ಬೆಳಗಾವಿ: ಚಳಿಗಾಲ ಅಧಿವೇಶನಕ್ಕೆ 10 ವಿವಿಧ ಸಮಿತಿ ರಚನೆ, ಮಹಾಮೇಳಾವಗೆ ಅವಕಾಶವಿಲ್ಲ; ಡಿಸಿ ನಿತೇಶ್​ ಪಾಟೀಲ್​​

ಕಳೆದ ವರ್ಷ ಅಧಿವೇಶನಕ್ಕೆ 20 ಕೋಟಿ ಅನುದಾನ ಬಂದಿತ್ತು. ಇದರಲ್ಲಿ 18 ಕೋಟಿ 50 ಲಕ್ಷ ರೂಪಾಯಿಯಲ್ಲಿ ಅಧಿವೇಶನ ಮಾಡಿದ್ದೇವೆ. ಸರ್ಕಾರ ಕೊಟ್ಟ ಅನುದಾನವನ್ನು ಉಳಿತಾಯ ಮಾಡಿದ್ದೇವೆ. ನ. 7ರಂದು ಬೆಳಗಾವಿಗೆ ಸಭಾಪತಿಗಳು ಆಗಮಿಸುತ್ತಿದ್ದಾರೆ. ಈ ವೇಳೆ ಚಳಿಗಾಲದ ಅಧಿವೇಶನದ ದಿನಾಂಕ ಘೋಷಣೆ ಮಾಡಲಿದ್ದಾರೆ‌ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.

ಬೆಳಗಾವಿ: ಚಳಿಗಾಲ ಅಧಿವೇಶನಕ್ಕೆ 10 ವಿವಿಧ ಸಮಿತಿ ರಚನೆ, ಮಹಾಮೇಳಾವಗೆ ಅವಕಾಶವಿಲ್ಲ; ಡಿಸಿ ನಿತೇಶ್​ ಪಾಟೀಲ್​​
ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್​
Follow us
Sahadev Mane
| Updated By: ವಿವೇಕ ಬಿರಾದಾರ

Updated on:Oct 31, 2023 | 1:59 PM

ಬೆಳಗಾವಿ ಅ.31: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ (Winter session) ಡಿಸೆಂಬರ್​ನಲ್ಲಿ ನಡೆಯಲಿದೆ. ಚಳಿಗಾಲದ ಅಧಿವೇಶನಕ್ಕೆ 10 ವಿವಿಧ ಸಮಿತಿ ರಚಿಸಲಾಗಿದೆ. ಬೆಳಗಾವಿ (Belagavi) ಅಧಿವೇಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕಳೆದ ವರ್ಷ ಅಧಿವೇಶನಕ್ಕೆ 20 ಕೋಟಿ ಅನುದಾನ ಬಂದಿತ್ತು. ಇದರಲ್ಲಿ 18 ಕೋಟಿ 50 ಲಕ್ಷ ರೂಪಾಯಿಯಲ್ಲಿ ಅಧಿವೇಶನ ಮಾಡಿದ್ದೇವೆ. ಸರ್ಕಾರ ಕೊಟ್ಟ ಅನುದಾನವನ್ನು ಉಳಿತಾಯ ಮಾಡಿದ್ದೇವೆ. ನ. 7ರಂದು ಬೆಳಗಾವಿಗೆ ಸಭಾಪತಿಗಳು ಆಗಮಿಸುತ್ತಿದ್ದಾರೆ. ಈ ವೇಳೆ ಚಳಿಗಾಲದ ಅಧಿವೇಶನದ ದಿನಾಂಕ ಘೋಷಣೆ ಮಾಡಲಿದ್ದಾರೆ‌ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ (Nitesh Patil) ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಾಳೆ (ನ.1) ರಂದು ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತೇವೆ. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣದ ಸುವರ್ಣ ಸಂಭ್ರಮ ಆಚರಣೆಯನ್ನು ಭವ್ಯವಾಗಿ ಮಾಡುತ್ತಿದ್ದೇವೆ. ಕನ್ನಡ ರಾಜ್ಯೋತ್ಸವ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಲಿದ್ದಾರೆ. ತಾಯಿ ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಡಿ.4ರಿಂದ ಡಿ.15ರವರೆಗೆ ಸುವರ್ಣಸೌಧದಲ್ಲಿ ಅಧಿವೇಶನ ನಡೆಯಲಿದೆ: ಸಚಿವ ಸತೀಶ್ ಜಾರಕಿಹೊಳಿ

100 ರೂಪಕ ವಾಹನಗಳು ರಾಜ್ಯೋತ್ಸವ ಮೆರವಣಿಗೆಯಲ್ಲಿ ಗಮನ ಸೆಳೆಯಲಿವೆ. ಐದು ಲಕ್ಷ ಜನರು ರಾಜ್ಯೋತ್ಸವ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 10.30ಕ್ಕೆ ರಾಜ್ಯೋತ್ಸವ ಮೆರವಣಿಗೆ ಚಾಲನೆ ಸಿಗಲಿದೆ. ಹಳದಿ-ಕೆಂಪು ಬಣ್ಣದ ಗಾಳಿಪಟ ಉತ್ಸವ ಜಿಲ್ಲೆಯಾದ್ಯಂತ ನಡೆಯಲಿದೆ. ಇನ್ನು ಎಂಇಎಸ್ ಕರಾಳ ದಿನಾಚರಣೆಗೆ ಅನುಮತಿ ಕೊಟ್ಟಿಲ್ಲ, ಕೊಡುವುದಿಲ್ಲ ಎಂದರು.

ಮಹಾರಾಷ್ಟ್ರ ನಾಯಕರಿಗೆ ಬೆಳಗಾವಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದೇವೆ. ಕರಾಳ‌ ದಿನಕ್ಕೂ ಅವಕಾಶವಿಲ್ಲ. ಅಧಿವೇಶನ ವೇಳೆಯೂ ಮಹಾಮೇಳಾವಗೆ ಅವಕಾಶ ಕೊಡುವುದಿಲ್ಲ. ಕಳೆದ ವರ್ಷವೂ ಅವಕಾಶ ಕೊಟ್ಟಿಲ್ಲ. ಈ ವರ್ಷವೂ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ. ಮಹಾರಾಷ್ಟ್ರ ನಾಯಕರು ಬೆಳಗಾವಿ ಜಿಲ್ಲೆಯ ಪ್ರವೇಶಿಸದಂತೆ ಎಸ್ಪಿ ಮತ್ತು ಪೊಲೀಸ್ ಕಮೀಷನರ್ ಕ್ರಮವಹಿಸುತ್ತಾರೆ‌ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:57 pm, Tue, 31 October 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್