ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಎಲ್ಲಾ ವಾರ್ಡ್​ಗಳಲ್ಲೂ ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಸ್ಪರ್ಧೆ: ಸತೀಶ್ ಜಾರಕಿಹೊಳಿ

Belagavi: ಎಲ್ಲಾ ವಾರ್ಡ್​​ಗಳಲ್ಲೂ ಕಾಂಗ್ರೆಸ್ ಪಕ್ಷದ ಚಿಹ್ನೆ ಮೇಲೆ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ. ಆದರೆ ಅಭ್ಯರ್ಥಿಗಳ ಆಯ್ಕೆ ಇನ್ನೂ ಅಂತಿಮವಾಗಿಲ್ಲ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಹೇಳಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಎಲ್ಲಾ ವಾರ್ಡ್​ಗಳಲ್ಲೂ ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಸ್ಪರ್ಧೆ: ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
Follow us
| Updated By: ganapathi bhat

Updated on:Aug 21, 2021 | 9:59 PM

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯು ಸಪ್ಟೆಂಬರ್ 3 ರಂದು ನಡೆಯಲಿದೆ. ಚುನಾವಣೆಯ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಎಲ್ಲಾ ವಾರ್ಡ್​​ಗಳಲ್ಲೂ ಕಾಂಗ್ರೆಸ್ ಪಕ್ಷದ ಚಿಹ್ನೆ ಮೇಲೆ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ. ಆದರೆ ಅಭ್ಯರ್ಥಿಗಳ ಆಯ್ಕೆ ಇನ್ನೂ ಅಂತಿಮವಾಗಿಲ್ಲ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಹೇಳಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ದಿನಾಂಕ ಸಪ್ಟೆಂಬರ್ 3 ಎಂದು ಘೋಷಣೆ ಆಗಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರ ಜತೆ ಟಿಕೆಟ್ ಆಕಾಂಕ್ಷಿಗಳು ಆಗಸ್ಟ್ 14ರಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದರು. ಬೆಳಗಾವಿಯ ಜಾಧವ್​ನಗರದಲ್ಲಿರುವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭೇಟಿಯಾಗಿದ್ದರು. ಸಪ್ಟೆಂಬರ್ 3ರಂದು ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆಗೆ ಚುನಾವಣೆ ವಿಚಾರವಾಗಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ, ಪಕ್ಷದ ಚಿಹ್ನೆ ಮೇಲೆ ಸ್ಪರ್ಧೆ ಕುರಿತು ಅಭಿಪ್ರಾಯ ಸಂಗ್ರಹಿಸಿ‌ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

ಬಳಿಕ, ಕಾಂಗ್ರೆಸ್ ಕಮಿಟಿ ಸಭೆಯಿದೆ. ಮಾಜಿ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ಮೂವರು ನಾಯಕರೊಂದಿಗೆ ಮಾತುಕತೆ ನಡೆಸಲಾಗುವುದು. ಆಗ ಯಾವ ರೀತಿ ಚುನಾವಣೆ ಮಾಡಬೇಕೆಂದು ತೀರ್ಮಾನ ಆಗಲಿದೆ. ಕಾರ್ಯಕರ್ತರ ಅಭಿಪ್ರಾಯದ ಬಳಿಕ ಕಾಂಗ್ರೆಸ್ ಪಕ್ಷ ಚಿಹ್ನೆ ಮೇಲೆ ಸ್ಪರ್ಧೆ ಮಾಡಬೇಕಾ ಬೇಡವಾ ಅನ್ನೋದು ತೀರ್ಮಾನ ಆಗಲಿದೆ ಎಂದು ಹೇಳಿದ್ದರು. ನನ್ನ ವೈಯಕ್ತಿಕ ನಿರ್ಧಾರದ ಮೇಲೆ ತೀರ್ಮಾನ ಮಾಡಲು ಆಗಲ್ಲ. ಸ್ಥಳೀಯ ಮುಖಂಡರ ಅಭಿಪ್ರಾಯದ ಮೇಲೆ ಕಮಿಟಿ ಅಂತಿಮ ತೀರ್ಮಾನ ಮಾಡಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದರು. ಇದೀಗ, ಚುನಾವಣೆಗೆ ಕಾಂಗ್ರೆಸ್ ಪಕ್ಷದ ಚಿಹ್ನೆಯಲ್ಲಿ ಸ್ಪರ್ಧಿಸಲಾಗುವುದು ಎಂದು ತಿಳಿಸಲಾಗಿದೆ.

ಕಳೆದ ಅವಧಿಯಲ್ಲೂ ಕಾಂಗ್ರೆಸ್​ಗೆ ಪಾಲಿಕೆಯಲ್ಲಿ ಹಿಡಿತವಿತ್ತು. ಈಗಲೂ ಹೆಚ್ಚಿನ ಸ್ಥಾನ ಗೆಲ್ಲಲು ಪ್ರಯತ್ನ ಮಾಡ್ತೀವಿ. ಕೊರೊನಾ ಮೂರನೇ ಅಲೆ ಇದೆ. ಡಿಸೆಂಬರ್ ವರೆಗೂ ಚುನಾವಣೆ ಬೇಡ ಎಂದು ಸರ್ಕಾರವೇ ಹೇಳಿತ್ತು. ಆದ್ರೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಏನೂ ಮಾಡಲು ಆಗಲ್ಲ. ಈ ಬಗ್ಗೆ ಚುನಾವಣಾ ಆಯೋಗ ಯೋಚನೆ ಮಾಡಬೇಕಿತ್ತು. ಈಗ ನಮಗೆ ಯಾವುದೇ ಆಯ್ಕೆಯಿಲ್ಲ ಎಂದು ಸತೀಶ್ ಜಾರಕಿಹೊಳಿ‌ ಹೇಳಿದ್ದರು.

ಇದನ್ನೂ ಓದಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮುಗಿಯದೇ ಬಿಜೆಪಿ ಶಾಸಕರು ಬೆಂಗಳೂರಿಗೆ ಬರುವಂತಿಲ್ಲ: ನಳಿನ್ ಕುಮಾರ್ ಕಟೀಲ್ ಖಡಕ್ ಸೂಚನೆ

ಡಿಸೆಂಬರ್​ ಅಧಿವೇಶನ ಸುವರ್ಣಸೌಧದಲ್ಲಿ ನಡೆಸುವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published On - 9:56 pm, Sat, 21 August 21