AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಕರವೇ ಆಕ್ರೋಶ: ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದ ಸಿಎಂ!

ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ಎಂಇಎಸ್ ಹಮ್ಮಿಕೊಂಡಿದ್ದ ಕರಾಳ ದಿನದ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಎಂಇಎಸ್ ಪುಂಡಾಟಿಕೆಗೆ ಸಚಿವ ಸತೀಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸಿಎಂ ಡಿ.ಕೆ. ಶಿವಕುಮಾರ್ ಕಾನೂನು ಕೈಗೆತ್ತಿಕೊಳ್ಳದಂತೆ ಕನ್ನಡಿಗರಲ್ಲಿ ಮನವಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಕರವೇ ಆಕ್ರೋಶ: ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದ ಸಿಎಂ!
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಕರವೇ ಆಕ್ರೋಶ
ಈರಣ್ಣಾ ಬಸವಾ
| Edited By: |

Updated on:Nov 01, 2026 | 2:09 PM

Share

ಮುಖ್ಯಾಂಶಗಳು

  • ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನದ ರ‍್ಯಾಲಿಗೆ ಕರವೇ ಆಕ್ರೋಶ ವ್ಯಕ್ತಪಡಿಸಿದೆ.
  • ಎಂಇಎಸ್ ಅನ್ನು ಔಷಧಿ ಇಲ್ಲದೆ ವಾಸಿ ಮಾಡೋಣವೆಂದ ಸಚಿವ ಸತೀಶ್ ಜಾರಕಿಹೊಳಿ.
  • ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬೇಡಿ ಎಂದು ಸಿಎಂ ಡಿ.ಕೆ.ಶಿವಕುಮಾರ್ ಮನವಿ.

ಬೆಳಗಾವಿ, ನವೆಂಬರ್ 01: ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಡೆಸಲು ಯತ್ನಿಸಿದ ಕರಾಳ ದಿನ ಆಚರಣೆ ಮತ್ತು ಪುಂಡಾಟಿಕೆ ಗಡಿಭಾಗದಲ್ಲಿ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ. ಜಿಲ್ಲಾಡಳಿತದ ಅನುಮತಿ ಇಲ್ಲದೆ ರ‍್ಯಾಲಿ ನಡೆಸಲು ಯತ್ನಿಸಿದ ಎಂಇಎಸ್ ಕಾರ್ಯಕರ್ತರ ವಿರುದ್ಧ ಕರವೇ ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಕರವೇ ಕಾರ್ಯಕರ್ತರು ವಶಕ್ಕೆ

ಬೆಳಗಾವಿಯ ಗೋಗಟೆ ಸರ್ಕಲ್ ಬಳಿ ಜಿಲ್ಲಾಡಳಿತದ ಅನುಮತಿ ಇಲ್ಲದೇ ಕರಾಳ ದಿನದ ರ‍್ಯಾಲಿ ನಡೆಸಲು ಮುಂದಾದ ಎಂಇಎಸ್ ಪುಂಡರ ಕಡೆಗೆ ನುಗ್ಗಲು ಕರವೇ (ಶಿವರಾಮೇಗೌಡ ಬಣ) ಕಾರ್ಯಕರ್ತರು ಯತ್ನಿಸಿದರು. ಈ ವೇಳೆ ಕರವೇ ಮುಖಂಡ ವಾಜೀದ್ ಸೇರಿದಂತೆ 10ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಘಟನೆ ಕುರಿತು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, “ಎಂಇಎಸ್ ಸಂಘಟನೆಯನ್ನು ಯಾವುದೇ ಔಷಧಿ ಇಲ್ಲದೇ ವಾಸಿ ಮಾಡೋಣ” ಎಂದು ವ್ಯಂಗ್ಯವಾಡಿದ್ದಾರೆ. “ಈ ಹಿಂದೆ ಕರಾಳ ದಿನದಲ್ಲಿ 15 ರಿಂದ 20 ಸಾವಿರ ಜನರು ಸೇರುತ್ತಿದ್ದರು. ಆದರೆ ಈಗ ಅವರ ಸಂಖ್ಯೆ ನೂರಾರಕ್ಕೆ ಕುಸಿದಿದೆ. ಅವರ ಪ್ರಭಾವ ಸಂಪೂರ್ಣವಾಗಿ ಕ್ಷೀಣಿಸುತ್ತಿದೆ” ಎಂದು ಅವರು ಹೇಳಿದರು.

ಸಿಎಂ ಡಿ.ಕೆ.ಶಿವಕುಮಾರ್ ಮನವಿ

ಇತ್ತ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಸಮಾರಂಭದಲ್ಲಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬೆಳಗಾವಿ ಗಲಾಟೆ ಕುರಿತು ಡಿಜಿ-ಐಜಿಪಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಅವರು, “ನಮ್ಮ ನೆಲದಲ್ಲಿದ್ದ ಮೇಲೆ ಈ ಮಣ್ಣಿಗೆ ಗೌರವ ಕೊಡಬೇಕು. ಮರಾಠಿಗರಾಗಲಿ, ಎಂಇಎಸ್ ಅವರಾಗಲಿ ಈ ಭೂಮಿಯನ್ನು ಗೌರವಿಸಲೇಬೇಕು. ಅದೇ ರೀತಿ ಕನ್ನಡ ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಹೋರಾಟಗಾರರ ಮೇಲಿರುವ ಹಳೆಯ ಕೇಸ್‌ಗಳನ್ನು ವಾಪಸ್ ಪಡೆಯಲು ಫೈಲ್‌ಗಳು ಸಿದ್ಧವಾಗುತ್ತಿವೆ. ಈಗ ಮತ್ತೆ ಗಲಾಟೆ ಮಾಡಿದರೆ ಕೇಸ್ ವಾಪಸ್ ಪಡೆಯುವುದು ಕಷ್ಟವಾಗುತ್ತದೆ. ಸರ್ಕಾರ ಕನ್ನಡಿಗರ ಹಾಗೂ ಈ ನೆಲದ ರಕ್ಷಣೆಗೆ ಬದ್ಧವಾಗಿದೆ, ಎಲ್ಲರೂ ಸಹಕರಿಸಬೇಕು” ಎಂದು ಮನವಿ ಮಾಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:08 pm, Sun, 1 November 26

Follow Us
ಈರಣ್ಣಾ ಬಸವಾ
ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ