ ರಾಜ್ಯಾದ್ಯಂತ ಗೃಹಲಕ್ಷ್ಮೀ ಯೋಜನೆಗೆ(Gruha Jyothi Scheme) ಅರ್ಜಿ ಸಲ್ಲಿಸಲು ಹಣ ಪಡೆಯದಂತೆ ಹಾಗೂ ಹಣ ಪಡೆದರೆ ಕಾನೂನು ಕ್ರಮ ಜರುಗಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದೆ. ಆದ್ರೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಕೆಗೆ ಹಣ ವಸೂಲಿ ಮಾಡಲಾಗುತ್ತಿದೆ. ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರದ ಸಿಬ್ಬಂದಿ ಒಂದು ಅರ್ಜಿಗೆ ನೂರಾರು ರೂಪಾಯಿ ಸುಲಿಗೆ ಮಾಡುತ್ತಿದ್ದಾರೆ. ಅಲ್ಲದೆ ಗ್ರಾಮ ಒನ್ ಕೇಂದ್ರದ ಮೇಲೆ ಹಲವು ಕಡೆ ಕೇಸ್ ದಾಖಲಾಗಿದೆ. ಹೀಗಾಗಿ ಗ್ರಾಮ ಒನ್ ಕೇಂದ್ರ ಬಂದ್ ಮಾಡಿ ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ(Protest) ನಡೆಸಲಾಗುತ್ತಿದೆ.

ಬೆಳಗಾವಿ ಜಿಲ್ಲೆಯಾದ್ಯಂತ ಗ್ರಾಮ ಒನ್ ಕೇಂದ್ರ ಬಂದ್ ಮಾಡಿ ಸಿಬ್ಬಂದಿ ಆಕ್ರೋಶ ಹೊರ ಹಾಕಿದ್ದಾರೆ. ಗೃಹಲಕ್ಷ್ಮೀ ಅರ್ಜಿ ಹಾಕಲು ಹಣ ಪಡೆದಿದ್ದಕ್ಕೆ ಪೊಲೀಸರು ಕೇಸ್ ದಾಖಲಿಸುತ್ತಿದ್ದಾರೆ. ಲ್ಯಾಮಿನೇಷನ್, ಪ್ರಿಂಟ್‌ಗೆ ಹಣ ಪಡೆಯುತ್ತಿದ್ದೇವೆ. ಅದನ್ನ ಅರ್ಜಿಗೆ ಹಣ ಪಡೆಯುತ್ತಿದ್ದಾರೆ ಅಂತಾ ಬಿಂಬಿಸಿ ಕೇಸ್ ಹಾಕ್ತಿದ್ದಾರೆ. ಸರ್ಕಾರದ ಸೇವೆ ಮಾಡ್ತಿದ್ರೂ ಸರ್ಕಾರವೇ ನಮ್ಮ ಮೇಲೆ ಕೇಸ್ ಹಾಕ್ತಿದೆ. ಸರ್ಕಾರ ನೀಡುವ ಸಹಾಯ ಧನ 12ರೂಪಾಯಿಯಲ್ಲಿ ಟ್ಯಾಕ್ಸ್ ತೆಗೆದು ಆರು ರೂ ಬರುತ್ತೆ. ಆ ಹಣ ಕೂಡ ಯಾವಾಗ ಬರುತ್ತೆ ಗೊತ್ತಿಲ್ಲ ಆದ್ರೂ ಕೆಲಸ ಮಾಡ್ತಿದ್ದೇವೆ. ಹೀಗೆ ಆದ್ರೇ ಗ್ರಾಮ ಒನ್ ಬಂದ್ ಮಾಡಿ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಪ್ರತಿಭಟನೆ ವೇಳೆ ಸಿಬ್ಬಂದಿ ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ: Belagavi News: ಗೃಹಲಕ್ಷ್ಮೀ ಅರ್ಜಿ ನೋಂದಣಿಗೆ ಹಣ ವಸೂಲಿ ಆರೋಪ; ಗ್ರಾಮ ಒನ್ ಕೇಂದ್ರದ ಲಾಗ್‌ಇನ್ ಐಡಿ ರದ್ದು

ಗೃಹಿಣಿಯರು ಸೇರಿದಂತೆ ಬಡ ಜನರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿ 2 ಸಾವಿರ ಹಣ ಪಡೆಯೋಕ್ಕೆ ಕ್ಯೂ ನಲ್ಲಿ ನಿಲ್ತಿದ್ದಾರೆ. ಹೀಗಾಗಿ ಅರ್ಜಿ ಸಲ್ಲಿಸೂಕ್ಕೆ ಅಂತ ಬರ್ತಿರುವ ಬಡ ಜನರ ಬಳಿ ಗ್ರಾಮ ಒನ್ ಕರ್ನಾಟಕ ಒನ್ ಕೇಂದ್ರದ ಸಿಬ್ಬಂದಿ ನೂರು ಇನ್ನೂರು ರೂಪಾಯಿಯನ್ನ ವಸೂಲಿ ಮಾಡ್ತಿದ್ದಾರೆ ಎಂಬ ಬಗ್ಗೆ ಅನೇಕ ಜಿಲ್ಲೆಗಳಲ್ಲಿ ದೂರು ದಾಖಲಾಗಿದೆ. ಇನ್ನೂ ಹಣ ವಸೂಲಿ ಬಗ್ಗೆ ಜನರು ಕೂಡ ತಮ್ಮ ಅಳಲು ತೋಡಿಕೊಂಡಿದ್ದಾರೆ. ನೂರು ರೂಪಾಯಿ ಕೊಟ್ರೆ ಮಾತ್ರ ಅರ್ಜಿ ಹಾಕೋದು ಅಂತ ಅರ್ಜಿದಾರರ ಮೇಲೆ ಸಿಬ್ಬಂದಿ ದಬ್ಬಾಳಿಕೆ ಮಾಡಿದ್ದಾರೆ ಎನ್ನಲಾದ ಅದೆಷ್ಟೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ