AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿ ಹೀನ ಕೃತ್ಯ: ಮಕ್ಕಳ ರಕ್ಷಣಾ ಕೇಂದ್ರದಿಂದಲೇ ಬಾಲಕಿ ಕಿಡ್ಯ್ನಾಪ್​!

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿ ಹೀನ ಕೃತ್ಯವೊಂದು ಬೆಳಕಿಗೆ ಬಂದಿದೆ. ಮಕ್ಕಳ ರಕ್ಷಣಾ ಕೇಂದ್ರದಿಂದ ಬಾಲಕಿಯನ್ನ ಅಪಹರಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವಂತಹ ಘಟನೆ ನಡೆದಿದೆ. ಸದ್ಯ ಸಂತ್ರಸ್ತೆಯನ್ನು ಅಧಿಕಾರಿಗಳು ರಕ್ಷಣೆ ಮಾಡಿ ಸೃಷ್ಟಿ ಮಕ್ಕಳ ರಕ್ಷಣಾ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿ ಹೀನ ಕೃತ್ಯ: ಮಕ್ಕಳ ರಕ್ಷಣಾ ಕೇಂದ್ರದಿಂದಲೇ ಬಾಲಕಿ ಕಿಡ್ಯ್ನಾಪ್​!
ಮಾಳಮಾರುತಿ ಪೊಲೀಸ್​ ಠಾಣೆ
Sahadev Mane
| Edited By: |

Updated on:Aug 09, 2025 | 12:45 PM

Share

ಬೆಳಗಾವಿ, ಆಗಸ್ಟ್​ 09: ಮಕ್ಕಳ ರಕ್ಷಣಾ ಕೇಂದ್ರದಿಂದ ಬಾಲಕಿ ಅಪಹರಿಸಿದ್ದ (Kidnap) ಘಟನೆಯೊಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್​ ಠಾಣೆಯಲ್ಲಿ ಪೋಕ್ಸೋ (pocso case) ಪ್ರಕರಣ ದಾಖಲಾಗಿದೆ. ಅಧಿಕಾರಿಗಳು ಸಂತ್ರಸ್ತೆಯನ್ನ ಸೃಷ್ಠಿ ಮಕ್ಕಳ ರಕ್ಷಣಾ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದಾರೆ.

ನಡೆದದ್ದೇನು?

ಬಾಲಕಿಗೆ 13ನೇ ವಯಸ್ಸಿನಲ್ಲೇ ಆರೋಪಿ ಜತೆ ಬಾಲ್ಯವಿವಾಹವಾಗಿತ್ತು. ಆಸ್ಪತ್ರೆಗೆ ಹೋದಾಗ ಬಾಲಕಿ 4 ತಿಂಗಳ ಗರ್ಭಿಣಿಯಾಗಿರೋದು ಪತ್ತೆ ಆಗಿತ್ತು. ಬಳಿಕ ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಮಕ್ಕಳ ರಕ್ಷಣಾ ಕೇಂದ್ರದಲ್ಲಿ ಸಂತ್ರಸ್ತ ಬಾಲಕಿಯನ್ನು ಇರಿಸಲಾಗಿತ್ತು.

ಇದನ್ನೂ ಓದಿ: ಬೆಂಗಳೂರು: ಬಾಲಕ ನಿಶ್ಚಿತ್ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

ಈ ರಕ್ಷಣಾ ಕೇಂದ್ರದಲ್ಲಿ ಸಿಸಿಟಿವಿ ಮತ್ತು ಸೆಕ್ಯೂರಿಟಿ ಗಾರ್ಡ್ ಕೂಡ ಇಲ್ಲ. ಇತ್ತ ಆರೋಪಿ ತಾನು ಬಾಲಕಿಯ ಚಿಕ್ಕಪ್ಪ ಎಂದು ಹೇಳಿಕೊಂಡಿದ್ದ. ಔಷಧಿ ನೀಡುವ ನೆಪದಲ್ಲಿ ಮಕ್ಕಳ ರಕ್ಷಣಾ ಕೇಂದ್ರಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದು, ಪ್ರಶ್ನಿಸಿದ ಸಿಬ್ಬಂದಿಗೆ ಚಾಕು ತೋರಿಸಿ ಕೊಲೆ ಬೆದರಿಕೆ ಕೂಡ ಹಾಕಿದ್ದ. ಬಳಿಕ ಸಂತ್ರಸ್ತ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದ.

ಮಕ್ಕಳ ರಕ್ಷಣಾ ಕೇಂದ್ರದ ಸಿಬ್ಬಂದಿಯಿಂದ ಮಾಳಮಾರುತಿ ಠಾಣೆಗೆ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಜೈಲಿಗಟ್ಟಿದ್ದಾರೆ. ಸದ್ಯ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ.

ನಾಲ್ಕು ತಿಂಗಳ ಬಾಣಂತಿ ಅನುಮಾನಾಸ್ಪದ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ನಾಲ್ಕು ತಿಂಗಳ ಬಾಣಂತಿ ಅನುಮಾನಾಸ್ಪದ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಗಂಡ ನೀಲೇಶ್​​ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅನಿತಾ ನೀಲದಕರ್(25) ಶವ ಪತ್ತೆ ಆಗಿದೆ.

ಇದನ್ನೂ ಓದಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರು ಬಾಲಕನ ಕಿಡ್ನ್ಯಾಪ್-ಕೊಲೆ ಕೇಸ್​: ಕೊನೆಗೂ ರಿವೀಲ್​ ಆಯ್ತು ಹತ್ಯೆ ರಹಸ್ಯ!

ಗಂಡ ನೀಲೇಶ್ ಕೊಲೆ ಮಾಡಿ ನನ್ನ ಮಗಳಿಗೆ ನೇಣು ಬಿಗಿದಿದ್ದಾನೆ ಎಂದು ಅನಿತಾ ಪೋಷಕರು ಆರೋಪ ಮಾಡಿದ್ದಾರೆ. ಪಿಜ್ಜಾ ಹಟ್​​​ನಲ್ಲಿ ಕೆಲಸ ಮಾಡುತ್ತಿದ್ದ ಅನಿತಾ, ನೀಲೇಶ್ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ 4 ತಿಂಗಳ ಹಿಂದೆ ಸಬ್​ ರಿಜಿಸ್ಟರ್ ಕಚೇರಿಯಲ್ಲಿ ಮದುವೆ ಆಗಿದ್ದರು. ಸ್ಥಳಕ್ಕೆ ಎಸಿಪಿ, ಬೆಳಗಾವಿ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕರ್ನಾಟದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:42 pm, Sat, 9 August 25