ಅತಂಕಕಾರಿ ಸಂಗತಿ: ಮಹಿಳಾ-ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿ ಅತೀ ಹೆಚ್ಚು ಬಾಲ್ಯ ವಿವಾಹ

Child marriage Child pregnancy: ಮಹಾರಾಷ್ಟ್ರ ಮತ್ತು ಗೋವಾ ಗಡಿಗೆ ಹೊಂದಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ 2022 ಮತ್ತು 2023ರಲ್ಲಿ ಅತೀ ಹೆಚ್ಚು ಬಾಲ್ಯ ವಿವಾಹ ನಡೆದು ಹೆಚ್ಚಿನ ಸಂಖ್ಯೆಯಲ್ಲಿ 18 ವರ್ಷದೊಳಗಿನ ಬಾಲೆಯರು ಗರ್ಭ ಧರಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ.

ಅತಂಕಕಾರಿ ಸಂಗತಿ: ಮಹಿಳಾ-ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿ ಅತೀ ಹೆಚ್ಚು ಬಾಲ್ಯ ವಿವಾಹ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿ ಅತೀ ಹೆಚ್ಚು ಬಾಲ್ಯ ವಿವಾಹ
Follow us
| Updated By: ಸಾಧು ಶ್ರೀನಾಥ್​

Updated on: Dec 01, 2023 | 11:25 AM

ಇದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತವರು ಜಿಲ್ಲೆಯಲ್ಲಿನ ಬಾಲೆಯರ ಕರುಳು ಹಿಂಡುವ ಕಥೆ. ರಾಜ್ಯದಲ್ಲಿ ಭ್ರೂಣ ಹತ್ಯೆ ಸದ್ದಿನ ನಡುವೆ ಬೆಳಗಾವಿ ಜಿಲ್ಲೆಯಲ್ಲಿ ಅತೀ ಹೆಚ್ಚು ಬಾಲ್ಯ ವಿವಾಹಗಳು ನಡೆದಿವೆ. 18 ವಯಸ್ಸಿನ ಬಾಲೆಯರು ಗರ್ಭ ಧರಿಸುತ್ತಿರುವ ಭಯಾನಕ/ ಅತಂಕಕಾರಿ ಸಂಗತಿ ಆರೋಗ್ಯ ಇಲಾಖೆಯ ವರದಿಯಲ್ಲಿ ಬೆಳಕಿಗೆ ಬಂದಿದೆ. ಅಷ್ಟಕ್ಕೂ 19ತಿಂಗಳಲ್ಲೇ ಅದೇಷ್ಟೂ ಬಾಲ್ಯ ವಿವಾಹ ಆಗಿವೆ? ಈ ಬಗ್ಗೆ ಅಧಿಕಾರಿಗಳು ಹೇಳುವುದೇನೂ ಅಂತೀರಾ ಈ ಸ್ಟೋರಿ ನೋಡಿ…

ಹೌದು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸದ್ದಿಲ್ಲದೇ ಬಾಲ್ಯ ವಿವಾಹಗಳು ನಡೆಯುತ್ತಿರುವುದು ಅದೊಂದು ವರದಿಯಲ್ಲಿ ಬಯಲಾಗಿದೆ. ಬಾಲ್ಯ ವಿವಾಹ ನಡೆಯದಂತೆ ತಡೆಯಲು ಸರ್ಕಾರ ಸಾಕಷ್ಟು ಕಾನೂನು ತಂದ್ರೂ, ಜಾಗೃತಿ ಮೂಡಿಸಿದ್ರೂ ಬಾಲ್ಯ ವಿವಾಹಗಳು ನಿಲ್ತಿಲ್ಲ ಅನ್ನೋದು ದುರಂತ.

ಅಷ್ಟಕ್ಕೂ 2022ರಲ್ಲಿ 81,817 ಜನ ಮಹಿಳೆಯರು ಗರ್ಭಿಣಿಯಾಗಿದ್ದೂ ಈ ಪೈಕಿ 208 ಪ್ರಕರಣಗಳು 18 ವರ್ಷದೊಳಗಿನ ಬಾಲಕಿಯರು ಗರ್ಭಿಣಿಯಾಗಿದ್ದಾರೆ. ಇತ್ತ 2023ರ ಏಪ್ರಿಲ್ ನಿಂದ ಅಕ್ಟೋಬರ್ ವರೆಗೆ 51,468ಜನ ಮಹಿಳೆಯರು ಗರ್ಭಿಣಿಯಾಗಿದ್ರೇ ಇದರಲ್ಲಿ 153 ಬಾಲಕಿಯರು ಗರ್ಭ ಧರಿಸಿದ್ದು ಕಂಡು ಬಂದಿವೆ. ಅಷ್ಟಕ್ಕೂ ಈ ವಿಚಾರ ಸಂತಾನೋತ್ಪತಿ ಮತ್ತು ಮಕ್ಕಳ ಆರೋಗ್ಯ ಪೋರ್ಟಲ್ ನಲ್ಲಿ ಗರ್ಭಿಣಿಯರ ನೋಂದಣಿ ಪ್ರಕ್ರಿಯೆ ವೇಳೆ ಅತೀ ಹೆಚ್ಚು ಬಾಲ್ಯ ವಿವಾಹ ನಡೆದು ಬಾಲೆಯರು ಗರ್ಭ ಧರಿಸಿರುವ ವಿಚಾರ ಬೆಳಕಿಗೆ ಬಂದಿದೆ. ಈ ಮಟ್ಟಿಗೆ ಬಾಲ್ಯ ವಿವಾಹ ನಡೆದ್ರೂ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಮಾತ್ರ ಇದನ್ನ ಸರಿ ಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡುತ್ತಿಲ್ಲ…

ಇನ್ನು ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ ಹೆಚ್ಚಾಗಿ ನಡೆಯುತ್ತಿದ್ದು ಅದರಲ್ಲೂ ಮಹಾರಾಷ್ಟ್ರದ ಗಡಿ ಗ್ರಾಮಗಳಲ್ಲಿ ಈ ರೀತಿ ಪ್ರಕರಣಗಳು ಹೆಚ್ಚಾಗಿ ಕಂಡು ಬರ್ತಿವೆ. 19 ತಿಂಗಳಲ್ಲಿ ಬರೋಬ್ಬರಿ 362 ಬಾಲ್ಯ ವಿವಾಹ ನಡೆದಿದ್ದು ಇದನ್ನ ತಡೆಯಬೇಕಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆ. ಇಲಾಖೆಯ ಸಚಿವೆ ಕೂಡ ಬೆಳಗಾವಿ ಜಿಲ್ಲೆಯಲ್ಲಿದ್ರೂ ಕೂಡ ಇದನ್ನ ತಡೆಯುವ ನಿಟ್ಟಿನಲ್ಲಿ ಯಾವುದೇ ಕಾರ್ಯಕ್ರಮಗಳು ಆಗ್ತಿಲ್ಲ, ಅಧಿಕಾರಿಗಳಿಗೆ ಸಚಿವರು ಖಡಕ್ ಸೂಚನೆ ಕೊಡುವ ಕೆಲಸ ಮಾಡ್ತಿಲ್ಲ.

Also Read: Child marriage  -ಬಾಲ್ಯ ವಿವಾಹಗಳಲ್ಲಿ ಕರ್ನಾಟಕಕ್ಕೆ ಅಗ್ರ ಮಣೆ: ಮಹಿಳಾ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಕಳೆದ 5 ತಿಂಗಳಲ್ಲಿ 12 ಬಾಲ್ಯ ವಿವಾಹ!

ಈ ಕುರಿತು ಟಿವಿ9ಗೆ ಪ್ರತಿಕ್ರಿಯೆ ನೀಡಿದ ಬೆಳಗಾವಿ ಡಿಎಚ್ಒ ಆರ್‌ಸಿಎಚ್ ರಿಪೋರ್ಟ್ ನಲ್ಲಿ ಆಧಾರ ಕಾರ್ಡ್ ಲಿಂಕ್ ಮಾಡಿದಾಗ ಬಾಲಕಿಯರು ಗರ್ಭಿಣಿಯಾದ ಪ್ರಕರಣ ಬೆಳಕಿಗೆ ಬಂದಿದೆ. 18 ವರ್ಷದೊಳಗಿನ ಬಾಲಕಿಯರ ಜತೆ ಬಾಲ್ಯ ವಿವಾಹ ಆಗ್ತಿದ್ದು ಇದರ ಪರಿಣಾಮವಾಗಿ ಗರ್ಭಿಣಿ ಆಗ್ತಿದ್ದಾರೆ. ಟೀನೇಜ್ ಪ್ರೇಗ್ನೆನ್ಸಿ ಆಗೋದ್ರಿಂದ ತಾಯಿ ಮರಣ, ಮಗು ಮರಣ ಜಾಸ್ತಿ ಇರುತ್ತೆ. ಬಾಲ್ಯ ವಿವಾಹ ತಡೆಯನ್ನ ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಬೇಕಿದೆ. ಗ್ರಾಮೀಣ ಭಾಗದಲ್ಲಿ ಈ ರೀತಿ ಪ್ರಕರಣಗಳು ಹೆಚ್ಚಾಗಿ ಕಂಡು ಬರ್ತಿವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಮತ್ತು ಆರೋಗ್ಯ ಇಲಾಖೆ ಇಬ್ಬರು ಕೂಡ ತಡೆಯಬೇಕು. ಬಾಲ್ಯ ವಿವಾಹ ಕಾನೂನು ತುಂಬಾ ವರ್ಷದಿಂದ ಚಾಲ್ತಿಯಲ್ಲಿದ್ದು ಆದ್ರೇ ಫೀಲ್ಡ್ ನಲ್ಲಿ ಅದು ಸರಿಯಾಗಿ ಜಾರಿಯಾಗಬೇಕು ಅಂತಾ ಡಿಎಚ್ಒ ಹೇಳ್ತಿದ್ದಾರೆ.

ಬಾಲ್ಯ ವಿವಾಹ ತಡೆಗೆ ಸಾಕಷ್ಟು ಕಾನೂನು ಬಂದ್ರೂ ಈ ವರೆಗೂ ಸರಿಯಾಗಿ ಅದು ಜಾರಿ ಆಗ್ತಿಲ್ಲ. ಗ್ರಾಮೀಣ ಭಾಗದಲ್ಲಿ ಜನರನ್ನ ಜಾಗೃತಿ ಮೂಡಿಸುವ ಕೆಲಸ ಆಗ್ತಿದ್ರೂ ಪೋಷಕರು ಮಾತ್ರ ಸಣ್ಣ ವಯಸ್ಸಿನಲ್ಲೇ ಮಕ್ಕಳ ಮದುವೆ ಮಾಡಿ ಕೈ ತೊಳೆದುಕೊಳ್ಳುವ ಕೆಲಸ ಮಾಡ್ತಾ ಅವರನ್ನ ಮೃತ್ಯುಕೂಪಕ್ಕೆ ತಳ್ತಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇನ್ನಾದ್ರೂ ಎಚ್ಚೆತ್ತುಕೊಂಡು ಇಲಾಖೆಯ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿ ಬಾಲ್ಯ ವಿವಾಹ ತಡೆಗೆ ಕ್ರಮ ಕೈಗೊಳ್ಳಲಿ. ಈಗಾಗಿರುವ ಪ್ರಕರಣಗಳ ಕುರಿತು ದೂರು ದಾಖಲಿಸಿ ಕ್ರಮಕ್ಕೆ ಮುಂದಾಗುತ್ತಾರಾ ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ