Kannada Rajyotsava: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಫುಲ್ ಟೈಟ್ ಸೆಕ್ಯೂರಿಟಿ: 35 ವಿಡಿಯೋ ಕ್ಯಾಮರಾ, 300 ಸಿಸಿ ಕ್ಯಾಮರಾ, 8 ಡ್ರೋನ್ ಕ್ಯಾಮರಾ ಕಣ್ಗಾವಲು

ಬೆಳಗಾವಿಯಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಹೀಗಾಗಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ನೇತೃತ್ವದಲ್ಲಿ ಇಂದು ರೂಟ್ ಮಾರ್ಚ್ ಮಾಡಲಾಗಿದೆ.

Kannada Rajyotsava: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಫುಲ್ ಟೈಟ್ ಸೆಕ್ಯೂರಿಟಿ: 35 ವಿಡಿಯೋ ಕ್ಯಾಮರಾ, 300 ಸಿಸಿ ಕ್ಯಾಮರಾ, 8 ಡ್ರೋನ್ ಕ್ಯಾಮರಾ ಕಣ್ಗಾವಲು
ಬೆಳಗಾವಿಯಲ್ಲಿ ಪೊಲೀಸರ ರೂಟ್ ಮಾರ್ಚ್
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 30, 2022 | 10:43 PM

ಬೆಳಗಾವಿ: ಎರಡು ವರ್ಷ ಕರೋನಾ ಹಾಗೂ ಕಳೆದ ವರ್ಷ ಪುನೀತ ರಾಜ್​​ಕುಮಾರ (Punit Rajkumar) ನಿಧನದ ಹಿನ್ನೆಲೆ ರಾಜ್ಯೋತ್ಸವವನ್ನು (Kannada Rajyostav) ಕುಂದಾನಗರಿ ಬೆಳಗಾವಿಯಲ್ಲಿ (Belagavi) ಸರಳವಾಗಿ ಆಚರಿಸಲಾಗಿತ್ತು. ಆದರೆ ಈ ಭಾರಿ ಬಹಳ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್​ ಇಲಾಖೆ ಕೂಡ ಬೀಗಿ ಪೊಲೀಸ್​ ಬಂದೋಬಸ್ತ್ ಮಾಡಲಾಗಿದೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ನೇತೃತ್ವದಲ್ಲಿ ಇಂದು (ಅ. 30) ರೂಟ್ ಮಾರ್ಚ್ ಮಾಡಲಾಗಿದೆ.

ಬೆಳಗಾವಿ ನಗರದ ವಿವಿಧ ಬಡಾವಣೆಯಲ್ಲಿ ಪೊಲೀಸ್ ಅಧಿಕಾರಿಗಳ ರೌಂಡ್ಸ್‌ ಹೊಡೆದಿದ್ದು, ಪೊಲೀಸರ ರೂಟ್ ಮಾರ್ಚ್ ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಎಂ.ಇ.ಎಸ್ ಪುಂಡರಿಂದ ಕರಾಳ ದಿನಾಚರಣೆಗೆ ಕರೆ ಹಿನ್ನೆಲೆ ಪೊಲೀಸರು ಫುಲ್ ಅಲರ್ಟ್ ಆಗಿದ್ದು, ಮೂವರು ಡಿಸಿಪಿ, 12 ಎಸಿಪಿ, 52 ಇನ್ಸ್‌ಪೆಕ್ಟರ್, 2500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಹಾಗೇ 9 ಸಿಎಆರ್ ತುಕಡಿ, 10 ಕೆಎಸ್‌ಆರ್‌ಪಿ ತುಕಡಿ, 500 ಗೃಹರಕ್ಷಕ ದಳ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. 35 ವಿಡಿಯೋ ಕ್ಯಾಮರಾ, 300 ಸಿಸಿ ಕ್ಯಾಮರಾ, 8 ಡ್ರೋನ್ ಕ್ಯಾಮರಾಗಳನ್ನು ಕಣ್ಗಾವಲಾಗಿ ಇವೆ.

ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ 50 ಸಾವಿರ ಜನರಿಗೆ ಹೋಳಿಗೆ ಊಟ

ಈ ವರ್ಷ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಿದ್ದು, ರಾಜ್ಯೋತ್ಸವದಲ್ಲಿ ಭಾಗಿಯಾಗುವ 50 ಸಾವಿರ ಜನರಿಗೆ ಹೋಳಿಗೆ ಊಟ ಏರ್ಪಡಿಸಲಾಗಿದೆ. ನಗರದ ಹುಕ್ಕೇರಿ ಹಿರೇಮಠ ವತಿಯಿಂದ 50 ಸಾವಿರ ಜನರಿಗೆ, ಒಬ್ಬರಿಗೆ ತಲಾ ಎರಡು ಹೋಳಿಗೆಯಂತೆ 1 ಲಕ್ಷ ಹೋಳಿಗೆಯನ್ನು ಸಿದ್ಧಪಡಿಸಲಾಗುತ್ತಿದೆ. ಜೊತೆಗೆ ಊಟದಲ್ಲಿ ಬದನೆಕಾಯಿ ಪಲ್ಯ, ಅನ್ನ-ಸಾಂಬಾರು ಇರಲಿದೆ ಎಂದು ಬೆಳಗಾವಿಯ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿಯ 200 ಬಾಣಸಿಗರು ಊಟ ಸಿದ್ಧಪಡಿಸುತ್ತಿದ್ದಾರೆ. 150 ಜನ ಹೆಣ್ಣಮಕ್ಕಳಿಂದ ಹೋಳಿಗೆ, 50 ಪುರುಷರಿಂದ ಅನ್ನ-ಸಾಂಬರು, ಪಲ್ಯ ತಯಾರು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸೇರಿ ಜಿಲ್ಲೆಯ ಎಲ್ಲ ಅಧಿಕಾರಿಗಳು ಹುಕ್ಕೇರಿ ಹಿರೇಮಠಕ್ಕೆ ಸಹಕಾರ ನೀಡುತ್ತಿದ್ದಾರೆ. ಬೆಳಗಾವಿಯ ಸರ್ದಾರ್ ‌ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಯಿಂದಲೇ ಹೋಳಿಗೆ ದಾಸೋಹ ಪ್ರಾರಂಭ ಆಗಲಿದೆ. ಈ ಬೃಹತ್​ ಅನ್ನ ದಾಸೋಹಕ್ಕೆ ಹಿರಿಯ ನಟ ಸಾಯಿಕುಮಾರ್, ಉಸ್ತುವಾರಿ ‌ಸಚಿವ ಗೋವಿಂದ ಕಾರಜೋಳ ಚಾಲನೆ ನೀಡಲಿದ್ದಾರೆ.

ಅತೀ ಉದ್ದದ ಕನ್ನಡ ಭಾವುಟ ಪ್ರದರ್ಶನ

ಕನ್ನಡ ಮನಸುಗಳು ಎಂಬ ಕನ್ನಡ ಸಂಘಟನೆಯಿಂದ ಬೆಳಗಾವಿಯ ಚೆನ್ನಮ್ಮ ಸರ್ಕಲ್​ನಿಂದ ಸುಮಾರು 3200 ಮೀಟರ್ ಉದ್ದದ ಕನ್ನಡ ಬಾವುಟ ಪ್ರದರ್ಶನ ನಡೆಯಲಿದೆ. ಈ ಮೂಲಕ ಲಂಡನ್ ಬುಕ್ ಆಫ್ ರೆಕಾರ್ಡ್ ಸೇರಲಿದೆ. ಇದೇ ಸಂಘಟನೆ ಈ ಹಿಂದೆ ಬೆಂಗಳೂರಿನಲ್ಲಿ 2040 ಮೀಟರ್ ಉದ್ದದ ಕನ್ನಡ ಬಾವುಟ ಪ್ರದರ್ಶನ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:42 pm, Sun, 30 October 22

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ