AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಿ ಮೂರು ವರ್ಷವಾದರೂ ಮಕ್ಕಳಾಗಿಲ್ಲವೆಂದು ಪತ್ನಿ ಕಿರಿಕ್; ಕತ್ತು ಹಿಸುಕಿ ಕೊಲೆ ಮಾಡಿದ ಪತಿ

ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಮಕ್ಕಳಾಗಿಲ್ಲ ಎಂದು ಕಾಟ ಕೊಟ್ಟಿದ್ದಕ್ಕೆ ಪತಿ ತನ್ನ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆಂದು ಕಥೆ ಕಟ್ಟಿದರೂ, ಮೃತರ ಪೋಷಕರು ಕುತ್ತಿಗೆಯ ಗಾಯಗಳ ಬಗ್ಗೆ ಅನುಮಾನಗೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ದೃಢಪಟ್ಟಿದ್ದು, ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಲಾಗಿದೆ.

ಮದುವೆಯಾಗಿ ಮೂರು ವರ್ಷವಾದರೂ ಮಕ್ಕಳಾಗಿಲ್ಲವೆಂದು ಪತ್ನಿ ಕಿರಿಕ್; ಕತ್ತು ಹಿಸುಕಿ ಕೊಲೆ ಮಾಡಿದ ಪತಿ
ಪತ್ನಿಯನ್ನು ಕೊಲೆ ಮಾಡಿ ಹೃದಯಾಘಾತದಿಂದ ಸತ್ತಿದ್ದಾಳೆಂದ ಪತಿ!
ಸಹದೇವ್​ ಮಾನೆ
| Edited By: |

Updated on: Jan 23, 2026 | 10:32 AM

Share

ಬೆಳಗಾವಿ, ಜನವರಿ 23: ಜಿಲ್ಲೆಯ ಬೈಲಹೊಂಗಲ (Belagavi) ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಪತಿ ತನ್ನ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ  ಮಾಡಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗಿ ಮೂರು ವರ್ಷ ಕಳೆದರೂ ಮಕ್ಕಳಾಗಿಲ್ಲವೆಂದು ಪತ್ನಿಯ ಕಾಟದಿಂದ ಸಿಟ್ಟಿಗೆದ್ದ ಪತಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಮೃತರ ಪೋಷಕರ ದೂರಿನ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶವ ನೋಡಿ ಅನುಮಾನಗೊಂಡ ಕುಟುಂಬಸ್ಥರು

ಪತಿ ಫಕೀರಪ್ಪ ಗಿಲಕ್ಕನವರ ಜೊತೆ ಮದುವೆಯಾಗಿ 3 ವರ್ಷ ಕಳೆದರೂ ಮಕ್ಕಳಾಗುತ್ತಿಲ್ಲವೆಂದು ಪತ್ನಿ ರಾಜೇಶ್ವರಿ (21) ಆಗಾಗ್ಗೆ ಕಿರಿಕ್ ಮಾಡುತ್ತಿದ್ದಳು. ಇದರಿಂದ ಬೇಸತ್ತ ಪತಿ, ಸಿಟ್ಟಿಗೆದ್ದು ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಘಟನೆ ಬಳಿಕ ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಕಥೆ ಕಟ್ಟಿದ ಆರೋಪಿ, ಈ ಬಗ್ಗೆ ಸಂಬಂಧಿಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಆದರೆ ಅಂತ್ಯಕ್ರಿಯೆ ವೇಳೆ ರಾಜೇಶ್ವರಿಯ ಪೋಷಕರು ಮಗಳ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳನ್ನು ಗಮನಿಸಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ ಬೆತ್ತಲೆ ಮಾಡಿ, ಕರೆಂಟ್​​ ಶಾಕ್​​ ಕೊಟ್ಟು ಹಿಂಸೆ: ಬದುಕಿರುವಾಗಲೇ ನರಕ ನೋಡಿ ಪ್ರಾಣಬಿಟ್ಟ ಮಹಿಳೆ

ತನಿಖೆ ವೇಳೆ ತಪ್ಪೊಪ್ಪಿಕೊಂಡ ಪತಿ

ತಕ್ಷಣವೇ ಅವರು ಬೈಲಹೊಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆರೋಪಿ ಫಕೀರಪ್ಪ ತನ್ನ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿಯೂ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಬೈಲಹೊಂಗಲ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ