ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟ
ಮೂಲ ಬಿಜೆಪಿ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟಿಲ್ಲವೆಂದು ಕೆಲವರು ಕಿಡಿಕಾರಿದ್ದಾರೆ. ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ನಗರ ಬಿಜೆಪಿ ಕಾರ್ಯಕರ್ತರಿಂದ ಅಸಮಾಧಾನ ಸ್ಫೋಟಗೊಂಡಿದೆ.
ಬೆಳಗಾವಿ: ಸಪ್ಟೆಂಬರ್ 3 ರಂದು ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, 58 ವಾರ್ಡ್‌ಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಆಗಿದೆ. ಆದರೆ, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬೆಳಗಾವಿ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಕಾಂಗ್ರೆಸ್‌ನವರಿಂದ ಹಣ ಪಡೆದು ಬಿಜೆಪಿ ಟಿಕೆಟ್ ಹಂಚಿಕೆ ಮಾಡಲಾಗಿದೆ. ಮೂಲ ಬಿಜೆಪಿ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟಿಲ್ಲವೆಂದು ಕೆಲವರು ಕಿಡಿಕಾರಿದ್ದಾರೆ. ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ನಗರ ಬಿಜೆಪಿ ಕಾರ್ಯಕರ್ತರಿಂದ ಅಸಮಾಧಾನ ಸ್ಫೋಟಗೊಂಡಿದೆ.
ಆಗಸ್ಟ್ 25 ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಮಂಡ್ಯದಲ್ಲಿ ಆಗಸ್ಟ್ 25 ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಸಭೆಯನ್ನು ಉದ್ಘಾಟನೆ ನಡೆಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು, ಕೊವಿಡ್ 3ನೇ ಅಲೆಯ ಕುರಿತಾಗಿ ನಡೆದಿರುವ ತಯಾರಿ, ಪಕ್ಷದ ಸಂಘಟನೆ, ಬೆಳಗಾವಿ, ಕಲಬುರ್ಗಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳ ಚುನಾವಣೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳ ಬಗ್ಗೆ, ಮುಂದಿನ ಕಾರ್ಯಯೋಜನೆ, ವರದಿಗಳು ಹಾಗೂ ಮೋರ್ಚಾಗಳ ಚಟುವಟಿಕೆಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಚಿಹ್ನೆಯಡಿ ಸ್ಪರ್ಧೆ: ಸತೀಶ್ ಜಾರಕಿಹೊಳಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯು ಸಪ್ಟೆಂಬರ್ 3 ರಂದು ನಡೆಯಲಿದೆ. ಚುನಾವಣೆಯ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಎಲ್ಲಾ ವಾರ್ಡ್ಗಳಲ್ಲೂ ಕಾಂಗ್ರೆಸ್ ಪಕ್ಷದ ಚಿಹ್ನೆ ಮೇಲೆ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ. ಆದರೆ ಅಭ್ಯರ್ಥಿಗಳ ಆಯ್ಕೆ ಇನ್ನೂ ಅಂತಿಮವಾಗಿಲ್ಲ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಹೇಳಿದ್ದರು.
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ದಿನಾಂಕ ಸಪ್ಟೆಂಬರ್ 3 ಎಂದು ಘೋಷಣೆ ಆಗಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರ ಜತೆ ಟಿಕೆಟ್ ಆಕಾಂಕ್ಷಿಗಳು ಆಗಸ್ಟ್ 14ರಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದರು. ಬೆಳಗಾವಿಯ ಜಾಧವ್ನಗರದಲ್ಲಿರುವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭೇಟಿಯಾಗಿದ್ದರು. ಸಪ್ಟೆಂಬರ್ 3ರಂದು ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆಗೆ ಚುನಾವಣೆ ವಿಚಾರವಾಗಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ, ಪಕ್ಷದ ಚಿಹ್ನೆ ಮೇಲೆ ಸ್ಪರ್ಧೆ ಕುರಿತು ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.
ಇದನ್ನೂ ಓದಿ: ರಾಜ್ಯದ ಆರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ: ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಆದೇಶ
ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆ: ನಾಮಪತ್ರ ಸಲ್ಲಿಸಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗೆ ಹೃದಯಾಘಾತ
Published On - 9:21 pm, Mon, 23 August 21