ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ: ಬಸವಂತನ ಜೀವ ಉಳಿಸಿದ ಐಪಿಎಸ್ ಅಧಿಕಾರಿ

ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನಿಗೆ ಚಾಕು ಇರಿದಿರುವಂತಹ ಘಟನೆ ನಡೆದಿದೆ. ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ: ಬಸವಂತನ ಜೀವ ಉಳಿಸಿದ ಐಪಿಎಸ್ ಅಧಿಕಾರಿ
ಬಸವಂತ ಕಡೋಲ್ಕರ್
Edited By:

Updated on: Jan 06, 2026 | 5:20 PM

ಬೆಳಗಾವಿ, ಜನವರಿ 06: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಪುತ್ರನ ಕಾರು ಚಾಲಕನಿಗೆ ದುಷ್ಕರ್ಮಿಗಳಿಂದ ಚಾಕು ಇರಿದಿರುವಂತಹ (stabbed) ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್(32)ಗೆ ಬೈಕ್​​​ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಎದೆ, ಭುಜ, ತೊಡೆ ಸೇರಿ 4 ಕಡೆ ಚಾಕುವಿನಿಂದ ಇರಿದು ಪರಾರಿ ಆಗಿದ್ದಾರೆ. ಮೈನಿಂಗ್ ವಿಚಾರಕ್ಕೆ ಹಲ್ಲೆ ಮಾಡಿದ್ದಾರೆ. ಸದ್ಯ ಗಾಯಾಳು ಬಸವಂತರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಡೆದದ್ದೇನು?

ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್​​, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್​​​ ಕಾರು ಚಾಲಕರಾಗಿದ್ದಾರೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಕಾರು ನಿಲ್ಲಿಸಿ ಕೆಳಗೆ ನಿಂತಿದ್ದರು. ಈ ವೇಳೆ ಬೈಕ್​​​ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿ ಆಗಿದ್ದಾರೆ. ಹಲ್ಲೆ ಮಾಡಿರುವವರು ಬೆಳಗಾವಿ ತಾಲೂಕಿನ ಗೊಜಗಾ ಮೂಲದವರು ಎನ್ನಲಾಗುತ್ತಿದೆ. ಚಾಕು ಇರಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.

ಇದನ್ನೂ ಓದಿ: ಯಲ್ಲಾಪುರ: ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ

ಇನ್ನು ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಬಸವಂತ ಕಡೋಲ್ಕರ್​​ ಜೀವ ಉಳಿಸಿದ್ದಾರೆ.  ಘಟನೆ ವೇಳೆ ರವೀಂದ್ರ ಗಡಾದಿ ಅವರು ಮನೆಗೆ ಊಟಕ್ಕೆ ಹೋಗುತ್ತಿದ್ದರು. ಗಲಾಟೆ ನೋಡುತ್ತಿದ್ದಂತೆ ಸ್ಥಳಕ್ಕೆ ಹೋಗಿ ದುಷ್ಕರ್ಮಿಗಳಿಂದ ಬಸವಂತನ ಜೀವ ಉಳಿಸಿದ್ದಾರೆ. ಸದ್ಯ ಆಸ್ಪತ್ರೆಗೆ ಡಿಸಿಪಿ, ಎಸಿಪಿ ಹಾಗೂ ಸಚಿವೆ ಲಕ್ಷ್ಮೀ ಪುತ್ರ ಮೃಣಾಲ್‌ ಭೇಟಿ ಮಾಡಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ.

ಹಲ್ಲೆಗೊಳಗಾದ ಬಸವಂತ ಹೇಳಿದ್ದಿಷ್ಟು 

ಹಲ್ಲೆಗೊಳಗಾದ ಬಸವಂತ ಟಿವಿ9 ಜೊತೆಗೆ ಪ್ರತಿಕ್ರಿಯಿಸಿದ್ದು, ಮೈನಿಂಗ್ ವಿಚಾರದಲ್ಲಿ ಬಂದು ನನ್ಮೇಲೆ ಹಲ್ಲೆ ಮಾಡಿದ್ದಾರೆ. ಮೈನಿಂಗ್ ವಿಚಾರಕ್ಕೆ ಪದೇಪದೆ ಜಗಳ ತೆಗೆಯುತ್ತಿದ್ದರು. ಇಂದು ಗೋಜಗಾ ಗ್ರಾಮದ ಶಿವಾ ಪೂಜಾರಿ, ಪರಶುರಾಮ ಮತ್ತು ಮೋನಪ್ಪ ಪಾಟೀಲ್​ ಬಂದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:17 pm, Tue, 6 January 26