ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು: ಮೇಯರ್ ಸ್ಥಾನಕ್ಕೂ ಕುತ್ತು

ಬೆಳಗಾವಿಯ ಮಹಾನಗರ ಪಾಲಿಕೆಯ ಮೇಯರ್ ಮತ್ತು ಒಬ್ಬ ಸದಸ್ಯರು ತಿನಿಸು ಕಟ್ಟೆಯಲ್ಲಿ ಮಳಿಗೆಗಳನ್ನು ಅಕ್ರಮವಾಗಿ ಪಡೆದ ಆರೋಪದ ಮೇಲೆ ಅವರ ಸದಸ್ಯತ್ವ ಅನರ್ಹಗೊಂಡಿದೆ. ಸಾಮಾಜಿಕ ಹೋರಾಟಗಾರರ ದೂರಿನ ಮೇರೆಗೆ ನಡೆದ ವಿಚಾರಣೆಯಲ್ಲಿ ಅವರ ಅಧಿಕಾರ ದುರ್ಬಳಕೆ ಸಾಬೀತಾಗಿದೆ. ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಅವರ ಸದಸ್ಯತ್ವವನ್ನು ರದ್ದುಗೊಳಿಸಿದ್ದಾರೆ. ಇದು ಮಹತ್ವದ ಬೆಳವಣಿಗೆಯಾಗಿದೆ.

ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು: ಮೇಯರ್ ಸ್ಥಾನಕ್ಕೂ ಕುತ್ತು
ಮೇಯರ್​ ಮಂಗೇಶ ಪವಾರ್, ಬೆಳಗಾವಿ ಮಹಾನಗರ ಪಾಲಿಕೆ
Updated By: ವಿವೇಕ ಬಿರಾದಾರ

Updated on: Jun 27, 2025 | 10:56 PM

ಬೆಳಗಾವಿ, ಜೂನ್​ 27: ಅಧಿಕಾರ ದುರ್ಬಳಕೆ ಮಾಡಿಕೊಂಡು ತಿನಿಸು ಕಟ್ಟೆಯಲ್ಲಿ ಮಳಿಗೆ ಪಡೆದ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಮಹತ್ವದ ಬೆಳವಣಿಗೆಯಾಗಿದೆ. ಬೆಳಗಾವಿ ಮಹಾನಗರ ಪಾಲಿಕೆಯ (Belagavi city Corporation) ಹಾಲಿ ಮೇಯರ್ ಹಾಗೂ ಓರ್ವ ಸದಸ್ಯನ ಸದಸ್ಯತ್ವ ಅನರ್ಹತೆ ಖಾಯಂ ಮಾಡಿ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

ನಗರದ ತಿನಿಸು ಕಟ್ಟೆಯಲ್ಲಿ ಪತ್ನಿಯರ‌ ಹೆಸರಿನ ಮೇಲೆ ಮಳಿಗೆ ಪಡೆದ ಆರೋಪವನ್ನು ಇಬ್ಬರು ಮಹಾನಗರ ಪಾಲಿಕೆ ಸದಸ್ಯರು ಎದುರಿಸುತ್ತಿದ್ದರು. ಬೆಳಗಾವಿ ದಕ್ಷಿಣ ಕ್ಷೇತ್ರದ ಮಹಾನಗರ ಪಾಲಿಕೆಯ ಇಬ್ಬರು ಸದಸ್ಯರುಗಳಾದ ವಾರ್ಡ್ ನಂ 41 ರ ಸದಸ್ಯ, ಮೇಯರ್​ ಮಂಗೇಶ ಪವಾರ್ ಹಾಗೂ 23 ರ ಸದಸ್ಯ ಜಯಂತ್ ಜಾಧವ್ ಮೇಲೆ ಆರೋಪ ಕೇಳಿಬಂದಿತ್ತು. ಅಧಿಕಾರ ದುರುಪಯೋಗ ಮಾಡಿಕೊಂಡ ಕುರಿತು ಸಾಮಾಜಿಕ ಹೋರಾಟಗಾರ ಸುಜೀತ್ ಮುಳುಗುಂದ ಪ್ರಾದೇಶಿಕ ಆಯುಕ್ತರಿಗೆ ದೂರು ಸಲ್ಲಿಸಿದ್ದರು.

ದೂರಿನ ಆಧಾರದ ಮೇಲೆ ಸುದೀರ್ಘ ವಿಚಾರಣೆ ನಡೆಸಿದ ಪ್ರಾದೇಶಿಕ ಆಯುಕ್ತ ಎಸ್​ಬಿ ಶೆಟ್ಟೆನ್ನವರ್ ಸದಸ್ಯತ್ವ ರದ್ದು ಮಾಡಿ ಆದೇಶ ಹೊರಡಿಸಿದ್ದರು. ತಮ್ಮ ಸದಸ್ಯತ್ವ ರದ್ದತಿಯನ್ನು ಪ್ರಶ್ನಿಸಿ ಇಬ್ಬರು ಮಹಾನಗರ ಪಾಲಿಕೆ ಸದಸ್ಯರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಮಧ್ಯೆ ಇಬ್ಬರು ಸದಸ್ಯರು ತಮ್ಮ ಸದಸ್ಯತ್ವ ರದ್ದತಿ ಖಂಡಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸರಕಾರಕ್ಕೆ ನಿರ್ದೇಶನ ನೀಡಿತ್ತು.

ಇದನ್ನೂ ಓದಿ
ಮಳೆ ಅಬ್ಬರ: ನಾಳೆ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!
ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಶಾಸಕ ರಾಜು ಕಾಗೆ ಹೊಸ ಬಾಂಬ್‌: ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ
ದೂದ್​ಗಂಗಾ, ವೇದಗಂಗಾ ಮತ್ತು ಹಿರಣ್ಯಕೇಶಿ ನದಿಗಳಲ್ಲೂ ಹೆಚ್ಚಿದ ನೀರು ಪ್ರಮಾಣ

ಇದನ್ನೂ ಓದಿ: ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ

ಅದರಂತೆ ನಗರಾಭಿವದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ವಿಚಾರಣೆ ನಡೆಸಿ ಈ ಇಬ್ಬರ ಸದಸ್ಯತ್ವವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಹಾನಗರ ಪಾಲಿಕೆ ಅಧಿನಿಯಮ 1976 ಸೆಕ್ಷನ್ 26 ರ ಅಡಿಯಲ್ಲಿ ಅದೇಶ ಹೊರಡಿಸಿದ್ದು‌ ಅಲ್ಲದೆ ವಾರ್ಡ್ ನಂಬರ್ 41 ಮತ್ತು ಮತ್ತು 23 ಎರಡೂ ಸದಸ್ಯತ್ವ ಸ್ಥಾನಗಳು ತೆರವಾಗಿವೆ ಎಂದು ಘೋಷಿಸಿದ್ದಾರೆ. ಇದರಿಂದ ಮಹಾನಗರ ಪಾಲಿಕೆ ಮೇಯರ್​ಗೆ ಅವರ ಸ್ಥಾನಕ್ಕೆ ಕುತ್ತು ಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ