ಬಸವೇಶ್ವರರ ಕುರಿತು ಪಠ್ಯದಲ್ಲಿ ತಪ್ಪು ಮಾಹಿತಿ ಆರೋಪ; ದೋಷ ಸರಿಪಡಿಸದಿದ್ದರೆ ಸರ್ಕಾರ ವಿರುದ್ಧ ಉಗ್ರಹೋರಾಟ ನಡೆಸುವುದಾಗಿ ಎಚ್ಚರಿಕೆ ಕೊಟ್ಟ ಬಸವರಾಜ ರೊಟ್ಟಿ

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬಸವಣ್ಣನವರ ಬಗ್ಗೆ ಪಾಠದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ರೋಹಿತ್ ಚಕ್ರತೀರ್ಥ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಬಸವೇಶ್ವರರ ಕುರಿತು ಪಠ್ಯದಲ್ಲಿ ತಪ್ಪು ಮಾಹಿತಿ ಆರೋಪ; ದೋಷ ಸರಿಪಡಿಸದಿದ್ದರೆ ಸರ್ಕಾರ ವಿರುದ್ಧ ಉಗ್ರಹೋರಾಟ ನಡೆಸುವುದಾಗಿ ಎಚ್ಚರಿಕೆ ಕೊಟ್ಟ ಬಸವರಾಜ ರೊಟ್ಟಿ
ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವ ಸೇನೆ ಪ್ರತಿಭಟನೆ
Follow us
TV9 Web
| Updated By: ಆಯೇಷಾ ಬಾನು

Updated on:Jun 02, 2022 | 4:08 PM

ಬೆಳಗಾವಿ: ಕುವೆಂಪು ಹಾಗೂ ಬಸವೇಶ್ವರರ ಕುರಿತಂತೆ ಪಠ್ಯದಲ್ಲಿ ಮಾಡಿರುವ ಪರಿಷ್ಕರಣೆಗೆ ವ್ಯಾಪಕ ವಿರೋಧ ಮುಂದುವರಿದಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿ ವಿರುದ್ಧ ಲಿಂಗಾಯತ ಸಮುದಾಯ ಸಿಡಿದೆದ್ದಿದೆ. ಬಸವಣ್ಣನವರ ಬಗ್ಗೆ ಪಠ್ಯದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ ಹಿನ್ನೆಲೆ ಬೆಳಗಾವಿ ಡಿಸಿ ಕಚೇರಿ ಎದುರು ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವ ಸೇನೆ ಪ್ರತಿಭಟನೆ ನಡೆಸಿದೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬಸವಣ್ಣನವರ ಬಗ್ಗೆ ಪಾಠದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ರೋಹಿತ್ ಚಕ್ರತೀರ್ಥ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. 9ನೇ ತರಗತಿ ಪಠ್ಯದಲ್ಲಿ ಉಪನಯನವಾದ ನಂತರ ಕೂಡಲಸಂಗಮಕ್ಕೆ ನಡೆದರು ಎಂದು ಬರೆದಿದ್ದು ತಪ್ಪು. ಪರಿಷ್ಕೃತ ಪಠ್ಯದಲ್ಲಿನ ಎಲ್ಲ ದೋಷ ಸರಿಪಡಿಸಿ ಪಠ್ಯಪುಸ್ತಕ ಮರುಮುದ್ರಿಸಿ ಹಂಚಬೇಕು. ಒಂದು ವಾರದಲ್ಲಿ ಎಲ್ಲ ದೋಷ ನಿವಾರಿಸದಿದ್ದರೆ ಸರ್ಕಾರ ವಿರುದ್ಧ ಉಗ್ರಹೋರಾಟ ಮಾಡುತ್ತೇವೆ ಎಂದು ಬೆಳಗಾವಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಮುಂದಿನ ದಿನಗಳಲ್ಲಿ ಮನೀಶ್ ಸಿಸೋಡಿಯಾರನ್ನು ಬಂಧಿಸಲಿದೆ ಕೇಂದ್ರ; ನಮ್ಮೆಲ್ಲರನ್ನೂ ಒಟ್ಟಿಗೆ ಜೈಲಿಗೆ ಹಾಕಿ: ಮೋದಿಗೆ ಕೇಜ್ರಿವಾಲ್ ಮನವಿ

ಇದರ ನಡುವೆ ಬಸವೇಶ್ವರರ ಬಗ್ಗೆ ಪಠ್ಯದಲ್ಲಿ ಬರೆದಿರುವ ಅಂಶ ಸರಿಯಿಲ್ಲ ಎಂಬ ಒತ್ತಡವನ್ನು ಸಾಣೆಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯರು ತೀವ್ರಗೊಳಿಸಿದ್ದಾರೆ. ಸರ್ಕಾರ ಕೂಡಲೇ ಹೊಸ ಪಾಠವನ್ನು ಕೈಬಿಡಬೇಕು. ಇದರಲ್ಲಿ ಬಸವಣ್ಣರ ಆಶಯಗಳಿಗೆ ತದ್ವಿರುದ್ಧವಾಗಿ ಬರೆಯಲಾಗಿದೆ ಎಂದು ಆಕ್ಷೇಪ ಎತ್ತಿದ್ದಾರೆ. ಇದನ್ನೂ ಓದಿ; ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ ಮೊದಲ ಬಾರಿ ಕಾಬೂಲ್‌ಗೆ ಅಧಿಕೃತ ಭೇಟಿ ನೀಡಿದ ಭಾರತ

Published On - 4:08 pm, Thu, 2 June 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ