ಬೆಳಗಾವಿ: DySP, ಪಿಎಸ್​ಐ ಹೆಸರು ಬರೆದಿಟ್ಟು ವ್ಯಕ್ತಿ ಸಾವು, ಕಾರಣವೇನು?

ಕೊಟ್ಟ ಸಾಲ ವಾಪಸ್ ಕೊಡಲಿಲ್ಲ ಎಂದು ಮನನೊಂದು ಬೆಳಗಾವಿಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದ್ರೆ, ಆತ್ಮಹತ್ಯೆಗೂ ಮುನ್ನ ಡೆತ್​​ ನೋಟ್ ಬರೆದಿಟ್ಟಿದ್ದು, ಹಲವ ಹೆಸರಗಳನ್ನು ಉಲ್ಲೇಖಿಸಿದ್ದಾನೆ. ಅದರಲ್ಲೂ ಮುಖ್ಯವಾಗಿ ಡೆತ್​ ನೋಟ್​​ನಲ್ಲಿ DySP, ಪಿಎಸ್​ಐ ಹೆಸರುಗಳನ್ನ ಉಲ್ಲೇಖಿಸಿ ಗಂಭೀರ ಆರೋಪ ಮಾಡಿದ್ದಾನೆ. ಈ ಬಗ್ಗೆ ಮೂಡಲಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

ಬೆಳಗಾವಿ: DySP, ಪಿಎಸ್​ಐ ಹೆಸರು ಬರೆದಿಟ್ಟು ವ್ಯಕ್ತಿ ಸಾವು, ಕಾರಣವೇನು?
ರವೀಂದ್ರ ದಾನವ್ವಗೋಳ
Edited By:

Updated on: Jun 02, 2026 | 4:18 PM

ಬೆಳಗಾವಿ, (ಜೂನ್ 02): ವ್ಯಕ್ತಿಯೋರ್ವ DySP, ಪಿಎಸ್​ಐ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ. ಬೆಂಡಿಗೇರಿ ಗ್ರಾಮದಲ್ಲಿ ರವೀಂದ್ರ ದಾನವ್ವಗೋಳ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊಟ್ಟ ಸಾಲ ವಾಪಸ್ ಕೊಟ್ಟಿಲ್ಲ ಎಂದು ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ರವೀಂದ್ರ ಡೆತ್​​ ನೋಟ್​​ನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಪೊಲೀಸರ ಸಹ ಅನ್ಯಾಯ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದು, ಈ ಪ್ರಕರಣ ಸಂಚಲನ ಮೂಡಿಸಿದೆ.

ಮುಖ್ಯಾಂಶಗಳು

  • ಬೆಳಗಾವಿಯಲ್ಲಿ DySP, ಪಿಎಸ್​ಐ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ
  • ಬೆಂಡಿಗೇರಿ ಗ್ರಾಮದಲ್ಲಿ ರವೀಂದ್ರ ದಾನವ್ವಗೋಳ ನೇಣಿಗೆ ಶರಣು
  • ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಘಟನೆ
  • ನನಗೆ ಜೀವ ಬೆದರಿಕೆ ಇರುವುದರಿಂದ ಆತ್ಮಹತ್ಯೆ ಎಂದು ಉಲ್ಲೇಖ
  • ಡೆತ್​ನೋಟ್​ನಲ್ಲಿ ಹಲವರ ಹೆಸರು ಉಲ್ಲೇಖಿಸಿರುವ ಮೃತ ರವೀಂದ್ರ

ಆತ್ಮಹತ್ಯೆ ಮಾಡಿಕೊಂಡಿರುವ ರವೀಂದ್ರ, ಲಕ್ಷ್ಮಣ್ ಚಂದರಗಿ ಮತ್ತು ಭರಮಪ್ಪ‌ ಪೂಜಾರಿ ಎಂಬುವರಿಗೆ 8 ಲಕ್ಷ ರೂಪಾಯಿ ಸಾಲ ನೀಡಿದ್ದರು. ಆದ್ರೆ, ಈ ಹಣವನ್ನು ಲಕ್ಷ್ಮಣ್ ಚಂದರಗಿ ಮತ್ತು ಭರಮಪ್ಪ‌ ಪೂಜಾರಿ ವಾಪಸ್ ಕೊಟ್ಟಿಲ್ಲ. ಬದಲಾಗಿ ಹಣ ಕೇಳಿದ್ದಕ್ಕೆ ರವೀಂದ್ರಗೆ ಜೀವ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ನ್ಯಾಯ ಕೊಡಿಸಿ ಎಂದು ರವೀಂದ್ರ, ಪಿಎಸ್‌ಐ ಆನಂದ, ಹಿಂದಿನ ಡಿವೈಎಸ್​​ಪಿ ಮುಲ್ಲಾಗೆ ಮನವಿ ಮಾಡಿದ್ದು, ಪೊಲೀಸರು ಸಹ ಇದಕ್ಕೆ ಕ್ಯಾರೇ ಎಂದಿಲ್ಲ. ಅಲ್ಲದೇ ಪೊಲೀಸ ಸಹ ಬೆದರಿಕೆ ಹಾಕಿದ್ದಾರೆ ಎಂದು ರವೀಂದ್ರ ಆತ್ಮಹತ್ಯೆಗೆ ಮುನ್ನ ಡೆತ್​ ನೋಟ್​​ನಲ್ಲಿ ಬರೆದಿಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಮೂಡಲಗಿ ಠಾಣಾ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು. ಇನ್ನು ಮೃತ ರವೀಂದ್ರ ದಾನವ್ವಗೋಳ ಪತ್ನಿ ದೂರಿನ ಮೇರೆಗೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಡೆತ್​​ನೋಟ್​​ನಲ್ಲಿ ಡಿವೈಎಸ್ಪಿ ಹಾಗೂ ಪಿಎಸ್​​ಐ ಹೆಸರು ಉಲ್ಲೇಖಿಸಿ ಗಂಭೀರ ಆರೋಪ ಮಾಡಿದ್ದು, ಸಂಚಲ ಮೂಡಿಸಿದ್ದು, ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಿ ಇದರ ಸತ್ಯಾಸತ್ಯೆಯನ್ನು ಪತ್ತೆ ಮಾಡಬೇಕಿದೆ.

ಕರ್ನಾಟಕದ ಮ್ತತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Tue, 2 June 26

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us