ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು! ಹನಿಟ್ರ್ಯಾಪ್ ಮಾಡುತ್ತಿದ್ದ ಕತರ್ನಾಕ್ ಲೇಡಿ ಅರೆಸ್ಟ್

ಬೆಳಗಾವಿ ಪೊಲೀಸರು ಶ್ರೀಮಂತರನ್ನು ಸಾಮಾಜಿಕ ಜಾಲತಾಣಗಳ ಮೂಲಕ ವಂಚಿಸುತ್ತಿದ್ದ ಮಹಿಳೆಯನ್ನು ಬಂಧಿಸಿದ್ದಾರೆ. ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಬಳಸಿ ಪರಿಚಯ ಮಾಡಿಕೊಂಡು, ಲಾಡ್ಜ್‌ಗೆ ಕರೆಸಿ ಹಣ, ಚಿನ್ನ ಮತ್ತು ಕಾರುಗಳನ್ನು ದೋಚುತ್ತಿದ್ದಳು ಎಂದು ತಿಳಿದು ಬಂದಿದೆ. ಸುಮಾರು 32 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆಕೆಯ ಸಹಚರನಿಗಾಗಿ ಹುಡುಕಾಟ ನಡೆದಿದೆ.

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು! ಹನಿಟ್ರ್ಯಾಪ್ ಮಾಡುತ್ತಿದ್ದ ಕತರ್ನಾಕ್ ಲೇಡಿ ಅರೆಸ್ಟ್
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು! ಹನಿಟ್ರ್ಯಾಪ್ ಮಾಡುತ್ತಿದ್ದ ಕತರ್ನಾಕ್ ಲೇಡಿ ಅರೆಸ್ಟ್
Edited By:

Updated on: Mar 10, 2026 | 11:45 AM

ಬೆಳಗಾವಿ, ಮಾರ್ಚ್​ 10: ಶ್ರೀಮಂತ ವ್ಯಕ್ತಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಬಲೆಗೆ ಬೀಳಿಸಿ ಮೋಸ ಮಾಡುತ್ತಿದ್ದ (Honey Trap) ಮಹಿಳೆಯನ್ನು ಬೆಳಗಾವಿ ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಶ್ರೀಮಂತರನ್ನೇ ಟಾರ್ಗೆಟ್ ಮಾಡಿ ಫೇಸ್​ಬುಕ್ ಮೂಲಕ ಪರಿಚಯ ಮಾಡಿಕೊಳ್ಳುತ್ತಿದ್ದ ಆಕೆ, ಲಾಡ್ಜ್​ಗೆ ಕರೆಸಿ ಅವರ ಹಣ, ಚಿನ್ನ ಸೇರಿ ಅಮೂಲ್ಯ ವಸ್ತುಗಳನ್ನೆಲ್ಲಾ ದೋಚುತ್ತಿದ್ದಳು ಎಂದು ತಿಳಿದುಬಂದಿದೆ. ಮೋಸ ಹೋಗಿದ್ದ ವ್ಯಕ್ತಿಯೊಬ್ಬರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಫೇಸ್​ಬುಕ್, ಇನ್ಸ್ಟಾಗ್ರಾಂ ಮೂಲಕ ಶ್ರೀಮಂತರಿಗೆ ಬಲೆ

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದವಳಾದ ದೀಪಾ ದೀಪಾ ಅವಟಗಿ (33) ಫ್ಯಾಶನ್ ಡಿಸೈನರ್​ ಆಗಿದ್ದು, ಹನಿಟ್ರ್ಯಾಪ್ ಪ್ರಕರಣದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಹಣದಾಸೆಗೆ ಬಿದ್ದಿದ್ದ ದೀಪಾ, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂ ಮೂಲಕ ಶ್ರೀಮಂತ ವ್ಯಕ್ತಿಗಳೊಂದಿಗೆ ಪರಿಚಯ ಮಾಡಿಕೊಳ್ಳುತ್ತಿದ್ದಳು. ನಂತರ ಅವರ ನಂಬರ್ ತೆಗೆದುಕೊಂಡು ಮೆಸೇಜ್ ಮಾಡಿ ಲಾಡ್ಜ್‌ಗೆ ಕರೆಸಿಕೊಳ್ಳುತ್ತಿದ್ದಳು. ಈಕೆಯನ್ನು ನಂಬಿ ಅಲ್ಲಿಗೆ ಬಂದ ಗಂಡಸರ ಬಳಿ ಸಲುಗೆಯಿಂದ ವರ್ತಿಸಿ, ಅವರನ್ನು ಮೊದಲು ಸ್ನಾನಕ್ಕೆ ಕಳುಹಿಸುತ್ತಿದ್ದಳು. ಇದೇ ಸಮಯ ಸಾಧಿಸಿ ವ್ಯಕ್ತಿಗಳ ಬಳಿಯಿದ್ದ ಹಣ, ಚಿನ್ನ, ಬ್ಯಾಗ್ ಹಾಗೂ ಕಾರುಗಳನ್ನು ತೆಗೆದುಕೊಂಡು ಪರಾರಿಯಾಗುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಗೆ ಸಹಾಯ ಮಾಡಿದಾತ ಪರಾರಿ

ಈ ಎಲ್ಲಾ ದುಷ್ಕೃತ್ಯಗಳನ್ನೆಸಗಲು ದೀಪಾಗೆ ಸಹಾಯ ಮಾಡುತ್ತಿದ್ದುದು ಆಕೆಯ ಆಪ್ತ ಸ್ನೇಹಿತ ಶಿವಾನಂದ ಮಠಪತಿ. ಶ್ರೀಮಂತ ವ್ಯಕ್ತಿಗಳ ಮಾಹಿತಿಯನ್ನು ಆಕೆಗೆ ನೀಡುತ್ತಿದ್ದವನೇ ಇವನು. ಸಧ್ಯಕ್ಕೆ ಆತನೂ ಪರಾರಿಯಾಗಿದ್ದು, ಅವನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಶಿವಾನಂದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ನಿವಾಸಿ ಎಂದು ತಿಳಿದುಬಂದಿದೆ.

ಇದನ್ನೂ ಓದಿ ಹೇಳಿದ್ದು ಗಿಳಿಶಾಸ್ತ್ರ, ಇಕ್ಕಿದ್ದು ದುಡ್ಡು, ಚಿನ್ನಾಭರಣಕ್ಕೆ ಗಾಳ! ಐಟಿ ಅಧಿಕಾರಿಗೆ ಲಕ್ಷಾಂತರ ರೂ. ಪಂಗನಾಮ

ಆರೋಪಿ ದೋಚಿದ್ದೇನೇನು?

ಬಂಧನದ ನಂತರ ಆರೋಪಿಯಿಂದ ಸುಮಾರು 32 ಲಕ್ಷ 86 ಸಾವಿರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಂದು ಫಾರ್ಚೂನರ್ ಕಾರು, ಒಂದು ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು, 11 ಮೊಬೈಲ್ ಫೋನ್‌ಗಳು, ಒಂದು ಟ್ಯಾಬ್, ಒಂದು ಡೊಂಗಲ್, ಮೂರು ಕಾರಿನ ಕೀಗಳು ಹಾಗೂ 14 ಸಾವಿರ ರೂಪಾಯಿ ನಗದು ಸೇರಿದಂತೆ ಹಲವು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us