Kannada Rajyotsava: ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ 50 ಸಾವಿರ ಜನರಿಗೆ ಹೋಳಿಗೆ ಊಟ

| Updated By: ವಿವೇಕ ಬಿರಾದಾರ

Updated on: Oct 30, 2022 | 4:53 PM

Belagavi Karnataka Rajyotsava: 50 ಸಾವಿರ ಜನರಿಗೆ, ಒಬ್ಬರಿಗೆ ತಲಾ ಎರಡು ಹೋಳಿಗೆಯಂತೆ 1 ಲಕ್ಷ ಹೋಳಿಗೆ ಸಿದ್ಧಪಡಿಸಲಾಗುತ್ತಿದೆ.

Kannada Rajyotsava: ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ 50 ಸಾವಿರ ಜನರಿಗೆ ಹೋಳಿಗೆ ಊಟ
ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ
Follow us on

ಬೆಳಗಾವಿ: ಪ್ರತಿವರ್ಷ ಕನ್ನಡ ರಾಜ್ಯೋತ್ಸವವನ್ನು (Kannada Rajyotsava) ಗಡಿನಾಡು, ಕುಂದಾನಗರಿ ಬೆಳಗಾವಿಯಲ್ಲಿ (Belagavi) ಅದ್ಧೂರಿಯಾಗಿ ಆಚರಿಸುತ್ತಾರೆ. ಚೆನ್ನಮ್ಮನ ನಾಡಿನಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವವನ್ನು ಕಣ್ತುಂಬಿಕೊಳ್ಳಲು ರಾಜ್ಯದ ನಾನಾ ಭಾಗದಿಂದ ಜನರು ಆಗಮಿಸುತ್ತಾರೆ. ಆದರೆ ಕೊರೊನಾ ಕಾರಣದಿಂದ ಕಳೆದ 2-3 ವರ್ಷದಿಂದ ಬೆಳಗಾವಿಯಲ್ಲಿ ರಾಜ್ಯೋತ್ಸವ ಕಳೆಗುಂದಿತ್ತು. ಆದರೆ ಈ ವರ್ಷ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಿದ್ದು, ರಾಜ್ಯೋತ್ಸವದಲ್ಲಿ ಭಾಗಿಯಾಗುವ 50 ಸಾವಿರ ಜನರಿಗೆ ಹೋಳಿಗೆ ಊಟ ಏರ್ಪಡಿಸಲಾಗಿದೆ.

ನಗರದ ಹುಕ್ಕೇರಿ ಹಿರೇಮಠ ವತಿಯಿಂದ 50 ಸಾವಿರ ಜನರಿಗೆ, ಒಬ್ಬರಿಗೆ ತಲಾ ಎರಡು ಹೋಳಿಗೆಯಂತೆ 1 ಲಕ್ಷ ಹೋಳಿಗೆಯನ್ನು ಸಿದ್ಧಪಡಿಸಲಾಗುತ್ತಿದೆ. ಜೊತೆಗೆ ಊಟದಲ್ಲಿ ಬದನೆಕಾಯಿ ಪಲ್ಯ, ಅನ್ನ-ಸಾಂಬಾರು ಇರಲಿದೆ ಎಂದು ಬೆಳಗಾವಿಯ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿಯ 200 ಬಾಣಸಿಗರು ಊಟ ಸಿದ್ಧಪಡಿಸುತ್ತಿದ್ದಾರೆ. 150 ಜನ ಹೆಣ್ಣಮಕ್ಕಳಿಂದ ಹೋಳಿಗೆ, 50 ಪುರುಷರಿಂದ ಅನ್ನ-ಸಾಂಬರು, ಪಲ್ಯ ತಯಾರು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸೇರಿ ಜಿಲ್ಲೆಯ ಎಲ್ಲ ಅಧಿಕಾರಿಗಳು ಹುಕ್ಕೇರಿ ಹಿರೇಮಠಕ್ಕೆ ಸಹಕಾರ ನೀಡುತ್ತಿದ್ದಾರೆ. ಬೆಳಗಾವಿಯ ಸರ್ದಾರ್ ‌ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಯಿಂದಲೇ ಹೋಳಿಗೆ ದಾಸೋಹ ಪ್ರಾರಂಭ ಆಗಲಿದೆ. ಈ ಬೃಹತ್​ ಅನ್ನ ದಾಸೋಹಕ್ಕೆ ಹಿರಿಯ ನಟ ಸಾಯಿಕುಮಾರ್, ಉಸ್ತುವಾರಿ ‌ಸಚಿವ ಗೋವಿಂದ ಕಾರಜೋಳ ಚಾಲನೆ ನೀಡಲಿದ್ದಾರೆ.

ಅತೀ ಉದ್ದದ ಕನ್ನಡ ಭಾವುಟ ಪ್ರದರ್ಶನ

ಕನ್ನಡ ಮನಸುಗಳು ಎಂಬ ಕನ್ನಡ ಸಂಘಟನೆಯಿಂದ ಬೆಳಗಾವಿಯ ಚೆನ್ನಮ್ಮ ಸರ್ಕಲ್​ನಿಂದ ಸುಮಾರು 3200 ಮೀಟರ್ ಉದ್ದದ ಕನ್ನಡ ಬಾವುಟ ಪ್ರದರ್ಶನ ನಡೆಯಲಿದೆ. ಈ ಮೂಲಕ ಲಂಡನ್ ಬುಕ್ ಆಫ್ ರೆಕಾರ್ಡ್ ಸೇರಲಿದೆ. ಇದೇ ಸಂಘಟನೆ ಈ ಹಿಂದೆ ಬೆಂಗಳೂರಿನಲ್ಲಿ 2040 ಮೀಟರ್ ಉದ್ದದ ಕನ್ನಡ ಬಾವುಟ ಪ್ರದರ್ಶನ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Sun, 30 October 22